ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಡುತಿನಿ ಅರ್ಸೆಲರ್ ಮಿತ್ತಲ್ ಇಂಡಿಯಾ ಲಿ, ಉತ್ತಮ್ ಗಾಲ್ವಾ ಫೆರೋಸ್ ಕಂಪನಿ ಲಿ, ಹಾಗೂ ಮೆ.ಕರ್ನಾಟಕ ವಿಜಯನಗರ ಸ್ಟೀಲ್ಸ್ ಲಿಮಿಟೆಡ್ ಕಾರ್ಖಾನೆಗಳ ಆರಂಭ ಮತ್ತು ರೈತರ ಸಮಸ್ಯೆಗಳ ಬಗ್ಗೆ ಶಾಸಕರಾದ ತುಕಾರಾಂ ನೇತೃತ್ವದ ನಿಯೋಗದವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಚರ್ಚಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾತು:
ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡುವುದಿಲ್ಲ.
ಕಾರ್ಖಾನೆಗಳಿಗಾಗಿ ಭೂಸ್ವಾಧೀನ ಮಾಡಿಕೊಳ್ಳುವ ಸಂದರ್ಭದಲ್ಲಿ ದರ ನಿಗದಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಯು ಅನ್ಯಾಯವೆಸಗಿದ್ದರೆ ಅದನ್ನು ಕೂಡ ಪರಿಶೀಲಿಸಿ, ಸಮಸ್ಯೆ ಬಗೆಹರಿಸಲಾಗುವುದು.
ಅರ್ಸೆಲರ್ ಮಿತ್ತಲ್ ಕಾರ್ಖಾನೆಗಾಗಿ ನಡೆಸಿರುವ ಭೂಸ್ವಾಧೀನ ಕುರಿತಂತೆ ರೈತರಿಗೆ ನೀಡಿರುವ ಪರಿಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟಿನ ತೀರ್ಪಿನ ಬಗ್ಗೆ ಅಡ್ವೊಕೇಟ್ ಜನರಲ್ ಅವರ ಜೊತೆಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.
ಸಭೆಯಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ನಾಗೇಂದ್ರ, ಸಂಡೂರು ಶಾಸಕ ಇ.ತುಕಾರಾಂ, ಜಿಲ್ಲೆಯ ಶಾಸಕರುಗಳಾದ ಕಂಪ್ಲಿ ಗಣೇಶ್, ನಾ.ರಾ.ಭರತ್ ರೆಡ್ಡಿ, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಭೂಮಿ ಕಳೆದುಕೊಂಡ ರೈತ ಪ್ರತಿನಿಧಿಗಳು ಭಾಗವಹಿಸಿದ್ದರು.
0 Comments