ಚಿತ್ರದುರ್ಗ ಅ.13 ಅಕ್ಟೋಬರ್ 17 ರಿಂದ ವಿ.ವಿ. ಸಾಗರ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲು ಸಲಹಾ ಸಮಿತಿ ನಿರ್ಧಾರಸಕಾಯಿತು. ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವರಿ ಸಚಿವ ಡಿ.ಸುಧಾಕರ್ ಹಾಗೂ ವಿ ವಿ ಸಾಗರ ಜಲಾಶಯ ಸಲಹಾ ಸಮಿತಿ ಸದಸ್ಯರೊಂದಿಗೆ ಆಯೋಜಿದ್ದ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಿರ್ಧರಿಸಲಾಯಿತು.ಯೋಜನಾ ಮತ್ತು
ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ ಇಲಾಖೆಯ ಸಹಯೋಗದೊಂದಿಗೆ ಸಮರ್ಪಕವಾದ ನೀರು ನಿರ್ವಹಣೆ ಮಾಡಲು ಹಾಗೂ ನೀರು ಯಾವುದೇ ಕಾರಣಕ್ಕೆ ಪೋಲಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿ.ಪಿ.ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನಾಲೆಗಳಲ್ಲಿ ಅ.17 ನ.11 ರವರೆಗೆ ನೀರು ಹರಿಸುವಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಅತೀ ಕಡಿಮೆ ಮಳೆಯಾಗಿ, ಬರಗಾಲ ಪೀಡಿತವಾಗಿರುವುದರಿಂದ ಅಚ್ಚುಕಟ್ಟು
ವ್ಯಾಪ್ತಿಯಲ್ಲಿರುವ ತೋಟಗಾರಿಕೆ ಹಾಗೂ ಇತರೆ ಕೃಷಿ ಬೆಳೆಗಳಿಗೆ ನೀರು ಅವಶ್ಯವಾಗಿರುತ್ತದೆ ಎಂದು ಸಭೆಯಲ್ಲಿ
ಭಾಗವಹಿಸಿದ್ದ ಸಲಹಾ ಸಮಿತಿ ಸದಸ್ಯರುಗಳು ಹಾಗೂ ಅಧಿಕಾರಿಗಳು ಸಭೆಯಲ್ಲಿ ಗಮನ ಸೆಳೆದರು. ವಿವಿ.ಸಾಗರ ಜಲಾಶಯದಿಂದ
ಒಂದು ಹದದ ನೀರನ್ನು 30 ದಿನಗಳ ಕಾಲ ನಾಲೆಗಳಿಗೆ ಹರಿಸುವಂತೆ ಸಚಿವರು ಹಾಗೂ
ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ನೀರು ನಾಲೆಗಳಲ್ಲಿ ಹರಿಸುವುದರಿಂದ ನಾಲೆಯ ಅಕ್ಕಪಕ್ಕದ ಎಲ್ಲಾ
ಗ್ರಾಮಗಳ ಅಂತರ್ಜಲ ಮಟ್ಟ ಹೆಚ್ಚಾಗುತ್ತದೆ. ಅಲ್ಲದೇ ತೋಟಗಾರಿಕೆ ಬೆಳೆಗಳು ಹಾಗೂ ಅಲ್ಪ ಸ್ವಲ್ಪ ಒಣಗಿರುವ
ಬೆಳೆಗಳನ್ನು ಉಳಿಸಿಕೊಳ್ಳಬಹುದು ಎಂದು ಸಲಹಾ ಸಮಿತಿ ಸದಸ್ಯರು ಅಭಿಪ್ರಾಯಿಸಿದರು
ಸಭೆಯಲ್ಲಿ ನೀರಾವರಿ
ಸಲಹಾ ಸಮಿತಿ ಸದಸ್ಯರು, ನೀರಾವರಿ ಇಲಾಖೆ, ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು
ಪಾಲ್ಗೊಂಡಿದ್ದರು.
ಅದರಂತೆ, ಮಾನ್ಯ ಅಧ್ಯಕ್ಷರು ಹಾಗೂ ವಿ.ವಿ.ಸಾಗರ ನೀರಾವರಿ ಸಲಹಾ ಸಮಿತಿ ಚಿತ್ರದುರ್ಗ ರವರು ಹಾಗೂ
ಸಚಿವರು ಸಮ್ಮತಿಸಿ, ದಿನ:17.10.2023 ರಿಂದ 16.11.2023 ರವರೆಗೆ ನಾಲೆಗಳಿಗೆ ನೀರು ಹರಿಸುವಂತೆ ಸೂಚಿಸಿದರು. ಜಿಲ್ಲಾಧಿಕಾರಿ ಧೀವ್ಯಪ್ರಭು ಮಾತನಾಡಿ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಳ್ಳಿಗಳಿಗೆ ನಿರು ಹರಿಸುವ ಪೂರ್ವದಲ್ಲಿ ಮುಂಜಾಗ್ರತಾವಾಗಿ ಜನ ಜಾನುವಾರುಗಳಿಗೆ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ
ಎಚ್ಚರವಹಿಸಲು ವ್ಯಾಪಕವಾಗಿ ಜಾಗೃತಿ ಮೂಡಿಸಲು ಸೂಚಿಸಿದರು.
ಈ ಸಭೆಯಲ್ಲಿ ಭಾಗವಹಿಸಿದ ಸಲಹಾ ಸಮಿತಿ ಸದಸ್ಯರಾದ ಕೆ.ಟಿ.ತಿಪ್ಪೇಸ್ವಾಮಿ, .ಸಿದ್ದರಾಮಣ್ಣ .ಆರ್.ಗೌಡ.ರಾಮಕುಮಾರ್.ವಿಜಯಕುಮಾರ್.ಎ.ಎಂ. ಸಹಾಯಕ ಕಾರ್ಯಪಾಲಕ ಇಂಜಿನಿಯರ್, ವಿ.ವಿ.ಸಾಗರ ಉಪವಿಭಾಗ,ಲೋಕೇಶ್, ಹಿರಿಯ ಸಹಾಯಕ ನಿರ್ದೇಶಕರು . ತೋಟಗಾರಿಕಾ ಇಲಾಖೆ, ಹಿರಿಯೂರುಕಿರಣ್, ಸಹಾಯಕ ಕೃಷಿ ಅಧಿಕಾರಿಗಳು, ಹಿರಿಯೂರು, ಹಾಗೂನೀರಾವರಿ ಇಲಾಖೆ ಅಧಿಕಾರಿಗಳು, ಉಪಸ್ಥಿತರಿದ್ದರು.
ರೈತರಿಗೆ ಗುಡ್ ನ್ಯೂವ್ಸ್ ಅ17ರಿಂದ ನ 16 ರ ವರೆಗೆ ವಿ ವಿ ಸಾಗರದ ನಾಲೆಗೆ ನೀರು ಹರಿಸಲು ಸಲಹಾ ಸಮೀತಿ ಒಪ್ಪಿಗೆ..
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments