ರೈತರಿಗೆ ರಿಯಾಯಿತಿ ದರದಲ್ಲಿ ವಿತರಿಸುವ ಸ್ಪ್ರಿಂಕ್ಲರ್ ಹಾಗೂ ತಾಡಪಾಲು ಘಟಕಗಳ ಮಾರ್ಗಸೂಚಿಯಲ್ಲಿ ಮಾರ್ಪಾಡು ಮಾಡಲು ಮನವಿ : ಬಿ.ಓ.ಶಿವಕುಮಾರ್

by | 22/06/24 | ಪ್ರತಿಭಟನೆ


ಹಿರಿಯೂರು :
ರೈತರ ಹಿತದೃಷ್ಟಿಯಿಂದ ತಮ್ಮ ಕೃಷಿ ಇಲಾಖೆ ವತಿಯಿಂದ ಸರ್ಕಾರದ ಸಹಾಯಧನದಲ್ಲಿ ರೈತರಿಗೆ ವಿತರಿಸುತ್ತಿರುವ ಸ್ಪ್ರಿಂಕ್ಲರ್ ಸೆಟ್ ಹಾಗೂ ತಾಡಪಾಲು ವಿತರಣೆಯಲ್ಲಿನ ಮಾರ್ಗಸೂಚಿಗಳನ್ನು ಬದಲಾವಣೆ ಅಥವಾ ಮಾರ್ಪಾಡು ಮಾಡಬೇಕು ಎಂಬುದಾಗಿ ರಾಜ್ಯ ರೈತಸಂಘದ ತಾಲೂಕು ಅಧ್ಯಕ್ಷರಾದ ಬಿ.ಓ.ಶಿವಕುಮಾರ್ ಮನವಿ ಮಾಡಿದ್ದಾರೆ.
ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮುಂಭಾಗದಲ್ಲಿ ರಾಜ್ಯ ರೈತಸಂಘದ ನೇತೃತ್ವದಲ್ಲಿ ರೈತರಿಗೆ ರಿಯಾಯಿತಿ ದರದಲ್ಲಿ ವಿತರಿಸುವ ಸ್ಪ್ರಿಂಕ್ಲರ್ ಹಾಗೂ ತಾಡಪಾಲು ಘಟಕಗಳ ಮಾರ್ಗಸೂಚಿಯಲ್ಲಿ ಮಾರ್ಪಾಡು ಮಾಡಲು ಒತ್ತಾಯಿಸಿ ಸಹಾಯಕ ಕೃಷಿ ನಿರ್ದೇಶಕ ಅಧಿಕಾರಿಗಳ ಮೂಲಕ ಮಾನ್ಯ ರಾಜ್ಯ ಕೃಷಿ ಸಚಿವರಿಗೆ ಮನವಿಪತ್ರ ಸಲ್ಲಿಸಿ, ನಂತರ ಅವರು ಮಾತನಾಡಿದರು.
ಸ್ಪಿಂಕ್ಲರ್ ಸೆಟ್ ಇದುವರೆಗೂ ಇತರೆ ವರ್ಗದ ರೈತರಿಗೆ ಒಂದು ಹೆಕ್ಟೇರ್ ವರೆಗೆ ಒಂದು ಸ್ಪ್ರಿಂಕ್ಲರ್ ಸೈಟ್ ಘಟಕ ಮಾತ್ರ ಕೊಡಲಾಗುತ್ತಿದೆ. ಆದರೆ ಒಂದು ಹೆಕ್ಟೇರ್ ಗಿಂತ ಹೆಚ್ಚು ಜಮೀನು ಇರುವ ರೈತರಿಗೆ ಅನಾನುಕೂಲವಾಗುತ್ತದೆ. ಆದ್ದರಿಂದ ಸದರಿ ದೊಡ್ಡ ರೈತರಿಗೆ ಅಷ್ಟೇ ದರದಲ್ಲಿ ಮತ್ತೊಂದು ಹೆಚ್ಚುವರಿ ಸ್ಪಿಂಕ್ಲರ್ ಘಟಕ ನೀಡುವಂತೆ ಮನವಿ ಮಾಡಲಾಗಿದೆ ಎಂದರಲ್ಲದೆ,
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಒಮ್ಮೆ ಇಲಾಖೆಯಿಂದ ಸ್ಪಿಂಕ್ಲರ್ ಸೈಟ್ ಘಟಕ ಪಡೆದುಕೊಂಡರೆ ಮುಂದಿನ ಏಳು ವರ್ಷಗಳವರೆಗೆ ಮತ್ತೊಂದು ಸ್ಪಿಂಕ್ಲರ್ ತೆಗೆದುಕೊಳ್ಳಲು ಅವಕಾಶವಿರುವುದಿಲ್ಲ.ಸದರಿ ಕಾಲಮಿತಿಯನ್ನು ಏಳು ವರ್ಷಗಳಿಂದ ಮೂರು ವರ್ಷಗಳಿಗೆ ಕಡಿಮೆ ಮಾಡಬೇಕು,
ಅಲ್ಲದೆ ಇತರೆ ವರ್ಗದ ರೈತರು ಒಮ್ಮೆ ಇಲಾಖೆಯಿಂದ ಸ್ಪಿಂಕ್ಲರ್ ಸೈಟ್ ಘಟಕ ಪಡೆದುಕೊಂಡರೆ ಜೀವನ ಪರ್ಯಂತ ಮತ್ತೊಂದು ಸ್ಪಿಂಕ್ಲರ್ ಸೆಟ್ ತೆಗೆದುಕೊಳ್ಳಲು ಅವಕಾಶವಿರುವುದಿಲ್ಲ. ಆದ್ದರಿಂದ ಸದರಿ ಕಾಲಮಿತಿಯನ್ನು ಸಹ ಮಾರ್ಪಾಡು ಮಾಡಲು ವಿನಂತಿಸಲಾಗಿದೆ ಎಂಬುದಾಗಿ ಅವರು ತಿಳಿಸಿದರು.
ರೈತರು ಒಮ್ಮೆ ಇಲಾಖೆಯಿಂದ ತಾಡಪಾಲು ತೆಗೆದುಕೊಂಡರೆ ಮುಂದಿನ ಮೂರು ವರ್ಷಗಳವರೆಗೆ ಮತ್ತೊಮ್ಮೆ ತಾಡಪಾಲು ತೆಗೆದುಕೊಳ್ಳಲು ಅವಕಾಶವಿರುವುದಿಲ್ಲ. ಆದ ಕಾರಣ ಸದರಿ ಕಾಲಾಮಿತಿಯನ್ನು ಸಹ ಮಾರ್ಪಾಡು ಮಾಡಬೇಕು ಎಂಬುದಾಗಿ ವಿನಂತಿಸಿದರು.
ಈ ಸಂದರ್ಭದಲ್ಲಿ ರಾಜ್ಯ ರೈತಸಂಘದ ತಾಲೂಕು ಅಧ್ಯಕ್ಷರಾದ ಬಿ.ಓ.ಶಿವಕುಮಾರ್, ತಾಲ್ಲೂಕು ಯುವ ಅಧ್ಯಕ್ಷರಾದ ಆರ್. ಚೇತನ್ ಯಳನಾಡು, ರೈತ ಮುಖಂಡರಾದ ಕೆ.ಟಿ. ತಿಪ್ಪೇಸ್ವಾಮಿ , ಬಿ.ಡಿ.ಶ್ರೀನಿವಾಸ್, ಎಸ್.ರಾಧ, ಎಸ್.ಕೆ. ಬಸವರಾಜು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page