ರೈತರು ಲಾಭದಾಯಕವಾದ ಬೆಳಕಿನ ಬೇಸಾಯ ಪದ್ಧತಿ ಅಳವಡಿಸಿಕೊಳ್ಳಿರಿ :ಲೇಖಕಟಿ.ಜಿ.ಎಸ್.ಅವಿನಾಶ್ ಸಲಹೆ

by | 22/02/23 | ಸುದ್ದಿ

ಹಿರಿಯೂರು :
ಪ್ರಕೃತಿಯಲ್ಲಿ ಸಹಜವಾಗಿ ಲಭ್ಯವಿರುವ ಸೂರ್ಯನ ಕಿರಣಗಳನ್ನು ಸದ್ಬಳಕೆ ಮಾಡಿಕೊಂಡು ಕೃಷಿ ಚಟುವಟಿಕೆಗಳನ್ನು ನಡೆಸಿದಲ್ಲಿ ರೈತರು ಲಾಭದಾಯಕ ಕೃಷಿ ಮಾಡಬಹುದಾಗಿದೆ ಎಂಬುದಾಗಿ ಮೈಸೂರಿನ ಕೃಷಿಕ ಹಾಗೂ ಲೇಖಕ ಟಿ.ಜಿ.ಎಸ್.ಅವಿನಾಶ್ ಸಲಹೆ ನೀಡಿದರು.
ನಗರದ ಪ್ರವಾಸಿಮಂದಿರದ ಸಭಾಂಗಣದಲ್ಲಿ ಉಳುಮೆ ಪ್ರತಿಷ್ಠಾನ, ಹಿರಿಯ ರೈತರು ಮತ್ತು ತಜ್ಞರ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಬೆಳಕಿನ ಬೇಸಾಯ ಕೃಷಿ ಪದ್ಧತಿಯ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಬೆಳಕಿನ ಬೇಸಾಯ ಪದ್ಧತಿ ಅಳವಡಿಸಿಕೊಳ್ಳುವುದರಿಂದ ಒಂದು ಎಕರೆ ಜಮೀನಿನಲ್ಲಿ ವರ್ಷಕ್ಕೆ 22 ಸಾವಿರ ಕೆ.ಜಿ.ಯಷ್ಟು ಆಹಾರ ಧಾನ್ಯ ಉತ್ಪಾದಿಸಬಹುದು, ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಆಹಾರ ಧಾನ್ಯ ಬೆಳೆದಲ್ಲಿ ಕೃಷಿಯಲ್ಲಿನ ನಷ್ಟ ತಪ್ಪಿಸಬಹುದು ಎಂಬುದಾಗಿ ಮಾಹಿತಿ ನೀಡಿದರು.
ಗುಣಮಟ್ಟದ ಆಹಾರ ಧಾನ್ಯಗಳ ಉತ್ಪಾದನೆಗೆ ಕನಿಷ್ಠ 15 ರಿಂದ 35 ಡಿಗ್ರಿ ತಾಪಮಾನ ಬೇಕು, ಆದರೆ ಪ್ರಸ್ತುತ ತಾಪಮಾನ 40 ಡಿಗ್ರಿವರೆಗೆ ಹೆಚ್ಚಿದ್ದು, ಇಂತಹ ಸಮಯದಲ್ಲಿ ಬೆಳಕಿನ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿ ಪಡೆಯುವ ಅಗತ್ಯವಿದೆ. ಇದರಿಂದ ಸರಾಸರಿ ಪ್ರತಿ ರೈತ ಮಾಸಿಕ 15 ಸಾವಿರದವರೆಗೆ ಆದಾಯ ಪಡೆಯಬಹುದು ಎಂದರಲ್ಲದೆ,
ಇದನ್ನು ಸಾಧ್ಯ ಮಾಡಿಕೊಳ್ಳಲು ಕೃಷಿ ಭೂಮಿಯನ್ನು ಆಹಾರ ಬನವನ್ನಾಗಿ ಪರಿವರ್ತಿಸಿಕೊಳ್ಳಬೇಕು ಒಂದು ಎಕರೆಯಲ್ಲಿ ಕನಿಷ್ಠ 30 ವಿವಿಧ ಪ್ರಭೇದದ 1500 ಮರಗಿಡಗಳು ಇರುವಂತೆ ನೋಡಿಕೊಂಡಲ್ಲಿ ಪ್ರಕೃತಿದತ್ತವಾಗಿ ರೋಗರುಜಿನಗಳನ್ನು ತಡೆಯುವ ಜೊತೆಗೆ ಭೂಮಿಯ ಫಲವತ್ತತೆ ಕಾಪಾಡಿಕೊಳ್ಳಬಹುದು
ಈ ಮೂಲಕ ಜೀವಾಣುಗಳ ವೈವಿಧ್ಯತೆ ಸಂರಕ್ಷಣೆಗೊಂಡು, ಸಸ್ಯ ಪೋಷಕಾಂಶಗಳನ್ನು ಪ್ರಕೃತಿದತ್ತವಾಗಿ ಪಡೆಯಬಹುದಾಗಿದೆ, ಪ್ರಮುಖವಾಗಿ ಟ್ರೆಂಚಸ್ ವಿಧಾನದಲ್ಲಿ ಪ್ರತಿವರ್ಷವೂ ಪ್ರತಿ ಎಕರೆಯಿಂದ ಸುಮಾರು 5 ಲಕ್ಷ ಲೀಟರ್ ನೀರನ್ನು ಭೂಮಿಯಲ್ಲಿ ಇಂಗಿಸಬಹುದು, ರೈತರು ಹೆಚ್ಚಾಗಿ ಮಳೆಯ ನೀರನ್ನೇ ಬಳಸಿ ಕೃಷಿ ಚಟುವಟಿಕೆ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂಬುದಾಗಿ ಹೇಳಿದರು.
ಪ್ರಸ್ತುತ ವರ್ಷ ಕಾರ್ಯಾಗಾರ ನಡೆಸುವುದರ ಜೊತೆಗೆ ರಾಜ್ಯದ 15 ಜಿಲ್ಲೆಗಳಲ್ಲಿ ಒಂದೊಂದು ಎಕರೆ ಪ್ರದೇಶದಲ್ಲಿ ಆಹಾರಬನದ ಮಾದರಿ ತೋಟವನ್ನು ನಿರ್ಮಿಸುವ ಗುರಿ ಹೊಂದಿದ್ದು, ಮಾದರಿ ತೋಟ ನಿರ್ಮಿಸಲು ಹಲವು ರೈತರು ಆಸಕ್ತಿ ತೋರಿಸಿದ್ದಾರೆ ಎಂಬುದಾಗಿ ಅವರು ಹೇಳಿದರು.
ಈ ಕಾರ್ಯಕ್ರಮದಲ್ಲಿ ರೈತಮುಖಂಡರಾದ ಕೆ.ಸಿ.ಹೊರಕೇರಪ್ಪ, ಕಸವನಹಳ್ಳಿ ರಮೇಶ್, ದಸ್ತಗೀರ್ ಸಾಬ್, ಬ್ಯಾಡರಹಳ್ಳಿ ಶಿವಕುಮಾರ್, ಆರ್.ಚೇತನ್, ಸೇರಿದಂತೆ ಅನೇಕ ರೈತಮುಖಂಡರು ಉಪಸ್ಥಿತರಿದ್ದರು.

Latest News >>

ನಗರದ ನಗರಸಭೆಗೆ ಜಿಲ್ಲಾಧಿಕಾರಿ ವೆಂಕಟೇಶ್ ಭೇಟಿ ನಗರಸಭೆಯ ಆಯುಕ್ತರು,ಅಧಿಕಾರಿಗಳೊಂದಿಗೆ ಸಭೆ

ಹಿರಿಯೂರು: ಇದೀಗ ಪ್ರಸ್ತುತ ತಿಂಗಳು ಮಳೆಗಾಲ ಆಗಿರುವುದರಿಂದ ಹಲವಾರು ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದ್ದು, ನಗರದ ಜನರ ಉತ್ತಮ...

ಲಕ್ಕೇನಹಳ್ಳಿ: ಸ್ವಾಮಿತ್ವ ಯೋಜನೆಯ ಕುರಿತು ಗ್ರಾಮ ಸಭೆ ಗ್ರಾಮ ಪಂಚಾಯಿತಿಗೆ ಒಳಪಡುವ ಆಸ್ತಿಗಳಿಗೆ ಪಿ.ಆರ್.ಕಾರ್ಡ್ (ಹಕ್ಕುಪತ್ರ) ನೀಡುವ ಯೋಜನೆ

ಹಿರಿಯೂರು ಜೂ.21: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆ.ಜಿ.ಹಳ್ಳಿ ಹೋಬಳಿಯ ದಿಂಡಾವರ ಗ್ರಾಮ ಪಂಚಾಯ್ತಿ ವ್ಯಾಪ್ತಿಗೊಳಪಡುವ...

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಶೇ.75ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿ

ಚಿತ್ರದುರ್ಗ ಜೂನ್.21: ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ಹಿರಿಯೂರು ತಾಲ್ಲೂಕಿನಲ್ಲಿ...

10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅಭಿಮತ ಮಾನಸಿಕ ಸದೃಢತೆ ಹಾಗೂ ಒತ್ತಡ ಮುಕ್ತ ಜೀವನಕ್ಕೆ ಯೋಗ ಸಹಕಾರಿ

ಚಿತ್ರದುರ್ಗ ಜೂನ್21: ಯೋಗ ದೈಹಿಕವಾಗಿ ಶಕ್ತಿ ಹಾಗೂ ಚೈತನ್ಯ ತುಂಬುವದರ ಜೊತೆಗೆ ಮಾನಸಿಕವಾಗಿ ಸಹ ಸದೃಢರನ್ನಾಗಿಸುತ್ತದೆ. ಇಂದಿನ ನಿತ್ಯದ...

ವಿದ್ಯಾರ್ಥಿಗಳು ಪ್ರತಿ ದಿನ ಯೋಗಾಸನ ಮಾಡುವುದು ಅಭ್ಯಾಸ ಮಾಡಿಕೊಳ್ಳಿ ಶ್ರೀ ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಂವೈಟಿ ಸ್ವಾಮಿ.

ನಾಯಕನಹಟ್ಟಿ:: ವಿದ್ಯಾರ್ಥಿಗಳು ಪ್ರತಿಯೊಬ್ಬರು ಯೋಗಾಸನ ಮಾಡುವುದು ರೂಡಿಸಿಕೊಂಡಾಗ ಮಾತ್ರ ಆರೋಗ್ಯವಂತರಾಗಿರಲು ಸಾಧ್ಯ. ಎಂದು ಶ್ರೀ...

ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: -ಮುಖ್ಯಮಂತ್ರಿ ಸಿದ್ದರಾಮಯ್ಯ

ಬಳ್ಳಾರಿ,ಜೂ.20 ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸೋಲಿನ ಹೊಣೆಯನ್ನು ನಾನೇ ಹೊರುವೆ: ಪರಾಜಿತ ಅಭ್ಯರ್ಥಿ ಬಿ ಎನ್ ಚಂದ್ರಪ್ಪ 

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯು ಕಳೆದ ಹತ್ತು ವರ್ಷಗಳಿಂದ ನನ್ನ ಕರ್ಮಭೂಮಿಯಾಗಿದ್ದು ಇಲ್ಲಿನ ಜನತೆ ಮನೆ ಮಗನಂತೆ ನೋಡಿದ್ದು ಒಂದು ಬಾರಿ...

ಜಾತಿನಿಂದನೆ, ದೌರ್ಜನ್ಯಗಳಂತಹ ಆರೋಪಗಳನ್ನು ಪರಿಶಿಷ್ಟರು ಕೈಬಿಟ್ಟಾಗ ಮಾತ್ರ ಸಮಾಜದಲ್ಲಿಬೆಳೆಯಲು ಸಾಧ್ಯ: ನೂತನ ಸಂಸದರಾದ ಗೋವಿಂದ ಕಾರಜೋಳ

ಹಿರಿಯೂರು: ಜಾತಿ ನಿಂದನೆ ಮತ್ತು ದಲಿತ ದೌರ್ಜನ್ಯಗಳಂತಹ ವೃತಾ ಆರೋಪಗಳನ್ನು ಪರಿಶಿಷ್ಟರು ಕೈ ಬಿಟ್ಟಾಗ ಮಾತ್ರ ಸಮಾಜದಲ್ಲಿ ಬೆಳೆಯಲು ಸಾಧ್ಯ...

ಚಿಕ್ಕಾಲಘಟ್ಟ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಶೀಘ್ರ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯ ಭರವಸ -ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ

ಚಿತ್ರದುರ್ಗ. ಜೂನ್.19: ಚಿಕ್ಕಾಲಘಟ್ಟ ಗ್ರಾಮದ ಬಹುದಿನಗಳ ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಈಗಾಗಲೇ ಜಾಗ...

ಜನಪ್ರತಿನಿಧಿಗಳು ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸೋಣ – ಸಂಸದ ಗೋವಿಂದ ಕಾರಜೋಳ

ಚಿತ್ರದುರ್ಗ. ಜೂನ್19: ಚುನಾಯಿತ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಉತ್ತಮವಾಗಿ ಕಾರ್ಯನಿರ್ವಹಿಸಿ ಕೇಂದ್ರ ಹಾಗೂ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page