ರೈತರ ಒಟ್ಟು ಜಮೀನಿನ ಸಂಪೂರ್ಣ ವಿಸ್ತೀರ್ಣ ನಮೂದಿಸಿರೈತರು ಸ್ವಯಂ ಮುಂದೆ ಬಂದು ಮಾಹಿತಿ ನಮೂದಿಸಲು ಕರೆ ನೀಡಿ ಆಧಾರ್ ಆರ್ಟಿಸಿ ಲಿಂಕ್ ಮಾಡಲು ಕರೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರವಹಿಸಲು ಕಂದಡಯ ಸಚಿವ ಕೃಷ್ಣಬೈರೇಗೌಡ ಸೂಚನೆ

by | 21/11/23 | ಕರ್ನಾಟಕ


ಬಳ್ಳಾರಿ,ನ.21:
ಜಿಲ್ಲೆಯಲ್ಲಿ ಈಗಾಗಲೇ ಬೆಳೆ ಸಮೀಕ್ಷೆ ಮುಗಿದಿದೆ. ಆದರೆ, ಶೇ.33 ರಷ್ಟು ರೈತರ ಒಟ್ಟು ಜಮೀನಿನ ವಿಸ್ತೀರ್ಣದ ಮಾಹಿತಿ ನಿಖರವಾಗಿ ನಮೂದಿಸಲಾಗಿಲ್ಲ. ಅಧಿಕಾರಿಗಳ ಇಂತಹ ನಡೆಯಿಂದ ರೈತರಿಗೆ ಅನ್ಯಾಯವಾಗಲಿದೆ” ಎಂದು ಅಧಿಕಾರಿಗಳನ್ನು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಸಿದ್ದಾರೆ.
ಅವರು, ನಗರದ ಜಿಲ್ಲಾಡಳಿತದ ಸಭಾಂಗಣದಲ್ಲಿ ಮಂಗಳವಾರ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಬರ ಪರಿಹಾರದ ಹಣ ರೈತರಿಗೆ ಆನ್‍ಲೈನ್ ಮೂಲಕವೇ ತಲುಪಲಿದೆ. “ಫ್ರೂಟ್ಸ್” ತಂತ್ರಾಂಶದಲ್ಲಿ ರೈತರ ಸಂಪೂರ್ಣ ಜಮೀನಿನ ಒಟ್ಟು ವಿಸ್ತೀರ್ಣ ನಮೂದಿಸಿದರೆ ಮಾತ್ರ ಅವರಿಗೆ ನ್ಯಾಯಯುತ ಪರಿಹಾರ ತಲುಪಲಿದೆ” ಎಂದು ತಿಳಿಸಿದರು.
ಗ್ರಾಮ ಆಡಳಿತ ಅಧಿಕಾರಿಗೆ ಆತನ ಅಧಿಕಾರದ ವ್ಯಾಪ್ತಿಯಲ್ಲಿ ಯಾವ ರೈತನಿಗೆ ಎಲ್ಲಿ.. ಎಷ್ಟು ಎಕರೆ ಜಮೀನಿದೆ? ಎಂಬ ಕನಿಷ್ಟ ಮಾಹಿತಿ ಇದ್ದೇ ಇರುತ್ತದೆ. ಅದನ್ನು ಮತ್ತೆ ರೈತನಲ್ಲಿ ಕೇಳಿ ತಂತ್ರಾಂಶದಲ್ಲಿ ನಮೂದಿಸಬೇಕು. ಅಧಿಕಾರಿಗಳು ರೈತರ ಜಮೀನಿನ ಸಂಪೂರ್ಣ ವಿಸ್ತೀರ್ಣವನ್ನು ನಮೂದಿಸದಿದ್ದರೆ ರೈತರಿಗೆ ನ್ಯಾಯಯುತ ಪರಿಹಾರ ನೀಡಲು ಸಾಧ್ಯವಿಲ್ಲ. ಇದರಿಂದ ರೈತರಿಗೆ ಅನ್ಯಾಯವಾಗಲಿದೆ ಎಂದು ತಾಲ್ಲೂಕುಗಳ ತಹಶೀಲ್ದಾರರಿಗೆ ಹೇಳಿದರು.
ಮಳೆ ಇಲ್ಲದ ಕಾರಣ ರೈತರು ಬೆಳೆ ಕೈಸೇರದೆ ಸಂಕಷ್ಟಕ್ಕೀಡಾಗಿದ್ದಾರೆ. ಇಂತಹ ಸಂದರ್ಭದಲ್ಲಿ ನಾವು ರೈತರ ಪರ ನಿಲ್ಲಬೇಕಾಗಿದೆ. ಹೀಗಾಗಿ ರೈತರಿಗೆ ನ್ಯಾಯಯುತ ಪರಿಹಾರ ತಲುಪಿಸಲು ಮುಂದಿನ ವಾರದ ಒಳಗಾಗಿ ಅಧಿಕಾರಿಗಳು ತ್ವರಿತ ಗತಿಯಲ್ಲಿ ರೈತರ ಜಮೀನಿನ ನಿಖರ ಮಾಹಿತಿಯನ್ನು ನಮೂದಿಸಿ ಎಂದರು.
*ಪಹಣಿ ಜೊತೆಗೆ ಆಧಾರ್ ಲಿಂಕ್ ಮಾಡಲು ಕರೆ:*
ರಾಜ್ಯದಲ್ಲಿ ಶೇ.70 ರಷ್ಟು ಸಣ್ಣ ರೈತರಿದ್ದಾರೆ. ಆದರೆ, ಕೇಂದ್ರ ಸರ್ಕಾರದ ಹಳೆಯ ಅಂಕಿ-ಅಂಶಗಳ ಪ್ರಕಾರ ರಾಜ್ಯದಲ್ಲಿನ ಸಣ್ಣ ರೈತರ ಸಂಖ್ಯೆ ಶೇ.44 ಮಾತ್ರ. ಇದರಿಂದ ರಾಜ್ಯಕ್ಕೆ ಲಭ್ಯವಾಗುವ ಬರ ಪರಿಹಾರದಲ್ಲೂ ಅನ್ಯಾಯವಾಗುತ್ತಿದೆ. ಹೀಗಾಗಿ ಗ್ರಾಮ ಲೆಕ್ಕಿಗರು ಮುಂದಿನ ದಿನಗಳಲ್ಲಿ ರೈತರ ಪಹಣಿಗಳನ್ನು ಆಧಾರ್ ನಂಬರ್ ಜೊತೆಗೆ ಲಿಂಕ್ ಮಾಡಿದರೆ ರಾಜ್ಯದ ಸಣ್ಣ ರೈತರ ಅಂಕಿ-ಸಂಖ್ಯೆ ನಿಖರವಾಗಿ ತಿಳಿಯಲಿದೆ. ಇದನ್ನೇ ಕೇಂದ್ರದ ಮುಂದಿಟ್ಟು ರಾಜ್ಯದ ಹಕ್ಕನ್ನು ಮಂಡಿಸಬಹುದು. ಇದಕ್ಕೆ ಸಹಕಾರಿಯಾಗುವಂತೆ ಶೀಘ್ರದಲ್ಲೇ ಆಪ್ ಒಂದನ್ನೂ ಅಭಿವೃದ್ಧಿ ಪಡಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
*ಕುಡಿಯುವ ನೀರು-ಮೇವಿನ ಬಗ್ಗೆ ಎಚ್ಚೆತ್ತುಕೊಳ್ಳಿ:*
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದರೇ, ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು, ಈಗಲೇ ಟೆಂಡರ್ ಮಾಡಿ ಮುಂಜಾಗ್ರತೆ ವಹಿಸಬೇಕು. ಇದೇ ಕಾರಣಕ್ಕೆ ಪ್ರತೀ ತಾಲೂಕಿನಲ್ಲೂ ಶಾಸಕರ ನೇತೃತ್ವದಲ್ಲಿ ಟಾಸ್ಕ್ ಫೆÇೀರ್ಸ್ ಅನ್ನೂ ರಚಿಸಲಾಗುವುದು ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಟ್ಯಾಂಕರ್ ಒಂದೇ ಪರಿಹಾರವಲ್ಲ. ಬದಲಿಗೆ ಖಾಸಗಿ ಬೋರ್‍ವೆಲ್‍ಗಳನ್ನು ಬಾಡಿಗೆಗೆ ಪಡೆದು ನೀರಿನ ಸಮಸ್ಯೆ ಎಲ್ಲೇ ಕಂಡರೂ 24 ಗಂಟೆಯ ಒಳಗಾಗಿ ನೀರು ಪೂರೈಸುವಂತಿರಬೇಕು. 15 ದಿನಗಳಲ್ಲಿ ಬಿಲ್‍ಗೆ ಹಣ ಪಾವತಿ ಮಾಡಬೇಕು. ಮೇವಿನÀ ವಿಚಾರದಲ್ಲೂ ಮುಂಜಾಗ್ರತಾ ತಯಾರಿ ಮಾಡಿಕೊಳ್ಳಬೇಕು. ರಾಜ್ಯದ ಮೇವನ್ನು ಪಕ್ಕದ ರಾಜ್ಯಗಳಿಗೆ ಕಳ್ಳಸಾಗಾಣೆ ಮಾಡುವುದನ್ನು ನಿಬರ್ಂಧಿಸಲು ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಅವರು ತಿಳಿಸಿದರು.
*25 ವರ್ಷಗಳಿಂದ ಬಾಕಿ ಉಳಿದ ಬಗರ್ ಹುಕುಂ ಅರ್ಜಿ:*
ವಿಲೇವಾರಿಯಾಗದ ಬಗರ್‍ಹುಕುಂ ಅರ್ಜಿಗಳ ಬಗ್ಗೆ ಗಮನ ಸೆಳೆದ ಸಚಿವ ಕೃಷ್ಣ ಬೈರೇಗೌಡ ಅವರು, “ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಅಕ್ರಮ-ಸಕ್ರಮಗೊಳಿಸಿ ಸಾಗುವಳಿ ಚೀಟಿ ನೀಡಲು ಕೋರಿ ಬಳ್ಳಾರಿಯಲ್ಲಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ನಮೂನೆ 53ರ ಅಡಿಯಲ್ಲೇ ಸುಮಾರು 25,000 ಅರ್ಜಿಗಳು ಬಾಕಿ ಇವೆ. 1998ರಲ್ಲೇ ನಮೂನೆ 53 ರ ಅರ್ಜಿ ಕರೆಯಲಾಗಿತ್ತು. 25 ವರ್ಷ ಆದ್ರೂ ಈ ಅರ್ಜಿಗಳು ಇನ್ನೂ ವಿಲೇವಾರಿ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ನಮೂನೆ 57 ರ ಅರ್ಜಿಯೂ ಸೇರಿ ಜಿಲ್ಲೆಯಲ್ಲಿ ಒಟ್ಟಾರೆ 1 ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಮುಂದಿನ ಒಂದು ವರ್ಷದಲ್ಲಿ ಈ ಎಲ್ಲಾ ಅರ್ಜಿಗಳೂ ವಿಲೇವಾರಿ ಆಗಬೇಕು. ಪ್ರತಿ ವಾರದ ಪ್ರಗತಿಯು ಆಪ್‍ನಲ್ಲಿ ಅಪ್‍ಡೇಟ್ ಆಗಬೇಕು. ಇಲ್ಲದಿದ್ದರೆ ತಹಶೀಲ್ದಾರ್ ಗಳಿಗೆ ನೋಟೀಸ್ ನೀಡಲಾಗುತ್ತದೆ ಎಂದು ಅಧಿಕಾರಿಗಳನ್ನು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಸಿದರು.
*ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಆಪ್:*
ನಮೂನೆ 50, 53, 57ರ ಅಕ್ರಮ ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೂ ಸಹ ಸಾಗುವಳಿ ಚೀಟಿ ನೀಡುವುದು ಅಸಾಧ್ಯ. ಹೀಗಾಗಿ ಬಗರ್ ಹುಕುಂ ತಂತ್ರಾಶದ ಮೂಲಕ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದು ನ್ಯಾಯಸಮ್ಮತವಾಗಲಿದೆ. ಅಲ್ಲದೆ, ಶೀಘ್ರ ಪ್ರಕ್ರಿಯೆಗೂ ಈ ಆಪ್ ಸಹಕಾರಿಯಾಗಲಿದೆ. ಶೀಘ್ರದಲ್ಲೇ ಈ ಆಪ್ ಅಧಿಕಾರಿಗಳ ಕೈಸೇರಲಿದೆ. ಈ ಆಪ್ ಸಹಾಯದೊಂದಿಗೆ ಅಧಿಕಾರಿಗಳು ತ್ವರಿತಗತಿಯಲ್ಲಿ ಬಹರ್ ಹುಕುಂ ಅರ್ಜಿ ವಿಲೇವಾರಿಗೊಳಿಸಬಹುದು ಎಂದು ತಿಳಿಸಿದರು.
*ಕಂದಾಯ ಗ್ರಾಮ ಅಂತಿಮ ಪಟ್ಟಿ ಸಿದ್ದತೆಗೆ ವಾರದ ಗಡುವು:*
ಕಂದಾಯ ಇಲಾಖೆಗೆ ಸೇರದ ಕಾರಣ ಕಂದಾಯೇತರ ಜನವಸತಿ ನಿವಾಸಿಗಳು ಅಭಿವೃದ್ಧಿ ಯೋಜನೆಗಳಿಂದ ವಂಚಿತರಾಗುತ್ತಿದ್ದಾರೆ. ಇದೇ ಕಾರಣಕ್ಕೆ ಕರ್ನಾಟಕ ಭೂ ಕಂದಾಯ ಕಾಯಿದೆಗೆ ತಿದ್ದುಪಡಿ ತಂದು ತಾಂಡ-ಗೊಲ್ಲರಹಟ್ಟಿ ಸೇರಿದಂತೆ ಪ್ರದೇಶಗಳನ್ನು ಕಂದಾಯ ಗ್ರಾಮ ಎಂದು ಘೋಷಿಸಲು ಅನುವು ಮಾಡಿಕೊಡಲಾಗಿತ್ತು.


ಸಾರ್ವಜನಿಕರ 30 ವರ್ಷಗಳ ಬೇಡಿಕೆಗೆ ಅನುಗುಣವಾಗಿ 2013ರ ಕಾಂಗ್ರೆಸ್ ಸರ್ಕಾರ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹತ್ವದ ನಿರ್ಧಾರ ತೆಗದುಕೊಂಡಿದ್ದರು. ಆದರೆ, ಬಳ್ಳಾರಿಯಲ್ಲಿ ಈ ಸಂಬಂಧ ಸಮಾಧಾನಕರ ಕೆಲಸ ಆಗದಿರುವುದು ವಿಷಾಧನೀಯ. ಹೀಗಾಗಿ ಬಳ್ಳಾರಿಯಲ್ಲಿ ಶೀಘ್ರದಲ್ಲಿ ಕಾನೂನು ಪ್ರಕಾರ ಕಂದಾಯ ಗ್ರಾಮ ಘೋಷಿಸಿ ಹಕ್ಕುಪತ್ರ ನೀಡಿ ಎಂದರು ಸೂಚಿಸಿದರು.
ಜಿಲ್ಲೆಯಲ್ಲಿ ಒಟ್ಟು 73 ಕಂದಾಯ ಗ್ರಾಮಗಳು ರಚನೆಯಾಗಬೇಕಿತ್ತು. ಆದರೆ, ಈ ಪೈಕಿ 14 ಗ್ರಾಮಗಳನ್ನು ಮಾತ್ರ ಈವರೆಗೆ ಕಂದಾಯ ಗ್ರಾಮಗಳಾಗಿ ಘೋಷಿಸಲು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಹಾಗಾದರೆ ಉಳಿದ ಜನರ-ಗ್ರಾಮಗಳ ಕತೆ ಏನು? ಅವರು ಬಡವರಲ್ವ? ಅವರಿಗೂ ಸರ್ಕಾರದ ಸೌಲಭ್ಯಗಳು ತಲುಪುವುದು ಬೇಡ್ವಾ? ಎಂದು ಕಿಡಿಕಾರಿದ ಸಚಿವರು,
ಇದು ಬಡವರ ಕೆಲಸ. ಅಧಿಕಾರಿಗಳು ದಯವಿಟ್ಟು ಮಾನವೀಯತೆಯಿಂದ ಕಾರ್ಯನಿರ್ವಹಿಸಬೇಕು. ಹೀಗಾಗಿ ಮುಂದಿನ ಒಂದು ವಾರದಲ್ಲಿ ಯಾವೆಲ್ಲಾ ಗ್ರಾಮಗಳನ್ನು ಕಂದಾಯ ಗ್ರಾಮಗಳೆಂದು ಘೋಷಿಸಬಹುದು ಎಂದು ಇಲಾಖೆಗೆ ಪಟ್ಟಿ ಕೊಡಿ. ಜನವರಿ 15 ರ ಒಳಗಾಗಿ ಎಲ್ಲರಿಗೂ ಹಕ್ಕುಪತ್ರ ನೀಡಿ ಎಂದು ಗಡುವು ನೀಡಿದರು.
*ಒತ್ತುವರಿ ತೆರವುಗೊಳಿಸಿ ಸರ್ಕಾರಿ ಜಮೀನು ಉಳಿಸಲು ಕರೆ:*
ಸರ್ಕಾರಿ ಭೂ ಒತ್ತುವರಿ ತೆರವಿನ ಬಗ್ಗೆಯೂ ಗಮನ ಸೆಳೆದ ಸಚಿವ ಕೃಷ್ಣ ಬೈರೇಗೌಡ ಅವರು, “ಭೂ ಒತ್ತುವರಿ ವಿಚಾರದಲ್ಲಿ ಬಳ್ಳಾರಿ ಬೆಂಗಳೂರಿನ ನಂತರದ ಸ್ಥಾನದಲ್ಲಿದೆ. ಸರ್ಕಾರಿ ಭೂ ಒತ್ತುವರಿಯನ್ನು ತೆರವುಗೊಳಿಸಲು ಸಿಎಂ ಸಿದ್ದರಾಮಯ್ಯ ಸಹ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಆದರೂ, ಅಧಿಕಾರಿಗಳು ಈ ಬಗ್ಗೆ ಕ್ರಮ ಜರುಗಿಸದಿರಲು ಕಾರಣವೇನು?” ಎಂದು ಅಸಮಾಧಾನ ಹೊರಹಾಕಿದರು.
ಅಲ್ಲದೆ, ಇನ್ನಾದರೂ ಅಧಿಕಾರಿಗಳು ವಾರದಲ್ಲಿ ಒಂದು ದಿನ ಭೂ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಬೇಕು. ಹಾಗೆಂದು ದಶಕಗಳಿಂದ ಸಾಗುವಳಿ ಮಾಡುತ್ತಿರುವ ಬಡ ರೈತರ ಮೇಲೆ ನಿಮ್ಮ ದರ್ಪ ತೋರಿಸಬೇಡಿ ಎಂದು ಅವರು ಕಿವಿಮಾತು ಹೇಳಿದರು.
*ಹೈಕೋರ್ಟ್ ಕೇಸ್‍ಗಳ ಬಗ್ಗೆ ಇಷ್ಟು ತಾತ್ಸಾರವೇಕೆ?:*
ಬಳ್ಳಾರಿ ಜಿಲ್ಲೆ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಒಟ್ಟು 382 ಪ್ರಕರಣಗಳಿವೆ. ಈ ಪೈಕಿ 237 ಪ್ರಕರಣಗಳಲ್ಲಿ ತೆಗೆದುಕೊಂಡಿರು ಕ್ರಮ ಶೂನ್ಯ. ತಹಶೀಲ್ದಾರರು ನ್ಯಾಯಾಲಯದಲ್ಲಿ ಕನಿಷ್ಟ ವಕಾಲತ್ತನ್ನೂ ಸಹ ಸಲ್ಲಿಸಿಲ್ಲ ಎಂದು ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದರು.
ಬಳ್ಳಾರಿ ಜಿಲ್ಲೆಯಿಂದ ಅಧಿಕ ಸಂಖ್ಯೆಯ ಪ್ರಕರಣಗಳು ಹೈಕೋರ್ಟ್ ನಲ್ಲಿವೆ. ಆದರೆ, ತಹಶಿಲ್ದಾರರು ಹಾಗೂ ಎಸಿಗಳು ಈ ಬಗ್ಗೆ ಯಾವುದೇ ಕ್ರಮ ಜರುಗಿಸಿಲ್ಲ.ಪರಿಣಾಮ ಹೈಕೋರ್ಟ್ ಕಂದಾಯ ಇಲಾಖೆಯನ್ನು ತರಾಟೆಗೆ ತೆಗೆದುಕೊಳ್ಳುತ್ತಿದೆ. ನೀವು ಮಾಡುವ ಕೆಲಸಕ್ಕೆ ಸರ್ಕಾರದ ಜಮೀನು ಖಾಸಗಿಯವರ ಪಾಲಾಗಲು ನಾವು ಸಹಿ ಹಾಕಬೇಕ? ಎಂದು ಅವರು ಕಿಡಿಕಾರಿದರು.
ತಹಶಿಲ್ದಾರರು ಈಗಲಾದರೂ ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು, ಹೈಕೋರ್ಟ್ ನಲ್ಲಿರುವ ಎಲ್ಲಾ ಪ್ರಕರಣಗಳಲ್ಲೂ ವಕಾಲತ್ತು ಸಲ್ಲಿಸಬೇಕು, ಮೂರು ತಿಂಗಳಲ್ಲಿ ಪ್ರಗತಿ ಕಾಣದಿದ್ದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳನ್ನು ಎಚ್ಚರಿಸಿದರು.
*ಇ-ಆಫೀಸ್ ಅನುಷ್ಠಾನ, ಸಚಿವರ ತೀವ್ರ ಅಸಮಾಧಾನ!*
ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲೂ ಇ-ಆಫೀಸ್ ಬಳಸುತ್ತಿದ್ದಾರೆ. ಆದರೂ, ಬಳ್ಳಾರಿ ತಾಲೂಕು ಕಚೇರಿಗಳಲ್ಲಿ ಇ-ಆಫೀಸ್ ಬಳಸುತ್ತಿಲ್ಲ. ಹಾಗಾದ್ರೆ ಸಚಿವರ ಮಾತಿಗೆ ಬೆಲೆ ಇಲ್ವ? ನಮ್ಮ ಸೂಚನೆಗಳನ್ನು ಯಾರೂ ಪಾಲಿಸೋದಿಲ್ವ?” ಎಂದು ಸಚಿವರು ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದರು.
ಬಳ್ಳಾರಿ ತಾಲೂಕು ಕಚೇರಿಯಲ್ಲೇ ಈವರೆಗೆ ಇ-ಆಫೀಸ್‍ನಲ್ಲಿ ಕೇವಲ 17 ಕಡತಗಳನ್ನು ಮಾತ್ರ ರಚಿಸಲಾಗಿದೆ ಎಂದು ಆಕ್ರೋಶ ಹೊರಹಾಕಿದ ಸಚಿವರು, ತಹಶೀಲ್ದಾರರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಅಲ್ಲದೇ ಮುಂದಿನ ದಿನಗಳಲ್ಲಿ ಎಲ್ಲಾ ಕಡತಗಳ ವಿಲೇವಾರಿಯೂ ಇ-ಆಫೀಸ್ ಮೂಲಕವೇ ನಡೆಯಬೇಕು, ಇಲ್ಲದಿದ್ದರೆ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
*ದಾಖಲೆ ಕೊಠಡಿ ಪರಿಶೀಲಿಸಿದ ಸಚಿವ ಬೈರೇಗೌಡ:*
ಕಂದಾಯ ಪ್ರಗತಿ ಪರಿಶೀಲನಾ ಸಭೆಗೆ ಮುನ್ನವೇ ಸಚಿವ ಕೃಷ್ಣ ಬೈರೇಗೌಡ ಅವರು, ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿನ ಸರ್ಕಾರಿ ಅಭಿಲೇಖಾಲಯ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು.
1860 ನೇ ಇಸವಿಯ ಇನಾಮು ಪತ್ರಗಳನ್ನು ವೀಕ್ಷಿಸಿದ ಅವರು, ರೆಕಾರ್ಡ್ ರೂಂನಲ್ಲಿ ಶತಮಾನಗಳ ಹಳೆಯ ಕಡತಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೈಸ್ ಮಾಡುತ್ತಿರುವ ಬಗ್ಗೆ ಮೆಚ್ಚುಗೆ ಸೂಚಿಸಿದರು.
ಸಭೆಯಲ್ಲಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಕಂದಾಯ ಆಯುಕ್ತರಾದ ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಸೇರಿದಂತೆ ಎಲ್ಲಾ ತಾಲ್ಲೂಕು ತಹಶೀಲ್ದಾರರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
——-

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page