ರೈತರ ಖಾತೆಗಳಲ್ಲಿನ ಹಣವನ್ನು ಸಾಲಕ್ಕೆ ಜಮಾ ಮಾಡಿದರೆ ಬ್ಯಾಂಕ್ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ: ತಹಶೀಲ್ದಾರ್ ರೆಹಾನ್ ಪಾಷ.

by | 02/01/24 | ಜನಧ್ವನಿ


ಚಳ್ಳಕೆರೆ: ನಗರದ ತಾಲೂಕು ಕಚೇರಿಯಲ್ಲಿ ತಹಸಿಲ್ದಾರ್ ರೆಹನ್ ಪಾಷಾ ನೇತೃತ್ವದಲ್ಲಿ ರೈತರ ಹಾಗೂ ಬ್ಯಾಂಕ್ ಅಧಿಕಾರಿಗಳ ಸಭೆ ನಡೆಯಿತು.

ಈ ವೇಳೆ ಮಾತಾಡಿದ ರೈತ ಮುಖಂಡ ರೆಡ್ಡಿ ಹಳ್ಳಿ ವೀರಣ್ಣ ತಾಲೂಕಿನಲ್ಲಿ ಮಳೆ ಬಾರದೆ ಬರಗಾಲದ ಪರಿಸ್ಥಿತಿ ಆವರಿಸಿದ್ದು ಸರ್ಕಾರವೇ ಚಳ್ಳಕೆರೆ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿದ್ದರು ಸಹ ಬ್ಯಾಂಕ್ ಅಧಿಕಾರಿಗಳು ರೈತರ ಬೆಳೆ ಸಾಲಗಳಿಗೆ ನೋಟಿಸ್ ಜಾರಿ ಮಾಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.


ಮುಂದುವರೆದು ಮಾತನಾಡುತ್ತಾ ರೈತರ ಖಾತೆಗಳಿಗೆ ಸರ್ಕಾರದ ಯೋಜನೆಗಳ ಹಣ ಬಂದಿದ್ದರು ಆ ಹಣವನ್ನು ಸಾಲದ ಖಾತೆಗೆ ಜಮಗೊಳಿಸಿ ಖಾತೆಗಳನ್ನು ನಿಷ್ಕ್ರಿಯಗೊಳಿಸುತ್ತಿದ್ದಾರೆ ಇದರಿಂದಾಗಿ ರೈತರು ತಮ್ಮ ಜೀವನವನ್ನು ನಡೆಸಲು ಕಷ್ಟಕರವಾಗುತ್ತಿದೆ ರೈತ ಮಹಿಳೆಯರು ತಮ್ಮ ದಿನ ನಿತ್ಯದ ಜೀವನವನ್ನು ಸಾಗಿಸಲು ಖಾಸಗಿ ಸಂಸ್ಥೆಗಳ ಸಂಘಗಳಲ್ಲಿ ಸಾಲವನ್ನು ಪಡೆದಿರುತ್ತಾರೆ ಆ ಹಣವು ಖಾತೆಗಳಿಗೆ ಜಮಾ ಆಗುತ್ತಿದ್ದಂತೆ ಆ ಹಣವನ್ನು ಸಹ ಸಾಲಕ್ಕೆ ಜಮೆ ಮಾಡಿಕೊಳ್ಳುವುದು ಸರಿಯಲ್ಲ ಇಂತಹ ಕ್ರಮಗಳನ್ನು ಬ್ಯಾಂಕ್ ಅಧಿಕಾರಿಗಳು ಇನ್ನು ಮುಂದೆ ಅನುಸರಿಸಕೂಡದು ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಬ್ಯಾಂಕುಗಳ ಮುಂದೆ ರೈತರು ಧರಣಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರೈತ ತಿಪ್ಪಾರೆಡ್ಡಿ ಮಾತನಾಡಿ ನಗರದಲ್ಲಿ ಖಾಸಗಿ ಕಂಪ್ಯೂಟರ್ ಸೆಂಟರ್ ಗಳಲ್ಲಿ ಜಾತಿ ಪ್ರಮಾಣ ಪತ್ರ ಪಹಣಿ ಪಡೆಯಲು ರೈತರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದು ಇದಕ್ಕೆ ತಾಲೂಕು ಆಡಳಿತ ಕಡಿವಾಣ ಹಾಕಬೇಕು ಎಫ್ ಐ ಡಿ ಮಾಡಿಸಲು ಹೋದಾಗ ಪಿತ್ರಾರ್ಜಿತ ಪಹಣಿಗಳಲ್ಲಿ ಬದಲಾವಣೆ ಆಗದಿದ್ದ ಸಂದರ್ಭದಲ್ಲಿ ಲೋಪದೋಷಗಳು ಕಂಡುಬಂದಿರುವುದರಿಂದ ಎಫ್ ಐ ಡಿ ಮಾಡಿಸಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ತ್ವರಿತ ಗತಿಯಲ್ಲಿ ಇಂತಹ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.

ತಹಶೀಲ್ದಾರ್ ರೆಹಾನ್ ಪಾಷಾ ಮಾತನಾಡಿ ತಾಲೂಕಿನಲ್ಲಿ ಬರದ ಪರಿಸ್ಥಿತಿ ಇರುವುದರಿಂದ ಬ್ಯಾಂಕ್ ಅಧಿಕಾರಿಗಳು ಯಾವುದೇ ಕಾರಣಕ್ಕೂ ರೈತರ ಮನೆ ಬಾಗಿಲಿಗೆ ನೋಟಿಸ್ ಅಂಟಿಸಿ ಬರುವುದು ಅಥವಾ ಪೋಸ್ಟ್ಗಳ ಮೂಲಕ ಕಳುಹಿಸುವುದು ಮಾಡಬಾರದು ಈ ರೀತಿಯಾಗಿ ಕಂಡುಬಂದರೆ ಬ್ಯಾಂಕುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ರೈತರು ಬೆಳೆ ಪರಿಹಾರ ಪಡೆಯಲು ತಕ್ಷಣವೇ ಎಫ್ ಐ ಡಿ ಮಾಡಿಸಬೇಕು ಎಫ್ ಐ ಡಿ ಮಾಡಿಸಿದಲ್ಲಿ ಸರ್ಕಾರ ಘೋಷಣೆ ಮಾಡಿರುವ 2000 ಬರ ಪರಿಹಾರ ಹಣವು ನೇರವಾಗಿ ಖಾತೆಗೆ ಜಮಾ ಆಗಲಿದೆ ತಕ್ಷಣವೇ ಎಫ್ ಐ ಡಿ ಮಾಡಿಸಿ ಸರ್ಕಾರದ ಯೋಜನೆಯನ್ನು ಪಡೆದುಕೊಳ್ಳಬೇಕು ಈಗಾಗಲೇ ತಾಲೂಕಿನಲ್ಲಿ ಸುಮಾರು 75,000 ರೈತರು ಎಫ್ ಐಡಿ ಮಾಡಿಸಿದ್ದು ಬಾಕಿ ಉಳಿದಿರುವ ರೈತರು ಕೂಡಲೇ ಎಫ್ ಐ ಡಿ ಮಾಡಿಸಿ ಅನುಕೂಲ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರೈತರ ಸಮಸ್ಯೆಗಳನ್ನು ಆಲಿಸಿದ ಬ್ಯಾಂಕ್ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸುವುದಾಗಿ ಭರವಸೆ ನೀಡಿದರು

ಈ ವೇಳೆ ರೈತ ಮುಖಂಡರಾದ ಸುರೇಶ್ ರಾಜಣ್ಣ ಶ್ರೀಕಂಠ ಮೂರ್ತಿ ಹನುಮಂತಪ್ಪ ತಿಪ್ಪಾರೆಡ್ಡಿ ಯರ್ರಿಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page