ರೈತರ ಜಮೀನುಗಳಿಗೆ ಹೋಗುವ ದಾರಿ ಯಾವುದಯ್ಯ..? ಎಂಬಂತಾಗಿದ್ದು ದುರಸ್ಥಿ ಭಾಗ್ಯ ಕಲ್ಪಿಸುವರೇ..

by | 14/06/24 | ಜನಧ್ವನಿ


ಚಳ್ಳಕೆರೆ : ರೈತರ ಹೊಲಗಳಿಗೆ ಹೋಗುವ ರಸ್ತೆಗಳಿಗೆ ಗಿಡ‌ಗಂಟೆಗಳು ಬೆಳೆದು ಜೀವದ ಭಯದಲ್ಲಿ ಹಗಲು ರಾತ್ರಿ‌ಸಂಚರಿಸುವ ಅನಿವಾರ್ಯತೆ ಇದೆ.
ಹೌದು ಇದು ತಾಲೂಕಿನ ಗೋಪನಹಳ್ಳಿ ಗ್ರಾಮದ
ಕಾಪರಹಳ್ಳಿ ಕ್ರಾಸ್‌ನ ಮಾಳವ್ವರ ನಾಗರಾಜಪ್ಪನ ಜಮೀನಿನಿಂದ‌ಗುಂಗಜ್ಜರ ಶಾಂತಣ್ಣ ಇವರ ಹೊಲದವರೆಗೆ ರಸ್ತೆಯ ಅಕ್ಕ-‌ಪಕ್ಕ ಗಿಡಗಂಟೆ, ಬಳ್ಳಿ ರಸ್ತೆಗೆ ಹಬ್ಬಿಕೊಂಡಿರುವ
ಜತೆಗೆರಸ್ತೆಒತ್ತುವರಿಯಾಗಿರುವುದರಿಂದ ರೈತರು ಬೆಳೆದ
ಧವಸ ದಾನ್ಯಗಳನ್ನು ಮನೆಗೆ ಸಾಗಿಲು ಹಾಗೂ ದಿನ ನಿತ್ಯಕೃಷಿ ಚಟುವಟಿಕೆಗೆ ಹೋಗಲು ಹಾಗೂ ರೈತರು ಜಮೀನಲ್ಲೇ ಮನೆ ಕಟ್ಟಿಕೊಂಡು ವಾಸಮಾಡುವ ಕುಟುಂಬಗಳು ರಾತ್ರಿ.ವೇಳೆ ಸಂಚರಿಸಲು‌ಸಾಧ್ಯವಾಗುತ್ತಿಲ್ಲ..ರಸ್ತೆಯ ಎರಡು ಬದಿಯಲ್ಲಿ ಗಿಡಗಳು ರಸ್ತೆಗೆ ಹಬ್ಬಿಕೊಂಡಿರುವುದರಿಂದ
ವಿಷದ ಜಂತುಗಳ ಹಾವಳಿ ರಸ್ತೆಯಲ್ಲಿ ರಾಜರೋಷವಾಗಿ ಸಂಚರಿಸುತ್ತಿವೆ.
ಸ್ವಲ್ಪ ಎಚ್ಚರ ತಪ್ಪಿದರೂ ಕಚ್ಚಿಸಿಕೊಂಡು ಜೀವ ಹಾನಿ ಸಂಭವಿಸುವುದೇ‌ಹೆಚ್ಚು. ಮಳೆಗೆ ರಸ್ತೆಯೂ ಸಹ ಕೊರೆದು ಕೊರಕಲಾಗಿದ್ದು,‌ರೈತರ ಎತ್ತಿನ ಬಂಡಿಗಳು, ಟ್ರ್ಯಾಕ್ಟರ್‌ಗಳು ಸಹ ಸಂಚರಿಸಲು‌ಸಾಧ್ಯವಾಗುತ್ತಿಲ್ಲ. ಸುಮಾರು 15 ವರ್ಷಗಳಿಂದಲೂ ಇದೇ ಸ್ಥಿತಿಯಲ್ಲಿದ್ದು, ರಸ್ತೆ ಅಭಿವೃದ್ಧಿಗೆ ಯಾರೂ ಮುಂದಾಗುತ್ತಿಲ್ಲ
ಎಂದು ರೈತರು ಆರೋಪಿದ್ದಾರೆ.


ಕಳೆದ ಕಾಂಗ್ರೆಸ್ ಸರಕಾರದಲ್ಲಿ ಸಿದ್ದರಾಮಯ್ಯ
ಮುಖ್ಯಮಂತ್ರಿಯಾದ ಅವಧಿಯಲ್ಲಿ ನರೇಗಾ
ಯೋಜನೆಯಡಿಯಲ್ಲಿ ನಮ್ಮ ಹೊಲ ನಮ್ಮ ದಾರಿ ಎಂಬ
ಗ್ರಾಮೀಣ ಭಾಗದ ರೈತರ ಹೊಲಗಳಿಗೆ ಸಂಪರ್ಕ ಕಲ್ಪಿಸುವ
ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿತ್ತು, ಆದರೆ ಈಗಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದ ನಾಗರಾಜಪ್ಪ
ಜಮೀನಿನಿಂದ ಗುಂಗಜ್ಜರ ಶಾಂತಣ್ಣನವರ ಜಮೀನಿನ ತನಕ ರೈತರ ಹೊಲಗಳಿಗೆ ಹೋಗುವ ರಸ್ತೆಗೆ ಗಿಡಗಂಟೆಗಳು ಚಾಚಿಪೊದೆಯಂತಾಗಿರುವುದು.ಕೆಲವು ತಾಂತ್ರಿಕ ಕಾರಣಗಳಿಂದ ಈ ಯೋಜನೆಯನ್ನು
ನಿಲ್ಲಿಸಿರುವುದರಿಂದ ಅಕಾಲಿಕ ಮಳೆಗೆ ಸಿಲುಕಿ ಗ್ರಾಮೀಣಭಾಗದ ಬಹುತೇಕ ರೈತರ ಹೊಲಗಳಿಗೆ ಹೋಗುವುದಕ್ಕೆ ರಸ್ತೆಗಳುಗಿಡಗಂಟೆಗಳ ಪೊದೆಯಲ್ಲಿ ಕಣ್ಮರೆಯಾಗಿರುವಹೊಲಗಳಿಗೆ ಸಮರ್ಪಕ ರಸ್ತೆಗಳಿಲ್ಲದ ಪರಿಣಾಮ, ರೈತರಿಸಂಚರಿಸಲು ಮತ್ತು ಕೃಷಿ ಉತ್ಪನ್ನಗಳನ್ನು ಮುಖ್ಯ ರಸ್ತೆಗೆಸಾಗಿಸುವುದಕ್ಕೆ ತೀವ್ರ ತೊಂದರೆ ಅನುಭವಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು
ಗ್ರಾಮೀಣ ಭಾಗದ ರೈತರ ಹೊಲಗಳಿಗೆ ಹೋಗುವ ರಸ್ತೆಗಳಅಭಿವೃದ್ಧಿಗೆ ಮುಂದಾಗುವರೇ ಕಾದು ನೋಡ ಬೇಕಿದೆ.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page