ಹಿರಿಯೂರು :
ತಾಲ್ಲೂಕಿನ ವಾಣಿವಿವಿಲಾಸ ಸಾಗರ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಅಂತರ್ಜಲ ಪ್ರಮಾಣವೂ ಹೆಚ್ಚಾಗಿದೆ, ಅದಕ್ಕಾಗಿ ರೈತರು ತಮ್ಮ ಜಮೀನಿನಲ್ಲಿ ಅಡಿಕೆ, ತೆಂಗು, ಶೇಂಗಾ ಬೆಳೆಗಳನ್ನು ಬೆಳೆಯುತ್ತಿದ್ದು, ಇಂತಹ ಸಂದರ್ಭದಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಆಗದಿದ್ದರೆ ರೈತರ ಬೆಳೆಗಳು ಹಾಳಾಗಿ, ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ ಎಂಬುದಾಗಿ ರೈತಸಂಘದ ಜಿಲ್ಲಾ ಕಾರ್ಯಾಧ್ಯಕ್ಷರಾದ ಕೆ.ಸಿ.ಹೊರಕೇರಪ್ಪ ಹೇಳಿದರು.
ರಾಜ್ಯ ರೈತಸಂಘದ ನೇತೃತ್ವದಲ್ಲಿ ಬೆಸ್ಕಾಂ ಇಲಾಖೆಯ ಅಧಿಕಾರಿಗಳೊಂದಿಗೆ ಕರೆಯಲಾಗಿದ್ದ ಸಭೆಯನ್ನು ಉದ್ದೇಶಿಸಿ, ಅವರು ಮಾತನಾಡಿದರು.
ರಾತ್ರಿ ವೇಳೆ ಜಮೀನುಗಳಲ್ಲಿ ವಿದ್ಯುತ್ ಇಲ್ಲದೆ ಕಳ್ಳ-ಕಾಕರ ಹಾವಳಿ ಹೆಚ್ಚಾಗುತ್ತಿದ್ದು, ಜಮೀನಿನಲ್ಲಿ ವಾಸಿಸುವ ರೈತರಿಗೆ ಸುರಕ್ಷತೆ ಇಲ್ಲದಂತಾಗಿದೆ, ಈ ಕೂಡಲೇ ಸರ್ಕಾರದ ಆದೇಶದಂತೆ ರೈತರ ಪಂಪ್ ಸೆಟ್ ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಕೆಯಾಗಬೇಕು ಮತ್ತು ರಾತ್ರಿ ವೇಳೆ ಸಿಂಗಲ್ ವಿದ್ಯುತ್ ಕೊಡಬೇಕು ಎಂಬುದಾಗಿ ಹೇಳಿದರು.
ಈ ಸಭೆಯಲ್ಲಿ ತಾಲ್ಲೂಕು ರೈತಸಂಘದ ಅಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ, ತಾಲ್ಲೂಕು ರೈತಸಂಘದ ಅಧ್ಯಕ್ಷರಾದ ಬ್ಯಾಡರಹಳ್ಳಿ ಶಿವಕುಮಾರ್, ರೈತ ಮುಖಂಡರುಗಳಾದ ಆಲೂರು ಸಿದ್ದರಾಮಣ್ಣ, ರಂಗಸ್ವಾಮಿ, ಜಯಣ್ಣ, ನಾರಣಪ್ಪ, ಮಹಾಲಿಂಗಪ್ಪ, ಕರಿಯಪ್ಪ, ಚೇತನ್, ನಾಗರಾಜ್, ಜಗದೀಶ್, ವಿರೂಪಾಕ್ಷಪ್ಪ, ಕೆಂಚಪ್ಪ, ರಾಜು, ಗಿರೀಶ್, ರಮೇಶ್ ಸೇರಿದಂತೆ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು.
ರೈತರ ಪಂಪ್ ಸೆಟ್ ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಕೆಯಾಗಬೇಕು :ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments