ರೈತರ ಪರಿಹಾರಕ್ಕೆ ದುಡ್ಡಿಲ್ಲ, ಕಾಂಗ್ರೆಸ್‌ ಚೇಲಾಗಳಿಗೆ ಬಿರಿಯಾನಿ ಊಟಕ್ಕೆ 150 ಕೋಟಿ ರೂ. ಜಾರಿ ಸಮಿತಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕ್ಯಾಬಿನೆಟ್‌ ದರ್ಜೆ; ರೈತರಿಗೆ ಮೊದಲು ಪರಿಹಾರ ಕೊಡಿ ಎಂದು ಆಗ್ರಹಿಸಿದ ಆರ್.ಅಶೋಕ.

by | 13/01/24 | ಕರ್ನಾಟಕ


ಬೆಂಗಳೂರು : ರೈತರಿಗೆ ಪರಿಹಾರ ನೀಡಲು ಕಾಂಗ್ರೆಸ್‌ ಸರ್ಕಾರದ ಬಳಿ ಹಣವಿಲ್ಲ. ಆದರೆ ಕಾಂಗ್ರೆಸ್‌ನ ಚೇಲಾಗಳಿಗೆ ಬಿರಿಯಾನಿ ಊಟ ಕೊಡಿಸಲು, ಮಜಾ ಮಾಡಲು ಮಾತ್ರ 150 ಕೋಟಿ ರೂ. ಇದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲದಲ್ಲಿ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರವಾಗಿ ಕಾಂಗ್ರೆಸ್‌ ಸರ್ಕಾರ 100 ಕೋಟಿ ರೂ.ಬಿಡುಗಡೆಗೊಳಿಸುತ್ತಿದೆ. ನ್ಯಾಯವಾಗಿ 3-4 ಸಾವಿರ ಕೋಟಿ ರೂ. ನೀಡಬೇಕಿತ್ತು. ಈಗ ಗ್ಯಾರಂಟಿ ಜಾರಿ ಸಮಿತಿಯ 3 ಸಾವಿರ ಕಾಂಗ್ರೆಸ್‌ ಕಾರ್ಯಕರ್ತರಿಗೆ 25 ಕೋಟಿ ರೂ. ಖರ್ಚು ಮಾಡಲಾಗುತ್ತದೆ. ಅಂದರೆ ಐದು ವರ್ಷಕ್ಕೆ 150 ಕೋಟಿ ರೂ. ಆಗಲಿದೆ. ಕಾಂಗ್ರೆಸ್‌ ಚೇಲಾಗಳಿಗೆ ಮಜಾ ಮಾಡಲು ಇಷ್ಟು ಹಣ ಖರ್ಚು ಮಾಡಲಾಗುತ್ತಿದೆ. ಅವರಿಗೆ ಕ್ಯಾಬಿನೆಟ್‌ ದರ್ಜೆ ನೀಡಲಾಗುತ್ತದೆ. ಸರ್ಕಾರ ರೈತರಿಗೆ ಯಾವಾಗ ಕ್ಯಾಬಿನೆಟ್‌ ದರ್ಜೆಯ ಗೌರವ ಕೊಟ್ಟು ಪರಿಹಾರ ನೀಡಲಿದೆ ಎಂದು ಪ್ರಶ್ನಿಸಿದರು.

ಶಾಲೆಯ ಶೌಚಾಲಯ ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. ಆದರೆ ಕಾರ್ಯಕರ್ತರಿಗೆ ಬಿರಿಯಾನಿ, ಮಟನ್‌ ಊಟ ಹಾಕಲು ಹಣವಿದೆ. ಇದೇ ಹಣವನ್ನು ಶಾಲೆಗಳಿಗೆ ಕೊಡಬಹುದು. ಗ್ಯಾರಂಟಿ ನಿರ್ವಹಣೆಗೆ ಬೇಕಿದ್ದರೆ ಅಧಿಕಾರಿಗಳನ್ನು ಬಳಸಿಕೊಳ್ಳಲಿ. ಈಗಾಗಲೇ ಸರ್ಕಾರಿ ಕಚೇರಿಗಳಲ್ಲಿ ತಂತ್ರಾಂಶ ಕೆಲಸ ಮಾಡುತ್ತಿಲ್ಲ. ಇದರ ಬಗ್ಗೆ ಗಮನಹರಿಸಲಿ ಎಂದರು.

ಕಾಂಗ್ರೆಸ್‌ನವರ ದುರ್ಬುದ್ಧಿ ಹಿಂದೆಯೇ ಕಂಡಿದ್ದೇವೆ. ರಾಮಾಯಣ ಕಾಲ್ಪನಿಕ, ರಾಮನೇ ಇಲ್ಲ ಎಂದು ಅವರು ನ್ಯಾಯಾಲಯದಲ್ಲಿ ವಾದ ಮಾಡಿದ್ದರು. ಕನ್ಯಾಕುಮಾರಿಯಿಂದ ಕಾಶ್ಮೀರವರೆಗೆ ಲಕ್ಷಾಂತರ ದಾಖಲೆಗಳು ಸಿಗುತ್ತದೆ. ಆದರೂ ರಾಮನ ಜನ್ಮ ಪ್ರಮಾಣಪತ್ರವನ್ನು ಕೇಳಿ ಪಾಪ ಕಟ್ಟಿಕೊಂಡ ಕಾಂಗ್ರೆಸ್‌ ನಾಯಕರು ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಬರದೇ ಇರುವುದು ಲೇಸು. ಲಾಲ್‌ಕೃಷ್ಣ ಅಡ್ವಾಣಿಯವರು ಮಂದಿರ ಕಟ್ಟಲು ಹೋರಾಟ ನಡೆಸಿದಾಗ ಅವರನ್ನು ಕಾಂಗ್ರೆಸ್‌ ನಾಯಕರು ಹಾಗೂ ಲಾಲೂ ಪ್ರಸಾದ್‌ ಯಾದವ್‌ ಜೈಲಿಗೆ ಕಳುಹಿಸಿದ್ದರು. ಆಗ ಜೈಲಿಗೆ ಕಳಿಸಿ ಈಗ ಅವರ ಪರ ಮಾತನಾಡುವ ಈ ನಾಯಕರಿಗೆ ಎರಡು ನಾಲಿಗೆ ಇದೆಯೇ ಎಂದು ಪ್ರಶ್ನೆ ಮಾಡಿದರು.

ಶಿಕ್ಷಕರ ಅಹವಾಲು ಆಲಿಸಿದ ಪ್ರತಿಪಕ್ಷ ನಾಯಕ :

ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟಿಸುತ್ತಿದ್ದ ಬಿಬಿಎಂಪಿ ಹೊರಗುತ್ತಿಗೆ ಶಿಕ್ಷಕರ ಅಹವಾಲುಗಳನ್ನು ಆರ್‌.ಅಶೋಕ ಆಲಿಸಿದರು.

ನಂತರ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಮತಕ್ಕಾಗಿ ಬಿಬಿಎಂಪಿ ಹೊರಗುತ್ತಿಗೆ ಶಿಕ್ಷಕರ ನೇಮಕಾತಿ ಸೇರಿದಂತೆ ಎಲ್ಲ ಬಗೆಯ ನೇಮಕಾತಿಗಳನ್ನು ಮಾಡುತ್ತೇವೆ ಎಂದು ಹೇಳಿದ್ದರು. ಗೆದ್ದ ನಂತರ ಈಗ ಕೈ ಕೊಟ್ಟಿದ್ದಾರೆ. ಕೈ ಕೊಡುವುದರಲ್ಲೇ ಇವರು ಪರಿಣತರಾಗಿದ್ದಾರೆ. ಕಾಂಗ್ರೆಸ್‌ ಪಕ್ಷ ಪ್ರಣಾಳಿಕೆಯಲ್ಲಿ ಹೇಳಿದಂತೆಯೇ ನಡೆಯಬೇಕಿತ್ತು. ಹೊರಗುತ್ತಿಗೆ ಶಿಕ್ಷಕರಿಗೆ ಮೊದಲಿನಂತೆ ನೇರ ಸಂಬಳ ನೀಡುವ ಬೇಡಿಕೆಯನ್ನು ನಾನು ಕೂಡ ಬೆಂಬಲಿಸುತ್ತೇನೆ ಎಂದರು.

ಪ್ರತಿಭಟನೆ ಮಾಡುವುದು ಪ್ರತಿ ನಾಗರಿಕರ ಹಕ್ಕು. ಅದನ್ನು ಇಷ್ಟೇ ಸಮಯ ಮಾಡಬೇಕು ಎನ್ನಲು ಯಾರಿಗೂ ಅಧಿಕಾರ ಇಲ್ಲ. ಈ ತುಘಲಕ್‌ ಸರ್ಕಾರ ನ್ಯಾಯಯುತ ಬೇಡಿಕೆಯನ್ನು ಈಡೇರಿಸುವುದೂ ಇಲ್ಲ, ಪ್ರತಿಭಟನೆಗೂ ಅವಕಾಶ ನೀಡುವುದಿಲ್ಲ. ಪೊಲೀಸ್‌ ಅಧಿಕಾರಿಗಳು ಕಾನೂನು ಪಾಲಿಸಬೇಕೆ ಹೊರತು ಪ್ರತಿಭಟಕಾನಾರರನ್ನು ಓಡಿಸಬಾರದು. ಪ್ರತಿಭಟನಾಕಾರರ ಮೇಲೆ ದೌರ್ಜನ್ಯ ಮಾಡುವ ಪ್ರವೃತ್ತಿ ಬಿಡಬೇಕು. ಇಲ್ಲದಿದ್ದರೆ ಅದು ತಿರುಗುಬಾಣವಾಗಲಿದೆ ಎಂದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page