ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ

by | 16/05/23 | ಶಿಕ್ಷಣ

ಚಿತ್ರದುರ್ಗ ಮೇ.15:
ಚಿತ್ರದುರ್ಗ ತೋಟಗಾರಿಕೆ ಇಲಾಖೆಯ ಅಧೀನದ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ವಸತಿ ಸಹಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ.22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಚಿತ್ರದುರ್ಗ ತಾಲ್ಲೂಕು ಹಿರೇಗುಂಟನೂರು ಹೋಬಳಿ ವ್ಯಾಪ್ತಿಯ ಐಯ್ಯನಹಳ್ಳಿ ಗ್ರಾಮದಲ್ಲಿನ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2023-24ನೇ ಸಾಲಿನಲ್ಲಿ 2023ರ ಜೂನ್ 01 ರಿಂದ 2024ರ ಮಾರ್ಚ್ 30 ರವರೆಗೆ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಅರ್ಜಿಗಳನ್ನು ತೋಟಗಾರಿಕೆ ಉಪನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಿತ್ರದುರ್ಗ ಕಚೇರಿಯಲ್ಲಿ ಅಥವಾ ಇಲಾಖೆಯ ವೆಬ್‍ಸೈಟ್ https://horticulturedir.karnataka.gov.in ನಲ್ಲಿ ಅಥವಾ ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದೆ.
ಆಯ್ಕೆಯಾದ ಶಿಬಿರಾರ್ಥಿಗಳಿಗೆ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ವಸತಿ ಸಹಿತ ತರಬೇತಿ ನೀಡಲಾಗುವುದು. ಮಾಜಿ ಸೈನಿಕ ಅಭ್ಯರ್ಥಿಗಳು ಆಯ್ಕೆಗೊಂಡಲ್ಲಿ ಈ ಅಭ್ಯರ್ಥಿಗಳಿಗೆ ಉಚಿತವಾಗಿ ಕಲಿಕೆಯ ಎಲ್ಲಾ ತರಹದ ಅವಕಾಶಗಳನ್ನು ಕಲ್ಪಿಸಲಾಗುವುದು. ಆದರೆ ವಸತಿ ನಿಲಯದಲ್ಲಿ ವಾಸ್ತವ್ಯದ ವ್ಯವಸ್ಥೆ ಕಡ್ಡಾಯ ಇರುವುದಿಲ್ಲ ಹಾಗೂ ಶಿಷ್ಯವೇತನಕ್ಕೆ ಅವಕಾಶವಿರುವುದಿಲ್ಲ.
ತರಬೇತಿಗೆ ಒಟ್ಟು 15 ಅಭ್ಯರ್ಥಿಗಳಿಗೆ ಅವಕಾಶವಿದ್ದು, ಅದರಲ್ಲಿ 4 ಮಹಿಳೆಯರು, 11 ಪುರುಷರು, ಪರಿಶಿಷ್ಟ ಜಾತಿ 02, ಪರಿಶಿಷ್ಟ ಪಂಗಡಕ್ಕೆ 1 ಮೀಸಲಾತಿ ಇದೆ.
ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣವಾಗಿರಬೇಕು. ತರಬೇತಿ ಬಯಸುವ ಅಭ್ಯರ್ಥಿಯ ಪೆÇೀಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಜಮೀನನ್ನು ಸಾಗುವಳಿ ಮಾಡುತ್ತಿರಬೇಕು. ಮಾಜಿ ಸೈನಿಕರ ತರಬೇತಿಯನ್ನು ಪಡೆಯಲು ಇಚ್ಚಿಸಿದ್ದಲ್ಲಿ ಡಿಸ್‍ಜಾರ್ಜ್ ಬುಕ್, ಪರ್ಸನಲ್ ಪೆನ್ಶೆನ್ ಆರ್ಡರ್ ಕಾಪಿ, ಎಕ್ಸ್ ಸರ್ವಿಸ್ ಮ್ಯಾನ್ ಐಡಿ ಕಾರ್ಡ್ ಕಾಪಿ, ಇತ್ಯಾದಿಗಳನ್ನ ಸಲ್ಲಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 18 ವರ್ಷ ದಿಂದ 33 ವರ್ಷ, ಮಾಜಿ ಸೈನಿಕರಿಗೆ 33 ವರ್ಷ ದಿಂದ 65 ವರ್ಷ ವಯಸ್ಸಿನವರಾಗಿರಬೇಕು. ಮೆರಿಟ್ ಆಧಾರದ ಮೇಲೆ ಸರ್ಕಾರದ ಮೀಸಲಾತಿ ನಿಯಮಾನುಸಾರ ಆಯ್ಕೆ ವಿಧಾನ ನಡೆಯಲಿದೆ.
ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.30, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಮಾಜಿ ಸೈನಿಕ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.15 ಮೌಲ್ಯದ ಇಂಡಿಯನ್ ಪೆÇೀಸ್ಟಲ್ ಆರ್ಡರ್ ಅಥವಾ ಡಿಮ್ಯಾಂಡ್ ಡ್ರಾಫ್ಟ್ (DD) ಮೂಲಕ Deputy Director of Horticulture (ZP) Chitradurga ಹೆಸರಿನಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ತೋಟಗಾರಿಕೆ ಉಪನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಚಿತ್ರದುರ್ಗ ಕಚೇರಿಗೆ ಮೇ.22 ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು.
ಮೇ.25 ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ತೋಟಗಾರಿಗೆ ಉಪ ನಿರ್ದೇಶಕರರ ಕಚೇರಿಯಲ್ಲಿ ಸಂದರ್ಶವನ್ನು ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08194-230895, 9980991048 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page