ರೈಲ್ವೆ ಮೇಲ್ಸೇತುವೆ/ ಕೆಳ ಸೇತುವೆ ನಿರ್ಮಾಣಕ್ಕೆ ಕೇಂದ್ರದಿಂದ 1,000 ಕೋಟಿ ರೂ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

by | 05/01/23 | ಕರ್ನಾಟಕ

ಬೆಂಗಳೂರು : ವಿವಿಧ ನಗರ ಪಟ್ಟಣಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಹೊರತು ಪಡಿಸಿ, ರೈಲ್ವೆ ಮೇಲ್ಸೇತುವೆ/ ಕೆಳ ಸೇತುವೆ ನಿರ್ಮಾಣಕ್ಕೆ 1,000 ಕೋಟಿ ರೂ. ಒದಗಿಸಲು ಕೇಂದ್ರ ಸಚಿವರು ಸಮ್ಮತಿಸಿದ್ದು, ಒಂದು ವಾರದೊಳಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕುರಿತು ನಡೆಸಿದ‌ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿ :

ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯನ್ನು ಫೆಬ್ರುವರಿ ಅಂತ್ಯ ಅಥವಾ ಮಾರ್ಚ್ ನಲ್ಲಿ ಉದ್ಘಾಟಿಸಲಾಗುವುದು. ಎಸ್ ಟಿ ಆರ್ ಆರ್ ಅನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಹೊರ ವಲಯದಲ್ಲಿ ಅಭಿವೃದ್ಧಿ ಪಡಿಸಲು ತೀರ್ಮಾನಿಸಲಾಗಿದೆ..ಬೆಂಗಳೂರು ನಗರ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ನಗರ ಪ್ರದೇಶದಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳ ವ್ಯಾಪ್ತಿಯಲ್ಲಿ ಮೇಲ್ಸೇತುವೆ ನಿರ್ಮಿಸಲು ಸೂಚಿಸಿರುವುದಾಗಿ ತಿಳಿಸಿದರು.

ಮೆಟ್ರೋ ಪ್ರಯಾಣಿಕರಿಗೆ ಕೊನೆಹಂತದ ಸಂಪರ್ಕ :

ಬೆಂಗಳೂರು ನಗರದಲ್ಲಿ ಮೆಟ್ರೋ ನಿಲ್ದಾಣದಿಂದ ಪ್ರಯಾಣಿಕರಿಗೆ ಕೊನೆ ಹಂತದ ಸಂಪರ್ಕ ಒದಗಿಸುವ ಕುರಿತು ತಜ್ಞರಿಂದ ಅಧ್ಯಯನ ಮಾಡಿಸುವ ಕುರಿತು ಚರ್ಚಿಸಲಾಗಿದೆ. ರಾಯಚೂರು, ಕೊಪ್ಪಳ, ಯಾದಗಿರಿ, ಶಿವಮೊಗ್ಗ ವರ್ತುಲ ರಸ್ತೆಗಳನ್ನು ಈ ವರ್ಷದಲ್ಲಿಯೇ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ ಎಂದರು.

ಶಿರಾಡಿ ಘಾಟ್ ಚತುಷ್ಪಥ ಕಾಮಗಾರಿ ಮಾರ್ಚ್ನಲ್ಲಿ ಪ್ರಾರಂಭ :

ಎಲ್ಲ ಯೋಜನೆಗಳಲ್ಲಿ ಮರಳು, ಜಲ್ಲಿ ಮತ್ತಿತರ ಸಾಮಗ್ರಿಗಳ ಮೇಲಿನ ರಾಯಲ್ಟಿ ವಿನಾಯಿತಿ ಹಾಗೂ ಜಿ.ಎಸ್.ಟಿ. ರಿಯಾಯಿತಿ ನೀಡುವುದರ ಜೊತೆಗೆ ಭೂಸ್ವಾಧೀನ ವೆಚ್ಚ ರಾಜ್ಯ ಸರ್ಕಾರ ಭರಿಸುವುದರಿಂದ ವಿನಾಯಿತಿ ನೀಡುವ ಕುರಿತು ಒಪ್ಪಂದ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಶಿರಾಡಿ ಘಾಟ್ ಚತುಷ್ಪಥ ಕಾಮಗಾರಿ ಟೆಂಡರ್ ಮಾಡಲಾಗಿದೆ,. ಮಾರ್ಚ್ ನಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ. 10 ಸಾವಿರ ಕೋಟಿ ರೂ. ಅಂದಾಜು ವೆಚ್ಚದ ಸುರಂಗ ಮಾರ್ಗ ಯೋಜನೆಯ ವಿನ್ಯಾಸ ಸಿದ್ಧಪಡಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು

ಹೊಸಪೇಟೆ – ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ :

ಹೊಸಪೇಟೆ – ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ ನೆನೆಗುದಿಗೆ ಬಿದ್ದಿದ್ದು, ಮರು ಟೆಂಡರ್ ಮಾಡಲಾಗಿದ್ದು, ಫೆಬ್ರುವರಿಯಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ.

ವಿವಿಧ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕೂಡಲೇ ಕೈಗೆತ್ತಿಕೊಳ್ಳಲು ಸೂಚಿಸಿದರು.ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಲು ಸಹಕಾರ ನೀಡುವುದಾಗಿ ತಿಳಿಸಲಾಗಿದೆ.
ಯಶವಂತಪುರ ಎಲಿವೇಟೆಡ್ ರಸ್ತೆಯಲ್ಲಿ ವಾಹನ ದಟ್ಟಣೆ ನಿವಾರಣೆಗೆ ವಿನ್ಯಾಸ ಪಡೆದು ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಸಚಿವರು ಸೂಚನೆ ನೀಡಿದ್ದು, ಈ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಎಲ್ಲರಿಗೂ ನ್ಯಾಯ ಒದಗಿಸುವ ತೀರ್ಮಾನ :

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮೀಸಲಾತಿ ಸಂಬಂಧ 24 ಗಂಟೆಗಳ ಗಡುವನ್ನು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಮೀಸಲಾತಿ ವಿಷಯದ ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಈನಿಟ್ಟಿನಲ್ಲಿ ಸರಿಯಾದ ದಿಕ್ಕಿನಲ್ಲಿ ಹೆಜ್ಜೆಯನ್ನು ಇಡಲಾಗಿದೆ. ಮುಂದೆ ಬರುವ ಅಂತಿಮ ವರದಿಯಲ್ಲಿ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವಂತಹ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು. ಇಡಬ್ಲ್ಯೂ ಎಸ್ ನಿಂದ ಮೀಸಲಾತಿಗೆ ತೊಂದರೆಯಾಗುವ ಬಗ್ಗೆ ಬ್ರಾಹ್ಮಣ ಮಹಾಸಭಾ ಅವರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುವುದು ಎಂದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page