ಲಕ್ಷಾಂತರ ರೂ. ಖರ್ಚು ಮಾಡಿ ನಿರ್ಮಿಸಿದ ಚೆಕ್ ಡ್ಯಾಂನ ಏರಿ ಕಿತ್ತವರ ಮೇಲೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಆಗ್ರಹ..

by | 25/06/24 | ಜನಧ್ವನಿ


ಚಳ್ಳಕೆರೆ ಜನಧ್ವನಿ ವಾರ್ತೆ ಜೂ.25 ಜನಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಅತರ್ಜಲ ಹೆಚ್ಚಳಕ್ಕಾಗಿ ಕೋಟಿ ಕೋಟಿ ಹಣ ಖರ್ಚು ಮಾಡಿ ಚೆಕ್ ಡ್ಯಾಂ ಕಟ್ಟಿಸಿಲಾಗುತ್ತಿದೆ ಆದರೆ ಇಲ್ಲೊಬ್ಬರು ನಿವೇಶನ ಮಾಡಿಸಲು ಭೂಪರಿವರ್ತನೆ ಮಾಡಿಸಿಕೊಂಡು ಚೆಕ್ ಡ್ಯಾಂ ಏರಿ ಮಣ್ಣನ್ನು ಕಬಳಿಕೆ ಮಾಡಿರುವುದು ಬೆಳಕಿಗೆ ಬಂದಿದೆ.
ಹೌದು ಇದು ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿ ಗ್ರಾಪಂ ವ್ಯಾಪ್ತಿಯ ಕುರಡಿಹಳ್ಳಿ ಗ್ರಾಮದ ರಿ ಸಂ. 19 ರಲ್ಲಿ ಸರಕಾರ ಕೋಟಿ ಕೋಟಿ ಅನುದಾನ ಖರ್ಚು ಮಾಡಿ ಚೆಕ್ ಡ್ಯಾಂ ನಿರ್ಮಿಸಿ ವ್ಯರ್ಥವಾಗುವ ಮಳೆ ನೀರನ್ನು ಸಂಗ್ರಹವಾಗುವಂತೆ ಮಾಡಿತ್ತು.
ಮಳೆಗಾಲದಲ್ಲಿ ನಿಂತ ನೀರು ಮಿನಿ ಕೆರೆಯಂತೆ ಕಾಣುತ್ತಿದ್ದು ಈ ಚೆಕ್ ಸುಮಾರು 15 ರಿಂದ 20 ವರ್ಷಗಳ ಹಿಂದೆ ನಿರ್ಮಿಲಾಗಿತ್ತು ಇದರಲ್ಲಿ ಗ್ರಾಮಸ್ಥರಿಗೆ ಕುಡಿಯುವ ನೀರು ಸರಬರಾಜು ಮಾಡಲು ಕೊಳವೆ ಬಾವಿಗಳನ್ನು ಕೊರೆಸಲಾಗಿತ್ತು ಹಾಗೂ ಚೆಕ್ ಡ್ಯಾಂ ನಲ್ಲಿ ನೀರು ಸಂಗ್ರದಿಂದ ಜಾನುವಾರುಗಳಿಗೆ ನೀರಿನ ದಾಹ ನೀಗಿಸುವ ಜತೆಗೆ ಅಂತರ್ಜಲ ವೃದ್ಧಿಯಾಗಿ ಜನ ಜಾನುವಾರುಗಳ ಜೀವನಾಡಿಯಾಗಿದ್ದ ಚೆಕ್ ಡ್ಯಾಂ ನ ಸುಮಾರು 200 ಮೀಟರ್ ನಷ್ಟು ಏರಿಯನ್ನು ಕಿತ್ತು ನಿವೇಶನ ಭೂಮಿ ಸಮತಟ್ಟು ಮಾಡಲು ಬಳಕೆ ಮಾಡಲಾಗಿದ್ದು ನೀರು ನಿಲ್ಲದಂತೆ ಮಾಡಲಾಗಿದ್ದು ಕೂಡಲೆ ಚೆಕ್ ಡ್ಯಾಂ ಏರಿಯನ್ನು ಹಾಕಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕುರಡಿಹಳ್ಳಿ ಗ್ರಾಮದ ವೆಂಕಟೇಶ್ ಮಾತನಾಡಿ ರಿ ಸಂ ನಂ 19 ನ್ನು ಭೂ ಪರಿವರ್ತನೆ ಮಾಡಿಕೊಂಡು ನಿವೇಶನ ಮಾಡಲು ನಮ್ಮದು ತಕರಾರು ಇಲ್ಲ ಜನ ಜಾನುವಾರುಗಳಿ ಕುಡಿಯುವ ನೀರಿನ ದಾಹ ನೀಗಿಸಿ ಅಂತರ್ಜಲ ವೃದ್ಧಿಗೆ ವರದಾನವಾಗಿದ್ದ ಚೆಕ್ ಡ್ಯಾಂ ಏರಿಯನ್ನು ಕಿತ್ತು ನಿವೇಶನಗಳ ಭೂಮಿ ಸಮತಟ್ಟಿಗೆ ಬಳಕೆ ಮಾಡಿರುವುದು ತಮ್ಮ ತಕರಾರು ಇದೆ ಈಗಾಗಲೆ ಜಿಲ್ಲಾಧಿಕಾರಿಗಳಿಗೆ , ಗ್ರಾಫಮ ಪಿಡಿಒ ಲಿಖಿತವಾಗಿ ಅರ್ಜಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಲೋಕಾಯುಕ್ತರಿಗೂ ದೂರು ನೀಡಲಾಗಿದ್ದು ಚೆಕ್ ಡ್ಯಾಂ ಏರಿ ಹಾಕಿಸಿ ಯಥಾ ಸ್ಥಿತಿ ಕಾಪಾಡದಿದ್ದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.


ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಲಕ್ಷಾಂತರ ರೂ. ಖರ್ಚು ಮಾಡಿ ನಿರ್ಮಿಸಿದ ಚೆಕ್ ಡ್ಯಾಂನ ಏರಿ ಕಿತ್ತವರ ಮೇಲೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವರೇ
ಕಾದು ನೋಡ ಬೇಕಿದೆ.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page