ಲೋಕಸಭಾ ಚುನಾವಣೆಯಲ್ಲೂ ಮತದಾರರು ಕಾಂಗ್ರೆಸ್ ಪಕ್ಷವನ್ನು ಕೈಹಿಡಿಯಲಿದ್ದು ಕೇಂದ್ರದಲ್ಲೂ ಕಾಂಗ್ರೆಸ್ ಸರಕಾರ ಬರಲಿದೆ ಶಾಸಕ ಟಿ.ರಘುಮೂರ್ತಿ ,

by | 07/04/24 | ಲೋಕಸಭಾ ಚುನಾವಣೆ-2024


ಚಳ್ಳಕೆರೆ ಜನಧ್ವನಿ ವಾರ್ತೆ ಏ.7.ಕಾಂಗ್ರೆಸ್ ಚುನಾವಣೆ ಪೂರ್ವ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು 136 ಸ್ಥಾನಗಳನ್ನು ಪಡೆದು ಅಧಿಕಾರಿಕ್ಕೆ ಬಂದ ನಂತೆ ಪಂಚಗ್ಯಾರಂಟಿಗಳನ್ನು ಜಾರಿಕೊಳಿಸಿದ್ದ ಜನರಲ್ಲಿ ಕಾಂಗ್ರೆಸ್ ಸರ್ಕಾರದ ಬಗ್ಗೆ ಭರವಸೆ ಹೆಚ್ಚಿಸಿದ್ದು ಲೋಕಾಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸುವ ಮೂಲಕ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.


ನಗರದ ಶಾಸಕರ ಟಿ,ರಘುಮೂರ್ತ ಇವರ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಶಾಶ್ವತ ಕಾಮಗಾರಿಗಳಾದ ವೇದವಾತಿ ನದಿಯಲ್ಲಿನ ಬ್ಯಾರೇಜ್, ರಸ್ತೆ, ಶಾಲಾ, ಕಾಲೇಜ್ ಕಟ್ಟಡ, ಕ್ರೀಡಾಂಗಣ, ವಸತಿಯೋಜನೆ, ಸಮುದಾಯ ಭವನ,ಇಂಜಿನಿಯರಿಂಗ್ ಕಾಲೇಜ್ , ಜಿ,ಟಿಟಿಸಿ ಕೇಂದ್ರ, ಸಾರಿಗೆ ಬಸ್ ನಿಲ್ದಾಣ, ಕೂಡ್ಲಗಿ, ಮೊಳಕಾಲ್ಮೂರು, ಚಳ್ಳಕೆರೆ, ಪಾವಗಡ ತಾಲೂಕಿನ ಜನತೆಗೆ ಕುಡಿಯುವ ನೀರಿನ ಯೋಜನೆ, ಸಾರಿಗೆ ಘಟನ ಸೇರಿದಂತೆ ಹತ್ತು ಹಲವು ಯೋಜೆಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದರಿಂದ ಕ್ಷೇತ್ರ ಅಭಿವೃತ್ತ ಸಾಗಿದೆ.
ಚಂದ್ರಪ್ಪ ಸಂಸದನಾಗಿದ್ದಾಗ ಜನ ಪರ ಕೆಲಸಗಳನ್ನು ಮಾಡುವ ಮೂಲಕ ಜನರ ಮನದಲ್ಲಿ ಉಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿಗಳು ಮತದಾರರಲ್ಲಿ ಹೆಚ್ಚಿನ ಉತ್ಸಾಹ ಮೂಡಿಸಿವೆ. ಆದ್ದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿನ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನ ಪಡೆಯಲಿದೆ . ಕಾಂಗ್ರೆಸ್ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಇವರ ಗೆಲುವಿಗೆ ಮತ್ತೊಮ್ಮೆ ಮತದಾರರು ಒಲುವು ತೊರಿಸಬೇಕಿದೆ.
ಕೇಂದ್ರ ಸರಕಾರ ಬೆಳೆ ಪರಿಹಾರ ಬಿಡುಗಡೆ ಮಾಡಿಲ್ಲ ಹಾಗೂ ಭದ್ರಾ ಮೇಲ್ದಂಡೆ ಯೋಜೆನೆಗೆ ಚುನಾವಣೆ ಮೊದಲು ಹಣ ಬಿಡುಗಡೆ ಮಾಡಲಾಗುವುದು ಎಂದು ಹೇಳಿದವರು ಮತ್ತೆ ಚುನಾವಣೆ ಬಂದರೂ ಅನುದಾನ ಬಿಡುಗಡೆ ಮಾಡಿಲ್ಲ.
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಹಲವಾರು ಬಡಕುಟುಂಬಗಳಿಗೆ ಸಹಾಯವಾಗಿದ್ದು ಅವರ ಜೀವನ ಮಟ್ಟ ಸುಧಾರಿಸಿದೆ. ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ರೈತರಿಗೆ ಬೆಳೆ ಪರಿಹಾರವಾಗಿ ಎರಡು ಸಾವಿಹ ಹಣ ಬಿಡುಗಡೆ ಮಾಡಿದರು, ಯುವ ನಿಧಿ, ಶಕ್ತಿಯೋಜನೆ, ಸೇರಿದಂತೆ ಐದು ಗ್ಯಾರಂಟಿಗಳಿಂದ ಕಾಂಗ್ರೆಸ್ ಪಕ್ಷವು ಬಡವರ ಜೀವನ ಮಟ್ಟ ಸುಧಾರಿಸಬೇಕೆಂಬ ನಿಟ್ಟಿನಲ್ಲಿ ಜಾರಿಗೆ ತಂದ ಈ ಗ್ಯಾರಂಟಿ ಯೋಜನೆಗಳು ಮಹಿಳೆಯರಿಗೆ, ವಿದ್ಯಾವಂತ ನಿರುದ್ಯೋಗಿಗಳಿಗೆ ಹಾಗೂ ಹಲವಾರು ಬಡಕುಟುಂಬಗಳಿಗೆ ಸಹಕಾರಿಯಾಗಿವೆ. ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚಿತ್ರದುರ್ಗ ಲೋಕಸಭಾಕ್ಷೇತ್ರದಿಂದ ಸ್ಪರ್ಧಿಸಿರುವ ಬಿ.ಎನ್. ಚಂದ್ರಪ್ಪನವರ ಪರ ಹೋಬಳಿ ಕೇಂದ್ರಗಳಲ್ಲಿ ಕಾರ್ಯಕ್ರಗಳನ್ನು ಹಮ್ಮಿಕೊಳ್ಳಲಾಗುವುದು.
ಬಿ.ಎನ್. ಚಂದ್ರಪ್ಪನವರನ್ನು ಬಹುಮತಗಳಿಂದ ಗೆಲ್ಲಿಸಿ ಪಾರ್ಲಿಮೆಂಟ್ ಗೆ ಕಳುಹಿಸಿಕೊಡಿ ಎಂಬುದಾಗಿ ಜನತೆಯಲ್ಲಿ ಶಾಸಕ ಟಿ.ರಘುಮೂರ್ತಿ ಮನವಿ ಮಾಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಸಿ.ವೀರಭದ್ರಬಾಬು, ಪ್ರಭುದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ಶಶಿಕುಮಾರ್, ನೇತಾಜಿ ಪ್ರಸನ್ನ, ಆರ್.ಪ್ರಸನ್ನಕುಮಾರ್ ಇತರರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page