ಲೋಕಸಭಾ ಚುನಾವಣೆ ಮತದಾನ ಮುಕ್ತಾಯ-14 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ವಿದ್ಯುನ್ಮಾನ ಮತಯಂತ್ರದಲ್ಲಿ ಭದ್ರ.

by | 26/04/24 | ಲೋಕಸಭಾ ಚುನಾವಣೆ-2024


ಸಂಗ್ರಹ ಚಿತ್ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ನಡೆದ ಮೊದಲ ಹಂತದ ಮತದಾನ ಅವಧಿ ಮುಕ್ತಾಯವಾಗಿದೆ. ಸಂಜೆ 6 ಗಂಟೆಗೆ ಮತದಾನ ಮುಕಾಗೊಂಡಿದ್ದು ಶುಭ ಶುಕ್ರವಾರದಂದು ಅಭ್ಯರ್ಥಿಗಳ ಭವಿಷ್ಯ ವಿದ್ಯುನ್ಮಾನ ಮತಯಂತ್ರದಲ್ಲಿ ಭದ್ರವಾಗಿದೆ.
ಬೆಳಿಗ್ಗೆ 7 ಗಂಟೆಯಿಂದ ನಡೆದ ಮತದಾನ ಸಂಜೆ 6 ಗಂಟೆಯವರೆಗೆ ನಡೆದಿದ್ದು, 6 ಗಂಟೆ ಬಳಿಕ ಕ್ಯೂನಲ್ಲಿ ಇದ್ದವರಿಗಷ್ಟೇ ಮತದಾನಕ್ಕೆ ಅವಕಾಶ ನೀಡಲಾಗಿದೆ.
ಸದ್ಯದ ಮಾಹಿತಿ ಪ್ರಕಾರ ಸಂಜೆ 5 ಗಂಟೆಯವರೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಶೇ.63.90ರಷ್ಟು ಮತದಾನವಾಗಿದೆ. ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ.48.61ರಷ್ಟು ಮತದಾನವಾಗಿದೆ.


ರಾಜ್ಯದ ಬೆಂಗಳೂರು ಸೆಂಟ್ರಲ್ , ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಸೇರಿದ್ದು.
ಲೋಕಸಭಾ ಕ್ಷೇತ್ರದ 14 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ವಿದ್ಯುನ್ಮಾನ ಮತಯಂತ್ರದಲ್ಲಿ ಭದ್ರವಾಗಿದೆ. ಮತಎಣಿಕೆಯ ತನಕ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿರುವುದು. ಮತದಾರರು ಈಗಾಗಲೇ ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಣಯಿಸಿದ್ದು, ವಿಜಯದ ಹಾರ ಯಾರ ಕೊರಳಿಗೆ ಎಂದು ಮತ ಎಣಿಕೆಯವರೆಗೆ ಕಾಯಬೇಕಿದೆ

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page