ಲೋಕಸಭೆ ಚುನಾವಣೆ ಅಧಿಕಾರಿ, ಸಿಬ್ಬಂದಿಗಳು ನಿಸ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಿ -ಜಿಲ್ಲಾಧಿಕಾರಿ ಟಿ. ವೆಂಕಟೇಶ್

by | 14/03/24 | ಸುದ್ದಿ


ಚಿತ್ರದುರ್ಗ ಮಾ.14:
ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಶೀಘ್ರವೇ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದ್ದು, ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಮುಕ್ತ, ನ್ಯಾಯ ಸಮ್ಮತ ಚುನಾವಣೆಗಾಗಿ ನಿಸ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಲು ಸಜ್ಜಾಗುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ಲೋಕಸಭೆ ಚುನಾವಣೆ ಕುರಿತು ಜರುಗಿದ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಭೆಯಲ್ಲಿ ಅವರು ಮಾತನಾಡಿದರು.
ನೀತಿ ಸಂಹಿತೆ ಜಾರಿಯಾದ ನಂತರ ಎಲ್ಲಾ ಅಧಿಕಾರಿ ಸಿಬ್ಬಂದಿ ಚುನಾವಣಾ ಆಯೋಗದ ಅಡಿ ಕಾರ್ಯ ನಿರ್ವಹಿಸಬೇಕು. ಚುನಾವಣೆ ಕೆಲಸಗಳಿಗೆ ಈಗಾಗಲೇ ತಂಡಗಳನ್ನು ರಚಿಸಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಆಯೋಗದ ಮಾರ್ಗದರ್ಶನ ಹಾಗೂ ಸಲಹೆ ಪಡೆದು ಕ್ರಮಬದ್ದವಾಗಿ ಕೆಲಸ ನಿರ್ವಹಿಸಬೇಕು. ನೋಡಲ್ ಅಧಿಕಾರಿಗಳೊಂದಿಗೆ ಎಲ್ಲಾ ಸಿಬ್ಬಂದಿ ಕೈ ಜೋಡಿಸಬೇಕು. ಯಾವುದೇ ಅಕ್ರಮ, ಅವ್ಯವಹಾರಗಳಿಗೆ ಅವಕಾಶ ಮಾಡಿಕೊಡಬಾರದು. ಚುನಾವಣಾ ಆಯೋಗದ ಹೊಸ ನಿರ್ದೇಶನಗಳು ಹಾಗೂ ತೀರ್ಮಾನಗಳ ಬಗ್ಗೆ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿ ಮನವರಿಕೆ ಮಾಡಿಕೊಡಬೇಕು. ಅಂಚೆ ಮತಪತ್ರಕ್ಕೆ ನಿರ್ವಹಣೆಗೆ ಹೆಚ್ಚಿನ ಮಹತ್ವ ನೀಡಬೇಕು. ಚುನಾವಣೆ ಅಕ್ರಮ ಅಥವಾ ಅವ್ಯವಹಾರಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ನೇರ ಹೊಣೆ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಸಿದರು.
ಚುನಾವಣೆ ಕಾರ್ಯದ ನಡುವೆಯೂ ಸಾರ್ವಜನಿಕರ ಕುಂದು ಕೊರತೆಗಳನ್ನು ಪರಿಹರಿಸುವ ಕೆಲಸ ಮಾಡಬೇಕು. ಚುನಾವಣೆ ನೆಪ ಹೇಳಿ ದೈನಂದಿನ ಕೆಲಸ ಕಾರ್ಯಗಳ ಬಗ್ಗೆ ನಿರ್ಲಕ್ಷ್ಯ ಸಲ್ಲದು. ಸಾರ್ವಜನಿಕರೊಂದಿಗೆ ಸೌಮ್ಯದಿಂದ ವರ್ತಿಸಬೇಕು. ಬರ ಪರಿಸ್ಥಿತಿ ಇರುವುದರಿಂದ ಕುಡಿಯುವ ನೀರಿನ ಸಮಸ್ಯೆಯ ನಿವಾರಣೆಗೆ ಪ್ರಥಮಾದ್ಯತೆ ನೀಡಬೇಕಾಗುತ್ತದೆ. ಚುನಾವಣೆ ಸಮಯದಲ್ಲಿ 24 ಗಂಟೆಯೂ ಕೆಲಸ ಮಾಡಬೇಕಾಗುತ್ತದೆ. ಆರೋಗ್ಯದ ಕಡೆಗೂ ಗಮನವಿಟ್ಟು, ತಾಳ್ಮೆ ಹಾಗೂ ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿ, ಸಿಬ್ಬಂದಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ವಿವಿಧ ಶಾಖೆಗಳ ನೋಡಲ್ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page