ಚಿತ್ರದುರ್ಗ ಅ.18:
ಅಕ್ಟೋಬರ್ 19 ರಿಂದ 21ರವರೆಗೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲ್ಲೂಕುಗಳಿಗೆ ಖುದ್ದಾಗಿ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ, ಸಾರ್ವಜನಿಕರಿಂದ ದೂರು ಹಾಗೂ ಅವಹಾಲುಗಳನ್ನು ಸ್ವೀಕರಿಸಲಿದ್ದಾರೆ.
ಅಕ್ಟೋಬರ್ 19ರಂದು ಚಳ್ಳಕೆರೆ ಮತ್ತು ಹೊಳಲ್ಕೆರೆ ತಾಲ್ಲೂಕು ಕಚೇರಿಗಳಲ್ಲಿ, ಅಕ್ಟೋಬರ್ 20ರಂದು ಮೊಳಕಾಲ್ಮೂರು ಮತ್ತು ಹಿರಿಯೂರು ತಾಲ್ಲೂಕು ಕಚೇರಿಗಳಲ್ಲಿ, ಅಕ್ಟೋಬರ್ 21ರಂದು ಹೊಸದುರ್ಗ ತಾಲ್ಲೂಕು ಕಚೇರಿಯಲ್ಲಿ, ಪ್ರತಿದಿನ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ವರೆಗೆ ಲೋಕಾಯುಕ್ತ ಅಧಿಕಾರಿಗಳು ಹಾಜರಿದ್ದು, ದೂರು, ಅಹವಾಲು ಸ್ವೀಕರಿಸುವರು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎನ್.ವಾಸುದೇವರಾಮ ತಿಳಿಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments