ಚಿತ್ರದುರ್ಗ ಡಿ.22:
ಇದೇ ಡಿಸೆಂಬರ್ 27 ಮತ್ತು 28ರಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಖುದ್ದಾಗಿ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಸಾರ್ವಜನಿಕರಿಂದ ದೂರು ಹಾಗೂ ಅವಹಾಲುಗಳನ್ನು ಸ್ವೀಕರಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಿಕೊಡಲು ಲಂಚಕ್ಕಾಗಿ ಬೇಡಿಕೆ, ಯೋಜನೆಗಳ ಅನುμÁ್ಠನದಲ್ಲಿ ಅನಗತ್ಯ ವಿಳಂಬ, ಕರ್ತವ್ಯದಲ್ಲಿ ನಿರ್ಲಕ್ಷತನ, ತಾರತಮ್ಯ, ಭ್ರμÁ್ಟಚಾರ ಹಾಗೂ ದುರಾಡಳಿದ ಕುರಿತು ಸಾರ್ವಜನಿಕರು ನಿಗದಿತ ಅರ್ಜಿ ನಮೂನೆಯಲ್ಲಿ ದೂರು ಸಲ್ಲಿಸಬಹುದು.
ಡಿಸೆಂಬರ್ 27ರಂದು ಬೆಳಿಗ್ಗೆ 10 ರಿಂದ 1 ರವರೆಗೆ ಹೊಸದುರ್ಗ ಪುರಸಭೆ ಹಾಗೂ ಮೊಳಕಾಲ್ಮುರು ಪಟ್ಟಣ ಪಂಚಾಯಿತಿಯಲ್ಲಿ ಅಹವಾಲು ಸ್ವೀಕರಿಸುವರು. ಮಧ್ಯಾಹ್ನ 3 ರಿಂದ ಸಂಜೆ 5.30 ರವರೆಗೆ ಹೊಳಲ್ಕೆರೆ ಪುರಸಭೆ ಹಾಗೂ ಚಳ್ಳಕೆರೆ ನಗರಸಭೆ ಕಚೇರಿಯಲ್ಲಿ ಅಹವಾಲು ಸ್ವೀಕರಿಸುವರು.
ಡಿಸೆಂಬರ್ 28ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಹಿರಿಯೂರು ಪುರಸಭೆ ಹಾಗೂ ಮಧ್ಯಾಹ್ನ 3 ರಿಂದ ಸಂಜೆ 5.30 ರವರೆಗೆ ಚಿತ್ರದುರ್ಗ ನಗರಸಭೆ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಹಾಜರಿದ್ದು, ದೂರು, ಅಹವಾಲು ಸ್ವೀಕರಿಸುವರು ಎಂದು ಕರ್ನಾಟಕ ಲೋಕಾಯುಕ್ತ ಪೋಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments