ಲೋಕಾಯುಕ್ತ ಅಧಿಕಾರಿಗಳ ತಾಲ್ಲೂಕು ಭೇಟಿ

by | 18/06/23 | ಜನಧ್ವನಿ


ಚಿತ್ರದುರ್ಗ(ಜನಧ್ವನಿ ವಾರ್ತೆ)ಜೂನ್.17:
ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕುಗಳಿಗೆ ಇದೇ ಜೂನ್ 21 ರಿಂದ 23 ರವರೆಗೆ ಖುದ್ದಾಗಿ ಭೇಟಿ ನೀಡಿ ಸಾರ್ವಜನಿಕರಿಂದ ದೂರು, ಅಹವಾಲುಗಳನ್ನು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವೀಕರಿಸುವರು.
ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ತಮ್ಮ ಕೆಲಸಗಳನ್ನು ಮಾಡಿಕೊಡಲು ಅಲ್ಲಿನ ಅಧಿಕಾರಿ, ಸಿಬ್ಬಂದಿಗಳು ಲಂಚದ ಹಣಕ್ಕಾಗಿ ಬೇಡಿಕೆಯಿಟ್ಟಲ್ಲಿ, ಸರ್ಕಾರವು ಸಾರ್ವಜನಿಕರಿಗಾಗಿ ರೂಪಿಸಲಾಗಿರುವ ಅನೇಕ ಯೋಜನೆಗಳನ್ನು ಅನುμÁ್ಠನಗೊಳಿಸದೇ ಇರುವುದು ಮತ್ತು ಅಂತಹ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಸರ್ಕಾರಿ ಅಧಿಕಾರಿಗಳು ಅನಾವಶ್ಯಕ ವಿಳಂಬ ಮಾಡುತ್ತಿರುವುದು, ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷತನ ಮತ್ತು ತಾರತಮ್ಯ ತೋರುವುದು, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಲಾಭ ಸರಿಯಾದ ರೀತಿಯಲ್ಲಿ ತಲುಪಿಸದೇ ಇರುವುದು ಮತ್ತು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲವು ಸಾರ್ವಜನಿಕ ಅಧಿಕಾರಿಗಳು ಭ್ರμÁ್ಟಚಾರದಲ್ಲಿ ತೊಡಗಿ ದುರಾಡಳಿತ ನಡೆಸುತ್ತಿರುವುದು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ” ಗೌರವಾನ್ವಿತ ಲೋಕಾಯುಕ್ತರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರು ರವರಿಗೆ ಲೋಕಾಯುಕ್ತ ಅಧಿಕಾರಿಗಳ ಮುಖಾಂತರ ದೂರುಗಳನ್ನು ನಿಗಧಿತ ನಮೂನೆ-1&2 ರಲ್ಲಿ ಸಲ್ಲಿಸಬಹುದಾಗಿದೆ.
ಲೋಕಾಯುಕ್ತ ಅಧಿಕಾರಿಗಳ ತಾಲ್ಲೂಕು ಭೇಟಿ ವಿವರ: ಇದೇ ಜೂನ್ 21ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ಮೊಳಕಾಲ್ಮೂರು ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ಉಪಾಧೀಕ್ಷಕರು ಹಾಜರಿದ್ದು, ದೂರು, ಅಹವಾಲು ಸ್ವೀಕರಿಸುವರು ಹಾಗೂ ಅಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವೆರೆಗೆ ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ನಿರೀಕ್ಷಕರು-3 ಹಾಜರಿದ್ದು, ದೂರು, ಅಹವಾಲು ಸ್ವೀಕರಿಸುವರು.
ಜೂನ್ 22ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಚಿತ್ರದುರ್ಗ ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು-3 ಹಾಜರಿದ್ದು, ದೂರು, ಅಹವಾಲು ಸ್ವೀಕರಿಸುವರು ಹಾಗೂ ಅಂದು ಬೆಳಿಗ್ಗೆ 10.30 ರಿಂದ 1.30 ರವರೆಗೆ ಹೊಸದುರ್ಗ ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ನಿರೀಕ್ಷಕರು-2 ಹಾಜರಿದ್ದು, ದೂರು, ಅಹವಾಲು ಸ್ವೀಕರಿಸುವರು.
ಜೂನ್ 23 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಹಿರಿಯೂರು ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ನಿರೀಕ್ಷರು-1 ಹಾಗೂ ಅಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಹೊಳಲ್ಕೆರೆ ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ನಿರೀಕ್ಷಕರು-2 ಹಾಜರಿದ್ದು, ದೂರು ಸ್ವೀಕರಿಸಲಿದ್ದಾರೆ.
ಯಾವುದೇ ನ್ಯಾಯಾಲಯಗಳಲ್ಲಿ ಹಾಲಿ ವಿಚಾರಣೆಯಲ್ಲಿರುವ ಪ್ರಕರಣಗಳ ಕುರಿತು ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page