ಲೋಕ ಅದಾಲತ್: ಜಿಲ್ಲೆಯಲ್ಲಿ 66,489 ಪ್ರಕರಣಗಳು ಇತ್ಯರ್ಥ

by | 13/02/23 | ಸುದ್ದಿ

ಚಿತ್ರದುರ್ಗ ಫೆ. 13
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಕಳೆದ ಫೆ.11 ರಂದು ಜಿಲ್ಲೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಮನಗೂಳಿ ಪ್ರೇಮಾವತಿ ಎಂ. ಅವರ ನೇತೃತ್ವದಲ್ಲಿ ಏರ್ಪಡಿಸಲಾದ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ವ್ಯಾಜ್ಯ ಪೂರ್ವ ಪ್ರಕರಣಗಳೂ ಸೇರಿದಂತೆ ಒಟ್ಟು 66,489 ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿದ್ದು, 27.53 ಕೋಟಿ ರೂ. ಪರಿಹಾರ ಒದಗಿಸಲಾಗಿದೆ.
ಫೆ. 11 ರಂದು ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತೆಗೆದುಕೊಳ್ಳಲಾಗಿದ್ದು, ಇದರಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಮೋಟಾರು ವಾಹನ ಅಪಘಾತ ಪರಿಹಾರ, ಕಂದಾಯ ಪ್ರಕರಣ, ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ, ವಿದ್ಯುತ್ ಹಾಗೂ ನೀರಿನ ಶುಲ್ಕ ಪ್ರಕರಣಗಳು, ಕೌಟುಂಬಿಕ ಕಲಹ, ಬಾಡಿಗೆ ಅನುಭೋಗದ ಹಕ್ಕು ಎಂಎಂಆರ್‍ಡಿ ಹಾಗೂ ಭೂ ಪರಿಹಾರ ಕೇಸುಗಳು ಸೇರಿದಂತೆ ಹಲವು ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಲು ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಅವಕಾಶ ಕಲ್ಪಿಸಲಾಗಿತ್ತು. ನ್ಯಾಯಾಲಯಗಳಲ್ಲಿ ಬಾಕಿ ಇರುವ 38,486 ಪ್ರಕರಣಗಳಲ್ಲಿ ಫೆ. 11 ರಂದು ನಡೆಸಿದ ಲೋಕ ಅದಾಲತ್‍ನಲ್ಲಿ 2008 ಪ್ರಕರಣಗಳನ್ನು ತೆಗೆದುಕೊಳ್ಳಲಾಗಿದ್ದು, ಇದರಲ್ಲಿ 1228 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ, 14,22,80,177 ರೂ. ಗಳ ಪರಿಹಾರ ಒದಗಿಸಲಾಗಿದೆ. ಅದಾಲತ್‍ನಲ್ಲಿ ಒಟ್ಟು 66214 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ತೆಗೆದುಕೊಂಡಿದ್ದು, ಈ ಪೈಕಿ 65261 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ, 13,31,06,904 ರೂ. ಗಳ ಪರಿಹಾರ ಒದಗಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಮನಗೂಳಿ ಪ್ರೇಮಾವತಿ ಎಂ., 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಎನ್. ಕಲ್ಕಣಿ, 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಕೆ. ಕೋಮಲ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆಂಪರಾಜು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಕೆ. ಗಿರೀಶ್ ಹಾಗೂ ಇತರೆ ನ್ಯಾಯಾಲಯಗಳ ನ್ಯಾಯಾಧೀಶರುಗಳು ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page