ಎಲ್ಲಾ ಸಮುದಾಯಗಳಿಗೆ ಕೊಡುಗೆ ನೀಡಿದ ಮಹಾನ್ ಪುರುಷರ ಜಯಂತಿಗಳನ್ನು ಕೇವಲ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗಬಾರದು. ಅವರ ಜೀವನದ ಆದರ್ಶಗಳನ್ನು ಅವಡಿಸಿಕೊಳ್ಳಬೇಕು ಶಾಸಕ ಟಿ.ರಘುಮೂರ್ತಿ.

by | 27/06/24 | ಸುದ್ದಿ

ಚಳ್ಳಕೆರೆ ಜನಧ್ವನಿ ವಾರ್ತೆ ಜೂ.27 ದೂರದೃಷ್ಟಿ ಹೊಂದಿದ್ದ ನಾಡಪ್ರಭು ಕೆಂಪೇಗೌಡ ಬೆಂಗಳೂರಿನಲ್ಲಿ ಜಲಕ್ಷಾಮ ಉಂಟಾಗಬಾರದೆAದು ಕೆರೆಗಳನ್ನು ನಿರ್ಮಿಸಿ ಜನ ಸಾಮಾನ್ಯರ ರಕ್ಷಣೆಗೆ ಕೋಟೆಗಳನ್ನು ಕಟ್ಟಿಸಲು ಮುಂದಾಗುತ್ತಿದ್ದರು ಎಂದು ಶಾಸಕ ಟಿ.ರಘುಮೂರ್ತಿ ಅಭಿಪ್ರಾಯಪಟ್ಟರು.
ನಗರದ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಒಕ್ಕಲಿಗರ ಸಮುದಾಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ನಾಡ ಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ಕಸುಬಿಗೆ ತಕ್ಕಂತೆ ಪೇಟೆಗಳನ್ನು ಗುಡಿಗೋಪುರ, ವಸತಿಗೆ ತಕ್ಕಂತೆ ಕೆರೆ–ಕುಂಟೆಗಳನ್ನು ನಿರ್ಮಿಸಿ ಮಾದರಿ ನಗರ ನಿರ್ಮಾಣಕ್ಕೆ ಕಾರಣರಾದ ನಾಡಪ್ರಭು ಕೆಂಪೇಗೌಡರಜಾತ್ಯತೀತ ಮನೋಭಾವ ಎಲ್ಲರೂ ಸ್ಮರಿಸುವಂತದ್ದು’ ಎಲ್ಲಾ ಸಮುದಾಯಗಳಿಗೆ ಕೊಡುಗೆ ನೀಡಿದ ಮಹಾನ್ ಪುರುಷರ ಜಯಂತಿಗಳನ್ನು ಕೇವಲ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗಬಾರದು. ಅವರ ಜೀವನದ ಆದರ್ಶಗಳನ್ನು ಅವಡಿಸಿಕೊಳ್ಳಬೇಕು ಕೆಂಪೆಗೌಡರು ಆದರ್ಶಪ್ರಾಯವಾದ ರಾಜರು. ಇವರು ಮಾಡಿದ ಸಾಧನೆಗಳು ಅಜರಾಮರವಾಗಿವೆ ಮಹಾನ್ ನಾಯಕರ ಸಾಧನೆಗಳನ್ನು ಮುಂದಿನ ಪೀಳಿಗೆಗೆ ಉದ್ದೇಶವಾಗಿದೆ ಎಂದರು.
ತಹಶೀಲ್ದಾರ್ ರೇಹಾನ್ ಪಾಷ ನಾಡ ಪ್ರಭು ಕೆಂಪೆಗೌಡ ಅವರು ಬೆಂಗಳೂರು ಕಟ್ಟಿದಂತ ನಾಯಕ, ಇಂತಹ ಮಹಾನ್ ನಾಯಕನ ಆದರ್ಶ, ತತ್ವಗಳನ್ನು ಈಗಿನ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಪ್ರಾಚರ್ಯ ರವೀಶ್, ಕೆಂಪೇಗೌಡರ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಚನ್ನಕೇಶವ ,ವಕೀಲ ಹನುಮಂತಪ್ಪ, ಹೆಗ್ಗೆರೆ ಆನಂದಪ್ಪ ಮಾತನಾಡಿದರು.
ನಗರಸಭೆ ಸದಸ್ಯರತಾದ ಸುಮಕ್ಕ, ಕವಿತಾ, ವೀರಭದ್ರಪ್ಪ, ರಾಘವೇಂದ್ರ, ರಮೇಶ್ ಗೌಡ, ಪ್ರಶಾಂತ್ , ತಾಪಂ ಇಒ ಶಶಿಧರ್, ಪಛರಾಯುಕ್ತ ಚಂದ್ರಪ್ಪ, ಸಹಾಯಕ ಕೃಷಿ ನಿರ್ದೇಶಕ ಡಾ.ಅಶೋಕ್,ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಡಾ.ವಿರುಪಾಕ್ಷಪ್ಪ, ಪಶುಸಂಗೋಪನೆ ಸಹಾಯಕ ನಿರ್ದೇಶಕ ಡಾ.ರೇವಣ್ಣ, ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಕ್ಷೇತ್ರಶಿಕ್ಷಾಧಿಕಾರಿಗಳ ಕಚೇರಿಯಲ್ಲಿ ಕೆಂಪೇಗೌಡ ಜಯಂತಿ ಆಚರಚೆ.


ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಇದೇ ಮೊದಲ ಬಾರಿಗೆ 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಕೇಂಪೇಗೌಡರ ಬಗ್ಗೆ ಪ್ರಬಂಧ ಸ್ಪರ್ಧೆ ಕಾರ್ಯಕ್ರಮ ಆಯೋಜಿಸಲಾಗಿತ್ತು ವಿಜೇತರಿಗೆ ಪ್ರಥಮ ದ್ವಿತೀಯ ಹಾಗೂ ತ್ರೀತಿಯ ಬಹುಮಾನವಾಗಿ ಪ್ರಮಾಣಪತ್ರ ನೀಡಲಾಗುವುದು ಎಂದು ತಿಳಿಸಿದರು.
ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆವತಿಯಿಂದ ಆಯೋಜಿಸಿದ್ದ 515 ನೇ ನಾಡ ಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ನಾಡಪ್ರಭುಕೆಂಪೇಗೌಡರ ಛದ್ಮಾವೇಶಭೂಷಣಗಳನ್ನು ಹಾಕಲಾಗಿತ್ತು.
ಕಾರ್ಯಕ್ರಮದಲ್ಲಿಕಚೇರಿ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ವಿವಿಧ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಲು ಉಪಸ್ಥಿತರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page