ವಕೀಲರಿಗೆ ಕೂಡಲೆ ಸಂರಕ್ಷಣಾ ಕಾಯ್ದೆ ಜಾರಿಗೆ ತರುವಂತೆ ಆಗ್ರಹಿಸಿ ವಕೀಲರ ಸಂಘದವತಿಯಿಂದ ಪ್ರತಿಭಟನೆ

by | 13/02/23 | ಪ್ರತಿಭಟನೆ

ಚಳ್ಳಕೆರೆ ಜನಧ್ವನಿ ವಾರ್ತೆ ಫೆ13.
ವಕೀಲರ ಸಂರಕ್ಷಣಾ ಕಾಯಿದೆಯನ್ನು ಬಜೆಟ್ ಅದಿವೇಶನದಲ್ಲಿ ಜಾರಿಗೆ ಗೊಳಿಸುವಂತೆ ಆಗ್ರಹಿಸಿ ವಕೀಲರ ಸಂಘದವತಿಯಿAದ ಪ್ರತಿಭಟನೆ ನಡೆಸಿ ತಾಲೂಕು ಕಚೇರಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ವಕೀಲರ ಪರಿಷತ್ತು ವತಿಯಿಂದ ರಾಯ ಸರಕಾರಕ್ಕೆ ಒಂದು ವರ್ಷದ ಹಿಂದೆ ವಕೀಲರ ಸಂರಕ್ಷಣಾ ಕಾಯ್ದೆಯ ಕರಡು ಪ್ರತಿಯನ್ನು ಸಲ್ಲಿಸಲಾಗಿದೆ ಆದರೆ ಈ ಬಗ್ಗೆ ಸರಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ ಕೂಡಲೆ ಬಜೆಟ್ ಸಭೆಯಲ್ಲಿ ಮಂಡಿಸುವAತೆ ವಕೀಲರು ಸರಕಾರಕ್ಕೆ ಒತ್ತಾಯಿಸಿದರು.
ಈ ಹಿಂದೆ ವಕೀಲರ ಸಂಘವು ಅಧಿವೇಶನದಲ್ಲಿ ಜಾರಿಗೊಳಿಸುವಂತೆ ಬೃಹತ್ ಪ್ರತಿಭಟನೆ ಮಾಡುವ ಮೂಲಕ ಸರಕಾರದ ಗಮನಸೆಳೆದರೂ ಯಾವುದೇ ಪರಯೋಜವಾಗಿಲ್ಲ ಎಂದು ಅಕ್ರೋಶ ವ್ಯಕ್ತಪಡಿಸಿ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ತಹಶೀಲ್ದಾರ್ ರೇಹಾನ್ ಪಾಷಾ ಮಹಿವಿ ಸ್ವೀಕರಿಸಿ ಮಾತನಾಡಿ ಈಕೂಡಲೆ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಕಳಿಸಿಕೊಡಲಾಗುವುದು ಎಂದು ವಕೀಲರಿಗೆ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಆನಂದಪ್ಪ, ಉಪಾಧ್ಯಕ್ಷ ರಾಘವೇಂದ್ರ,ಉಪೇAದ್ರಕುಮಾರ್, ಕಾಂತರಾಜ್, ರುದ್ರಯ್ಯ, ಜಿ.ಟಿ.ನಾಗರಾಜ್, ಕುಮಾರ್, ರುದ್ರೇಶ್, ಸಿದ್ದರಾಜ್, ಪಾಲಯ್ಯ, ಶೇಖರಪ್ಪ, ಮಧುಮತಿ, ಇತರರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *