ವಕ್ಫ್ ಬೋರ್ಡ್ ಆಸ್ತಿಗಳಲ್ಲಿ ವಸತಿ, ಆಸ್ಪತ್ರೆ ಹಾಗೂ ಕಾಲೇಜುಗಳ ನಿರ್ಮಾಣ ಚಿಂತನೆ -ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್

by | 17/10/23 | ಸುದ್ದಿ


ಚಿತ್ರದುರ್ಗ.ಅ.17:
ರಾಜ್ಯದ ಪ್ರತಿ ತಾಲ್ಲೂಕಿನಲ್ಲೂ ವಕ್ಫ್ ಬೋರ್ಡ್ ಆಸ್ತಿಗಳಿವೆ. ಈ ಜಾಗಗಳಲ್ಲಿ ಸಾರ್ವಜನಿಕರ ಅನುಕೂಲಕ್ಕೆ ವಸತಿ, ಆಸ್ಪತ್ರೆ ಹಾಗೂ ಕಾಲೇಜುಗಳ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ಚೋಳಗುಡ್ಡದ ಅಗಸನಕಲ್ಲು ರಸ್ತೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅಂಜುಮಾನ್ ಎ ದಾರೂಲ್ ಹುದಾ ಸಂಸ್ಥೆ ಕೊಹೇನೂರ್ ಶಾದಿಮಹಲ್ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ವಕ್ಫ್ ಬೋರ್ಡ್ ಆಸ್ತಿಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಿದರೆ, ಸರ್ಕಾರದ ಅನುದಾನಕ್ಕೆ ಕಾಯುವ ಅವಶ್ಯಕತೆ ಬರುವುದಿಲ್ಲ. ಅಲ್ಪಸಂಖ್ಯಾತರ ಅಭಿವೃದ್ಧಿ ಬಯಸಿ ಜನರು ನನ್ನನ್ನು ಹರಿಸಿದ್ದಾರೆ. ಇದರಿಂದಾಗಿ ಸರ್ಕಾರದಲ್ಲಿ ಸಚಿವ ಸ್ಥಾನ ಲಭಿಸಿದೆ. ಜನರ ಅಭಿವೃದ್ಧಿಗೆ ಸದಾ ಶ್ರಮಿಸುತ್ತೇನೆ ಎಂದರು.
ಅಲ್ಪಸಂಖ್ಯಾತ ಸಮುದಾಯದ ಜನರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯ. ನಮ್ಮ ಹಣೆ ಬರಹ ಇμÉ್ಟೀ ಎಂದು ಕೈ ಕಟ್ಟಿ ಕೂರಬಾರದು. ಡ್ರೈವರ್, ಮೆಕಾನಿಕ್, ಹಮಾಲಿ, ಕೂಲಿ ಕೆಲಸ ಮಾಡುವರರ ಮಕ್ಕಳು ಅದೇ ವೃತ್ತಿ ಮಾಡಬೇಕು ಎಂದೇನೂ ಇಲ್ಲ. ಕಷ್ಟಪಟ್ಟು ದುಡಿದರೆ ಪ್ರತಿಫಲ ದೊರಕುವುದು ಎಂದು ಸಚಿವ ಜಮೀರ್ ಅಹಮದ್ ಹೇಳಿದರು.
ಚಿತ್ರದುರ್ಗ ನಗರದ ಜನತೆಯ ಬಹುದಿನಗಳ ಕನಸು ಇಂದು ನನಸಾಗುತ್ತಿದೆ. ನಾಲ್ಕು ತಿಂಗಳಿಂದ ಶಾಸಕರಾದ ವೀರೇಂದ್ರ ಪಪ್ಪಿಯವರು ಇಲ್ಲಿನ ಶಾದಿ ಮಹಲ್ ನಿರ್ಮಾಣದ ಬಗ್ಗೆ ಹತ್ತಾರು ಬಾರಿ ಮನವಿ ಮಾಡಿದ್ದರು. ಅವರ ಕಳಕಳಿಯಂತೆ ಕೊಹೇನೂರ್ ಶಾದಿಮಹಲ್ ನೂತನ ಕಟ್ಟಡದ ನಿರ್ಮಾಣಕ್ಕೆ ರೂ. 2 ಕೋಟಿ ಮಂಜೂರು ಮಾಡಿದ್ದೇನೆ. ಜಿಲ್ಲೆಯ ನಿರ್ಮಾಣ ಹಂತದಲ್ಲಿ ಇದ್ದ ಶಾದಿ ಮಹಲ್ ಕಟ್ಟಡಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ವಕ್ಫ್ ಬೋರ್ಡ್ ಮುಸ್ಲಿಂ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸಬೇಕು. ಚಿತ್ರದುರ್ಗ ನಗರದ ಅನ್ವರ್ ಭಾμÁ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರ ಸಹಕಾರದಲ್ಲಿ ಮುಂದಿನ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು. ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ 5 ಲಕ್ಷ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ದಂತ ವೈದ್ಯಕೀಯ ಓದುವ ವಿದ್ಯಾರ್ಥಿಗಳಿಗೆ ರೂ.1 ಲಕ್ಷ, ಇಂಜಿನಿಯರಿಂಗ್ ಓದುವ ವಿದ್ಯಾರ್ಥಿಗಳಿಗೆ ರೂ.50 ಸಾವಿರ, ವಿದೇಶದಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ರೂ.30 ಲಕ್ಷ ಹಣವನ್ನು ಸಬ್ಸಿಡಿ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ, ನವ ಚಿತ್ರದುರ್ಗ ನಿರ್ಮಾಣಕ್ಕೆ ಮುನ್ನುಡಿ ಬರೆಯಲಾಗಿದೆ. ಚಿತ್ರದುರ್ಗ ಹಲವಾರು ಅಭಿವೃದ್ಧಿ ಕಾರ್ಯದ ಕಡೆ ಮುನ್ನಡೆಯುತ್ತದೆ. ಸಚಿವರಾದ ಜಮೀರ್ ಅಹಮದ್ ಖಾನ್ ಅವರು ಚಿತ್ರದುರ್ಗ ತಾಲೂಕಿಗೆ 1500 ಹೊಸ ಮನೆಗಳನ್ನು ವಸತಿ ಇಲಾಖೆಯಿಂದ ನೀಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ. ಅನ್ವರ್ ಭಾμÁ, ನಗರ ಸಭೆ ಸದಸ್ಯ ಸರ್ದಾರ್, ಮಾಜಿ ಸಂಸದ ಚಂದ್ರಪ್ಪ, ಅಂಜುಮಾನ್ ಎ ದಾರೂಲ್ ಹುದಾ ಸಂಸ್ಥೆ ಮುಖಂಡರು ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page