ವಾಣಿವಿಲಾಸವಿದ್ಯಾಸಂಸ್ಥೆವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಹೆಸರಾಗಿದೆ : ಶ್ರೀ ಷಡಕ್ಷರಸ್ವಾಮೀಜಿ

by | 01/02/24 | ಸುದ್ದಿ


ಹಿರಿಯೂರು :
ವಾಣಿವಿಲಾಸ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಹೆಸರಾಗಿದೆ, ಈ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮುಂಬರುವ ಪರೀಕ್ಷೆಯಲ್ಲಿ ಶಿಕ್ಷಕರ ಮಾರ್ಗದರ್ಶನ ಪಡೆದು, ಸತತ ಪರಿಶ್ರಮ ವಹಿಸಿ ಓದುವ ಮೂಲಕ ಅತಿಹೆಚ್ಚುಅಂಕಪಡೆದು, ನೀವು ಓದಿದ ಶಾಲೆಗೆ ಹಾಗೂ ಹೆತ್ತ ತಂದೆ-ತಾಯಿಗಳಿಗೆ ಕೀರ್ತಿ ತರಬೇಕು ಎಂಬುದಾಗಿ ಕೋಡಿಹಳ್ಳಿ ಆದಿಜಾಂಬವ ಮಹಾಸಂಸ್ಥಾನ ಬೃಹನ್ಮಠದ ಶ್ರೀಶ್ರೀ ಷಡಕ್ಷರಸ್ವಾಮೀಜಿಗಳು ಹೇಳಿದರು.
ನಗರದ ತನ್ಯಾಸಿಗೌಂಡರ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ವಾಣಿವಿಲಾಸ ವಿದ್ಯಾಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಸಮಾರಂಭ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಮನೋರಂಜನೆಯು ಸಹ ಅತ್ಯಗತ್ಯವಾಗಿದ್ದು, ಶಾಲಾ ವಾರ್ಷಿಕೋತ್ಸವ ಸಮಾರಂಭದ ಕಾರ್ಯಕ್ರಮಗಳು ಮಕ್ಕಳ ಮನಸ್ಸಿಗೆ ಸಂತೋಷ ನೀಡುವ ಜೊತೆಗೆ ಮಕ್ಕಳ ಕ್ರೀಯಾಶೀಲತೆ ಹಾಗೂ ಸೃಜನಶೀಲತೆಯನ್ನು ಹೆಚ್ಚಿಸುತ್ತವೆ, ಮಕ್ಕಳು ತಮ್ಮ ಅಮೋಘ ನೃತ್ಯ ಹಾಗೂ ಸುಮಧುರ ಹಾಡುಗಳಿಂದ ತಂದೆ-ತಾಯಿಗಳನ್ನೂ ಹಾಗೂ ಪೋಷಕರನ್ನು ರಂಜಿಸುವಂತಾಗಲಿ ಎಂಬುದಾಗಿ ಹೇಳಿದರು.
ನಗರಸಭೆ ಪೌರಾಯುಕ್ತರಾದ ಹೆಚ್.ಮಹಂತೇಶ್ ಮಾತನಾಡಿ, ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದದ್ದು, ವಿದ್ಯಾರ್ಥಿಗಳು ಈ ಸಮಯವನ್ನು ವ್ಯರ್ಥ ಮಾಡದೇ ಶ್ರದ್ಧೆ, ಆಸಕ್ತಿ ಹಾಗೂ ಏಕಾಗ್ರತೆಯಿಂದ ಅಭ್ಯಾಸ ಮಾಡುವ ಮೂಲಕ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು, ಓದಿದ ಶಾಲೆಗೆ ಹಾಗೂ ತಂದೆ-ತಾಯಿಗಳಿಗೆ ಕೀರ್ತಿ ತರುವುದರ ಜೊತೆಗೆ ಪ್ರತಿಭಾವಂತರಾಗಿ ಹೊರಹೊಮ್ಮಬೇಕು ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿವಿಲಾಸ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಬಿ.ಎಸ್.ರಘುನಾಥ್ ಮಾತನಾಡಿ, ನಮ್ಮ ವಾಣಿವಿಲಾಸ ವಿದ್ಯಾಸಂಸ್ಥೆಯು ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಕೆಲಸ ಮಾಡುತ್ತಿದ್ದು, ಪ್ರತಿವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆಯುವ ಮೂಲಕ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ “ಅತ್ಯುತ್ತಮ ಶಾಲೆ” ಎಂಬ ಪ್ರಶಸ್ತಿಗೆ ಪಾತ್ರವಾಗಿದ್ದು, ಈ ನಿಟ್ಟಿನಲ್ಲಿ ಶ್ರಮವಹಿಸಿದ ನಮ್ಮ ವಿದ್ಯಾಸಂಸ್ಥೆಯ ಎಲ್ಲಾ ಶಿಕ್ಷಕ-ಶಿಕ್ಷಕಿಯರಿಗೆ ಅಭಿನಂದನೆಗಳು ಎಂಬುದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ಕಳೆದ 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ, ಸನ್ಮಾನಿಸಿ, ನೆನಪಿನ ಕಾಣಿಕೆಗಳನ್ನು ನೀಡಿ, ಗೌರವಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿವಿಲಾಸ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಬಿ.ಎಸ್.ರಘುನಾಥ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ, ಖಜಾಂಚಿ ಆರ್.ವಸಂತ್ ಕುಮಾರ್, ಮುಖ್ಯಶಿಕ್ಷಕರಾದ, ಶ್ರೀಮತಿಸೌಮ್ಯ, ಶ್ರೀಮತಿ ಹೇಮಲತಾ, ಶಿಕ್ಷಕರಾದ ಉಮೇಶ್ ಯಾದವ್, ಶಿವರಾಜ್, ಶಿಕ್ಷಕಿಯರುಗಳಾದ ಶ್ರೀಮತಿ ವಸಂತಾ, ಶ್ರೀಮತಿ ನಂದಿನಿ, ಶ್ರೀಮತಿ ಗಂಗಮ್ಮ, ಶ್ರೀಮತಿ ರಂಜಿತಾ, ಶ್ರೀಮತಿ ಹೇಮಲತಾ, ಶ್ರೀಮತಿ ಮುಬೀನಾ, ಶ್ರೀಮತಿ ಸಬೀಹಾ, ಶ್ರೀಮತಿ ತಿಪ್ಪಮ್ಮ, ಶ್ರೀಮತಿ ಭಾಗ್ಯ, ಶ್ರೀಮತಿ ನೇತ್ರಾವತಿ, ಶ್ರೀಮತಿ ಜಯಸುಧಾ, ಶ್ರೀಮತಿ ಖುಷುಬು, ಶ್ರೀಮತಿ ಸಾದಿಕಾ, ಶ್ರೀಮತಿ ಅಸ್ಮತ್, ಸೇರಿದಂತೆ ಶಾಲಾ ಸಿಬ್ಬಂದಿವರ್ಗ, ಹಾಗೂ ಪೋಷಕರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page