ವಾಣಿವಿಲಾಸ ಜಲಾಶಯದಿಂದ ಜೆಜಿಹಳ್ಳಿ ಹೋಬಳಿ ಕೆರೆಗಳಿಗೆನೀರುಹರಿಸುವಂತೆ ಸರ್ಕಾರವನ್ನಒತ್ತಾಯಿಸಿ ತಾಲ್ಲೂಕಿನರೈತರಿಂದ ನಡೆದ ಅನಿರ್ಧಿಷ್ಟಾವಧಿ ಧರಣಿ

by | 20/06/24 | ಪ್ರತಿಭಟನೆ


ಹಿರಿಯೂರು:
ವಾಣಿವಿಲಾಸ ಜಲಾಶಯದಿಂದ ಜವಗೊಂಡನಹಳ್ಳಿ ಹೋಬಳಿಯ ಕೆರೆಗಳಿಗೆ ನೀರು ಹರಿಸುವ ಬಗ್ಗೆ ಸರ್ಕಾರದ ಕಡೆಯಿಂದ ಸ್ಪಂದನೆ ಸಿಗದಿರುವ ಕಾರಣ ರೈತರು ಅನಿರ್ಧಿಷ್ಟಾವಧಿ ಧರಣಿ ನಡೆಸಲು ಮುಂದಾಗಿದ್ದಾರೆ ಎಂಬುದಾಗಿ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಟಿ. ತಿಪ್ಪೇಸ್ವಾಮಿ ಹೇಳಿದರು.
ತಾಲ್ಲೂಕಿನ ಜವಗೊಂಡನಹಳ್ಳಿಯ ಗಣೇಶ ದೇವಸ್ಥಾನದ ಆವರಣದಲ್ಲಿ ಬುಧವಾರದಿಂದ ನಡೆಸಲಾಗುತ್ತಿದೆ
ಜಿಲ್ಲೆಯ ಬಹುತೇಕ ಭಾಗದಲ್ಲಿ ಮುಂಗಾರು ಮಳೆ ಸಾಕಷ್ಟು ಪ್ರಮಾಣದಲ್ಲಿ ಆಗಿದ್ದರೂ ಜವಗೊಂಡನಹಳ್ಳಿ ಹೋಬಳಿಯಲ್ಲಿ ಸರಿಯಾದ ಮಳೆಯಾಗದೆ ಜನರು ಕುಡಿಯುವ ನೀರಿಗೆ ಪರದಾಡುತ್ತಿದ್ದಾರೆ ಒಂದು ಸಾವಿರ ಅಡಿಯವರೆಗೆ ಕೊಳವೆಬಾವಿ ಕೊರೆಸಿದರೂ ನೀರು ಸಿಗುತ್ತಿಲ್ಲ ಎಂದರಲ್ಲದೆ,
ಸುಮಾರು 10 ರಿಂದ 15ಸಾವಿರ ಅಡಿಕೆ-ತೆಂಗಿನ ತೋಟಗಳು ಒಣಗಿ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ. ನೀರಿಗಾಗಿ ಈಭಾಗದ ರೈತರು ಅನುಭವಿಸುತ್ತಿರುವ ಯಾತನೆಯನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಪ್ರಯತ್ನಕ್ಕೆ ಫಲ ಸಿಗದ ಕಾರಣಕ್ಕೆ ರೈತರು ಮನೆ ಕೆಲಸ ಬಿಟ್ಟು ಧರಣಿಗೆ ಇಳಿಯುವಂತಾಗಿದೆ ಎಂಬುದಾಗಿ ಆರೋಪಿಸಿದರು.
ವಾಣಿವಿಲಾಸ ಜಲಾಶಯದ ಬಲನಾಲೆಯು ಜವಗೊಂಡನಹಳ್ಳಿ ಹೋಬಳಿಯ ಅಂಚಿನಲ್ಲಿ ಹಾದು ಹೋಗಿದೆ. ನಾಲೆಗೆ ತಡೆಗೋಡೆ ನಿರ್ಮಿಸಿ 8-10 ಕಿ.ಮೀ .ನೀರು ಹರಿಸಿದಲ್ಲಿ ಹೋಬಳಿಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸಬಹುದು. ಸರ್ಕಾರ ಈ ವಿಚಾರದಲ್ಲಿ ಇಚ್ಚಾಶಕ್ತಿ ಪ್ರದರ್ಶಿಸುವ ಅಗತ್ಯವಿದೆ ಎಂಬುದಾಗಿ ಹೇಳಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಬಿ.ಪಾಪಣ್ಣ ಮಾತನಾಡಿ, ವಾಣಿವಿಲಾಸ ಜಲಾಶಯದಿಂದ ಗಾಯಿತ್ರಿ ಜಲಾಶಯ, ದಿಂಡಾವರ, ಕಾಟನಾಯಕನಹಳ್ಳಿ ಮಾವಿನಮಡು, ಬಗ್ಗನಡು, ಗೌಡನಹಳ್ಲಿ, ಪಿಲ್ಲಾಲಿ, ಗಾಂಧಿನಗರ, ಮಾಳಗೊಂಡನಹಳ್ಳಿ, ಉಡುವಳ್ಳಿ, ವಡ್ಡನಹಳ್ಳಿ, ಹೊನ್ನಾಳ್, ವೀರವ್ವನಾಗತಿಹಳ್ಳಿ, ಲಕ್ಕನಾಳ್, ಕೆರೆಗಳಿಗೆ ಪೈಪ್ ಲೈನ್ ಮೂಲಕ ನೀರು ತುಂಬಿಸಬೇಕು ಎಂಬುದಾಗಿ ಒತ್ತಾಯಿಸಿದರು.
ರೈತ ಸಂಘದ ಪ್ರಧಾನ ಕಾರ್ಯದರ್ಶಿ ಆಲೂರು ಸಿದ್ದರಾಮಣ್ಣ ಮಾತನಾಡಿ ವಾಣಿವಿಲಾಸ ಜಲಾಶಯದಿಂದ ಚಳ್ಳಕೆರೆ, ಚಿತ್ರದುರ್ಗ, ಕುದಾಪುರ, ಮೊಳಕಾಲ್ಮೂರು, ಹೊಳಲ್ಕೆರೆ ತಾಲ್ಲೂಕುಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ ಅಚ್ಚುಕಟ್ಟು ಪ್ರದೇಶದ ನೀರು ಒಳಗೊಂಡಂತೆ ಜಲಾಶಯಕ್ಕೆ ವಾರ್ಷಿಕ 7.50 ಟಿಎಂಸಿ ಅಡಿ ನೀರಿಗೆ ಬೇಡಿಕೆ ಇದೆ.
ಆದರೆ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ವಾಣಿವಿಲಾಸಕ್ಕೆ ಕೇವಲ 2ಟಿಎಂಸಿ ಅಡಿ ನೀರು ಮೀಸಲಿಡುವ ಮೂಲಕ ಜಿಲ್ಲೆಯ ಜನರನ್ನು ವಂಚಿಸಿದೆ ನಮಗೆ ಆಗಿರುವ ಅನ್ಯಾಯ ಸರಿಪಡಿಸಲು ಭದ್ರಾ ಅಥವಾ ಎತ್ತಿನಹೊಳೆ ಯೋಜನೆಗಳ ಮೂಲಕ ವಾಣಿವಿಲಾಸ ಜಲಾಶಯಕ್ಕೆ 10ಟಿಎಂಸಿಅಡಿ ನೀರು ಹರಿಸುವ ಆದೇಶ ಮಾಡಬೇಕು ಎಂದರಲ್ಲದೆ,
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿರುವ ರೂ 5300 ಕೋಟಿ ರೂಗಳ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಯೋಜನೆಗೆ ಬೇಕಿರುವ ಬಾಕಿ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆಮಾಡಿ ಕಾಮಗಾರಿ ಪೂರ್ಣಗೊಳಿಸಬೇಕು ಎಂಬುದಾಗಿ ಅವರು ಆಗ್ರಹಿಸಿದರು.
ಈ ಧರಣಿಯ ಮೊದಲ ದಿನ ಜವಗೊಂಡನಹಳ್ಳಿ ಗ್ರಾಮಸ್ಥರು ಪಾಲ್ಗೊಂಡಿದ್ದರು. ಸರ್ಕಾರದಿಂದ ಆದೇಶ ಸಿಗುವವರೆಗೂ ಹೋರಾಟ ಮುಂದುವರೆಸಬೇಕು ಎಂಬುದಾಗಿ ಧರಣಿ ನಿರತ ರೈತರು ಪ್ರತಿಜ್ಞೆ ಮಾಡಿದರು.
ಈ ಸಂದರ್ಭದಲ್ಲಿ ಅರಳಿಕೆರೆ ತಿಪ್ಪೇಸ್ವಾಮಿ, ಈರಣ್ಣ, ಎಂ. ಆರ್. ಕನ್ಯಪ್ಪ, ತಿಮ್ಮಾರೆಡ್ಡಿ, ಶಿವಣ್ಣ, ಆನೆಸಿದ್ರಿ ಗೋವಿಂದರಾಜ್, ನಾಗೇಂದ್ರಪ್ಪ, ರಾಮಕೃಷ್ಣ, ಬಾಲಕೃಷ್ಣ, ಕರಿಯಪ್ಪ, ಚಿತ್ರಲಿಂಗಪ್ಪ, ಕುಮಾರ, ದೇವರಾಜು, ಚಂದ್ರಶೇಖರ ಸೇರಿದಂತೆ ಅನೇಕ ರೈತಮುಖಂಡರು ಉಪಸ್ಥಿತರಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page