ಬೆಳಗಾವಿ:
ವಾಣಿವಿಲಾಸ ಸಹಕಾರಿ ಸಕ್ಕರೆ ಕಾರ್ಖಾನೆ ಪುನಶ್ಚೇತನ ಕುರಿತಂತೆ ಸಕ್ಕರೆ ಖಾತೆ ಸಚಿವ ಶಂಕರ್ ಮುನೇನಕೊಪ್ಪರವರ ಅಧ್ಯಕ್ಷತೆಯಲ್ಲಿ ಹಿರಿಯೂರು ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರ ಉಪಸ್ಥಿತಿಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಂದು ಆಯೋಜಿಸಲಾಗಿದ್ದ ಸಭೆಯಲ್ಲಿ ಸಕ್ಕರೆ ಕಾರ್ಖಾನೆ ಪುನಾರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ನಿರ್ಧರಿಸಲಾಯಿತು.
ಹಿರಿಯೂರು ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಸುಧೀರ್ಘ ಚರ್ಚೆ ನಡೆಸಿದ ಸಚಿವರು ವಾಣಿ ವಿಲಾಸ ಸಕ್ಕರೆ ಸಹಕಾರಿ ಕಾರ್ಖಾನೆ ಪುನಶ್ಚೇತನ ಕುರಿತಂತೆ ಸಾಧಕ-ಬಾದಕಗಳ ಕುರಿತು ಮಾಹಿತಿ ಕಲೆ ಹಾಕಿದರು. ಪುನರಾರಂಭದ ನಿಟ್ಟಿನಲ್ಲಿ ಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸೋಣ ಎಂದು ಒಪ್ಪಂದಕ್ಕೆ ಬಂದರು.
ಕಾರ್ಖಾನೆ ಹಿನ್ನಲೆ : ಸುಮಾರು 1972ರಲ್ಲಿ 1 ಕೋಟಿ ರೂಗಳ ವೆಚ್ಚದಲ್ಲಿ ಸ್ಥಾಪನೆಯಾದ ಈ ಕಾರ್ಖಾನೆ 1985 ರ ವರೆಗೆ ಸಕ್ಕರೆ ಉತ್ಪಾದನೆ ಮಾಡಿತು. ಕಬ್ಬು ಬೆಳೆವ ಪ್ರಮಾಣ ಇಳಿಕೆಯಾದ ಪರಿಣಾಮ ಮುಚ್ಚಲಾಗಿತ್ತು. ರಾಷ್ಟೀಯ ಹೆದ್ದಾರಿ ಪಕ್ಕದ 271 ಎಕ್ಕರೆ ಪ್ರದೇಶದಲ್ಲಿ ಕಾರ್ಖಾನೆ ಇದ್ದು, ಚಿತ್ರದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು, ಹೊಸದುರ್ಗ, ಹಿರಿಯೂರು, ದಾವಣಗೆರೆ, ಹರಿಹರ, ಪಾವಗಡ, ಚಿಕ್ಕನಾಯಕನಹಳ್ಳಿ ಶಿರಾ ತಾಲ್ಲೂಕು ಇದರ ವ್ಯಾಪ್ತಿಗೆ ಬರುತ್ತವೆ.
ಆರಂಭದಲ್ಲಿ 1251 ಟನ್ ಕಬ್ಬು ಪೂರೈಕೆಯಾಗುತ್ತಿತ್ತು. ಪುನರಾಂಭವಾದರೆ 4-5 ಸಾವಿರ ಟನ್ ಬೇಕಾಗುತ್ತದೆ.ಭದ್ರೆ ವಿವಿ ಸಾಗರದ ಒಡಲು ಸೇರಿದ ನಂತರ ಜಿಲ್ಲೆಯಲ್ಲಿ ಅಂತರ್ಜಲ ಹೆಚ್ಚಿ, ಕೃಷಿ ಚಟುವಟಿಕೆಗಳು ಗರಿಗೆದರಿವೆ, ರೈತರು ಮತ್ತೆ ಕಬ್ಬು ಬೆಳೆಯಲು ಉತ್ಸಹ ತೋರಿದ್ದು, ಸಕ್ಕರೆ ಕೈಗಾರಿಕೆಯು ಕೃಷಿ ಆಧಾರಿತ ಗ್ರಾಮೀಣ ಭಾಗದ ಆರ್ಥಿಕ ಉನ್ನತಿಗೆ ಬಲ ತುಂಬುವ ಉದ್ದಿಮೆಯಾಗಿದೆ, ಸಾವಿರಾರು ಜನರಿಗೆ ಉದ್ಯೋಗ, ಅನ್ನದಾತರ ಸ್ವಾವಲಂಬಿ ಬದುಕಿಗೆ ವರದಾನವಾಗಲಿದೆ.
ಸಕ್ಕರೆ ಸಚಿವರ ಅದ್ಯಕ್ಷತೆಯಲ್ಲಿ ವಾಣಿ ವಿಲಾಸ ಸಕ್ಕರೆ ಕಾರ್ಖಾನೆ ಪುನಶ್ಚೇತನದ ಕುರಿತು ಚರ್ಚಿಸಲಾಗಿದೆ. ಕಬ್ಬು ಬೆಳೆಯುವ ಪ್ರದೇಶ, ಉತ್ಪಾದನೆ ಪ್ರಮಾಣ ಕಬ್ಬಿನಿಂದ ಎಥೆನಾಲ್ ಉತ್ಪಾದಿಸುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ತೀರ್ಮಾನಿಸಲಾಗಿದೆ ಎಂಬುದಾಗಿ ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ವಾಣಿವಿಲಾಸ ಸಹಕಾರಿ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸುವರ್ಣಸೌಧದಲ್ಲಿ ಸಭೆ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments