ವಾರ್ತಾ ಇಲಾಖೆಯಿಂದ ವಸ್ತು ಪ್ರದರ್ಶನ : ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಉದ್ಘಾಟನೆ

by | 15/03/24 | ಸುದ್ದಿ


ಚಿತ್ರದುರ್ಗ,ಮಾ.15
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು, ಇತರೆ ಅಭಿವೃದ್ಧಿ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಲು ನಗರದ ಕೆ.ಎಸ್.ಆರ್.ಟಿ.ಸಿ. ಕೇಂದ್ರ ಬಸ್ ನಿಲ್ದಾಣದಲ್ಲಿ ಏರ್ಪಡಿಸಿರುವ ವಸ್ತು ಪ್ರದರ್ಶನ ಮಳಿಗೆಯನ್ನು ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಹಾಗೂ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಶುಕ್ರವಾರ ಉದ್ಘಾಟಿಸಿದರು.
ರಾಜ್ಯ ಸರ್ಕಾರವು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಲು ಮತ್ತು ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ನೀಡಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕೇಂದ್ರ ಬಸ್ ನಿಲ್ದಾಣದಲ್ಲಿ ವಸ್ತು ಪ್ರದರ್ಶನ ಮಳಿಗೆಯನ್ನು ಹಾಕಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮಾಹಿತಿ ಪಡೆಯಬಹುದಾಗಿದೆ.
ಮಳಿಗೆಯಲ್ಲಿ ಗ್ಯಾರಂಟಿ ಯೋಜನೆಗಳೂ ಸೇರಿದಂತೆ ವಿವಿಧ ಯೋಜನೆಗಳು, ಕಾರ್ಯಕ್ರಮಗಳು ಸೇರಿದಂತೆ ಮಾಹಿತಿ ಒಳಗೊಂಡಿದೆ. ಈ ವಸ್ತು ಪ್ರದರ್ಶನ ವೀಕ್ಷಣೆಯು ಉಚಿತವಾಗಿರುತ್ತದೆ. ಬಸ್ ನಿಲ್ದಾಣಕ್ಕೆ ಬರುವ ಸಾರ್ವಜನಿಕರು, ಪ್ರಯಾಣಿಕರು ಸೇರಿದಂತೆ ಜಿಲ್ಲೆಯ ಎಲ್ಲಾ ಸಾರ್ವಜನಿಕರು ಈ ವಸ್ತು ಪ್ರದರ್ಶನ ಮಳಿಗೆಗೆ ಭೇಟಿ ನೀಡಿ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಬಹುದು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ವಾರ್ತಾಧಿಕಾರಿ ತುಕಾರಾಂ ರಾವ್ ಬಿ.ವಿ. ಇನ್ನಿತರರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page