ವಾಲ್ಮೀಕಿನಿಗಮದ ಹಗರಣ ಖಂಡಿಸಿ ಜಿಲ್ಲಾನಾಯಕ ಸಮುದಾಯದಿಂದ ಪ್ರತಿಭಟನೆಗೆ ವ್ಯಾಪಕ ಬೆಂಬಲ ವ್ಯಕ್ತಪಡಿಸಿ: ಮಾಜಿ ಶಾಸಕರಾದ ತಿಪ್ಪೇಸ್ವಾಮಿ ಕರೆ

by | 24/06/24 | ಸುದ್ದಿ


ಹಿರಿಯೂರು :
ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ ವರ್ಗಾವಣೆಯ ಗೋಲ್ ಮಾಲ್ ಖಂಡಿಸಿ ಹಾಗೂ ಸ್ವತ: ಹಣಕಾಸು ಖಾತೆ ಹೊಂದಿರುವ ಸಿ.ಎಂ ಸಿದ್ದರಾಮಯ್ಯ ನೇರ ಹೊಣೆಯಾಗಿರುವ ಕಾರಣ ರಾಜೀನಾಮೆಗೆ ಒತ್ತಾಯಿಸಿ ಜೂನ್ 28ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಲಿದ್ದು ಪ್ರಯುಕ್ತ ತಾಲ್ಲೂಕಿನ ಸಮಸ್ತ ನಾಯಕ ಸಮಾಜದ ಬಂಧುಗಳ ಅತಿಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮೊಳಕಾಲ್ಮೂರು ಮಾಜಿ ಶಾಸಕ ತಿಪ್ಪೇಸ್ವಾಮಿ ಕರೆ ನೀಡಿದರು.
ನಗರದ ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರದಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಾಯಕ ಸಮಾಜದ ಅಭಿವೃದ್ಧಿಗೆ ಮೀಸಲಿಟ್ಟಿದ ಹಣದಲ್ಲಿ 187 ಕೋಟಿ ಸಂಶಯಾತ್ಮಕ ಖಾತೆಗಳಿಗೆ ವರ್ಗಾವಣೆ ಮಾಡಿ, ನೆರೆಯ ತೆಲಂಗಾಣ, ಆಂಧ್ರಪ್ರದೇಶದ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಖರ್ಚು ಬರಿಸಲು ಬಳಕೆಯಾಗಿದೆ ಎಂಬುದಾಗಿ ಅವರು ಆರೋಪಿಸಿದರು.
ಸ್ವತ: ಮುಖ್ಯಮಂತ್ರಿಗಳೇ ಮೌಖಿಕ ಆದೇಶದ ಮೂಲಕ ಹಣ ವರ್ಗಾವಣೆ ಮಾಡಿಸಿ ಸಚಿವ ನಾಗೇಂದ್ರಪ್ಪ ತಲೆ ದಂಡ ನೀಡಿರುವುದು ಎಸ್ಟಿ ಸಮುದಾಯಕ್ಕೆ ಮಾಡಿದ ಘೋರ ಅನ್ಯಾಯವಾಗಿದೆ. ಸಚಿವ ನಾಗೇಂದ್ರ ರಾಜೀನಾಮೆ ಸಿದ್ದರಾಮಯ್ಯನವರ ಆಣತಿಯಂತೆ ಆಗಿರುವ ಕಾರಣಕ್ಕೆ ವಸ್ತು ಸ್ಥಿತಿಯನ್ನು ನಾಡಿನ ಜನತೆಯ ಮುಂದೆ ತೆರೆದಿಡಬೇಕಿದೆ.
ವಿಪರ್ಯಾಸ ಎಂದರೆ ಕಾಂಗ್ರೆಸ್ ನಿಂದ ಆಯ್ಕೆ ಆಗಿರುವ ನಮ್ಮ ಸಮಾಜದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಚುನಾಯಿತ ಪ್ರತಿನಿಧಿಗಳು.. ವಾಗಿರುವುದು ಖಂಡನೀಯ.
ಬೇರೆ ರಾಜ್ಯಗಳ ಚುನಾವಣೆಗೆ ಸರ್ಕಾರದ ಹಣದಲ್ಲಾಗಲಿ ಹಾಗೂ ಗ್ಯಾರಂಟಿ ಪೂರೈಸಲು ಸಂಪನ್ಮೂಲ ಕ್ರೂಡೀಕರಣದ ನೆಪದಲ್ಲಿ ಬೆಲೆ ಹೆಚ್ಚಳಕ್ಕೆ ಕಾರಣವಾಗಿರುವ ಕಾಂಗ್ರೆಸ್ ಸಿದ್ದರಾಮಯ್ಯನವರು ಬೃಹತ್ ಪ್ರತಿಭಟನೆ ಮೂಲಕ ರಾಜೀನಾಮೆ ನೀಡುವ ತೀರ್ಮಾನಕ್ಕೆ ಬರುವಂತೆ ಯಶಸ್ವಿಯಾಗಲು ಜನಸ್ತೋಮ ಸೇರಬೇಕು ಎಂಬುದಾಗಿ ಹೇಳಿದರು.
ಬಿಜೆಪಿ ಜಿಲ್ಲಾ ಎಸ್ ಜೆ ಮೋರ್ಚಾ ಅಧ್ಯಕ್ಷ ಶಿವಣ್ಣ ಮಾತನಾಡಿ, ಜಿಲ್ಲೆಯ ಎಲ್ಲಾ ಮಂಡಳಿಗಳಿಂದ ಸುಮಾರು 20 ಸಾವಿರಕ್ಕೂ ಹೆಚ್ಚು ಸಮಾಜದ ಬಂಧುಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು ,ಸಮಾವೇಶದಲ್ಲಿ ಕಾಂಗ್ರೆಸ್ ಸರ್ಕಾರವೇ ವಾಲ್ಮೀಕಿ ಹಗರಣದ ರೂವಾರಿಗಳು ಸರ್ಕಾರದ ಹಾಗೂ ಮುಖ್ಯಮಂತ್ರಿಗಳ ಹತ್ತಕ್ಷೇಪವಿಲ್ಲದೆ ಇಷ್ಟೊಂದು ದೊಡ್ಡ ಆರ್ಥಿಕ ಅವ್ಯವಹಾರ ಸಾಧ್ಯವೇ ಇಲ್ಲದ ಕಾರಣ ಸಿಎಂ ರಾಜೀನಾಮೆ ನೀಡಬೇಕು ಎಂದು ಅಗ್ರಹಿಸಲಾಗುವುದು ಎಂದರು.
ಬಿಜೆಪಿಯ ಚಳ್ಳಕೆರೆ ಮುಖಂಡರಾದ ಕೆ.ಟಿ.ಕುಮಾರಸ್ವಾಮಿ ಮಾತನಾಡಿ, ಚುನಾವಣೆಯ ನೀತಿ ಸಂಹಿತೆಯ ಅವಧಿಯಲ್ಲಿಯೇ ೧೮೭ ಕೋಟಿ ಅವ್ಯವಹಾರವಾಗಿದ್ದು ನಿಗಮದ ಅಧೀಕ್ಷಕ ಮನನೊಂದು ಅಧ್ಯಕ್ಷ ಚಂದ್ರಶೇಖರ್ ಹೆಸರು ಡೆತ್ ನೋಟ್ ನಲ್ಲಿ ಬರೆಯದೆ ಇದ್ದರೆ ಈ ಹಗರಣವನ್ನು ಕಾಂಗ್ರೆಸ್ ಸರ್ಕಾರ ಮುಚ್ಚಿ ಹಾಕುತ್ತಿತ್ತು ಎಂಬುದಾಗಿ ಆಪಾದಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯೆ ಶ್ರೀಮತಿ ರಾಜೇಶ್ವರಿ, ಮುಖಂಡರಾದ ಬಸವರಾಜನಾಯಕ, ಜೆ.ಬಿ.ರಾಜು, ನಗರಸಭೆ ಮಾಜಿಸದಸ್ಯ ಕೇಶವಮೂರ್ತಿ ಮಾತನಾಡಿದರು. ಬಾಳೆಕಾಯಿ ರಾಮದಾಸ್, ಕವನಾ, ಮೇಟಿಕುರ್ಕೆ ಲೋಕೇಶ್, ಬಬ್ಬೂರು ಸಿದ್ದೇಶ್, ಸೋಮಣ್ಣ, ತೊರೆಓಬೇನಹಳ್ಳಿ, ಶ್ರೀನಿವಾಸ, ಎಚ್.ಕೆ.ಪ್ರಜ್ವಲ್, ಹರ್ತಿರಾಜ್, ಸುಕೇಶ್, ಶಶಿಕೊಟ್ಟಿಗೆ, ಹನುಮಂತಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page