ವಿಕಲಚೇತನರಿಗೆ ವಿವಿಧ ಸೌಲಭ್ಯ: ಅರ್ಜಿಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ . ಸಲ್ಲಿಕೆ ಅವಧಿ ವಿಸ್ತರಣೆ

by | 06/09/23 | ಆರ್ಥಿಕ


ಚಿತ್ರದುರ್ಗ ಸೆ.6:
2023-24ನೇ ಸಾಲಿನ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ 8 ಯೋಜನೆಗಳಿಗೆ ಸುವಿಧಾ ತಂತ್ರಾಂಶದಡಿ ವಿಕಲಚೇತನರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.
ಫಲಾನುಭವಿ ಆಧಾರಿತ ಯೋಜನೆಗಳ ಹೆಸರು: ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ (ಎಂಆರ್‍ಡಬ್ಲ್ಯೂ, ವಿಆರ್‍ಡಬ್ಲ್ಯೂ), ವೈದ್ಯಕೀಯ ಪರಿಹಾರ ನಿಧಿ, ನಿರುದ್ಯೋಗ ಭತ್ಯೆ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ಶಿಶುಪಾಲನಾ ಭತ್ಯೆ ಯೋಜನೆಗಳಿಗೆ ಇಲಾಖೆಯ ವೆಬ್‍ಸೈಟ್ https://sevasindhu.karnataka.gov.in/sevasindhu/departmentservices ನಲ್ಲಿ ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ಒಂದು ಹಾರ್ಡ್ ಪ್ರತಿಯನ್ನು ಆಯಾ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರುಗಳಿಗೆ ಸಲ್ಲಿಸಬೇಕು.
ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರ ದೂರವಾಣಿ ಸಂಖ್ಯೆ ಚಿತ್ರದುರ್ಗ-9880821934, ಚಳ್ಳಕೆರೆ-9611266930, ಹಿರಿಯೂರು-9902888901, 9902898901, ಹೊಳಲ್ಕೆರೆ-9740030227, ಹೊಸದುರ್ಗ-9741829990, ಮೊಳಕಾಲ್ಮೂರು-9742725576 ಗೆ ಸಂಪರ್ಕಿಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಭಾಲಭವನ ಆವರಣ, ಸ್ಟೇಡಿಯಂ ಹತ್ತಿರ, ಚಿತ್ರದುರ್ಗ ದೂರವಾಣಿ ಸಂಖ್ಯೆ 08194-235284 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
===========

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page