ವಿಕಲಚೇತನರ ಕಲ್ಯಾಣ ಕ್ಷೇತ್ರ ಅತ್ಯುತ್ತಮ ಸೇವೆ: ರಾಜ್ಯ ಪ್ರಶಸ್ತಿಗೆ ಅರ್ಜಿ

by | 11/10/23 | ಸುದ್ದಿ

ಚಿತ್ರದುರ್ಗ ಅ.10:
ವಿಶ್ವ ವಿಕಲಚೇತನರ ದಿನಾಚರಣೆ-2023ರ ಸಂಬಂಧ ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ, ಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಿಕ್ಷಕರಿಗೆ “ರಾಜ್ಯ ಪ್ರಶಸ್ತಿ”ಗೆ ಅರ್ಜಿ ಆಹ್ವಾನಿಸಲಾಗಿದೆ. ಅ.25 ಅರ್ಜಿ ಸಲ್ಲಿಸಲು ಕೊನೆಯ ದಿನ
ಪ್ರತಿ ವರ್ಷ ಡಿಸೆಂಬರ್ 3ರಂದು “ವಿಶ್ವ ವಿಕಲಚೇತನರ ದಿನಾಚರಣೆ”ಯನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಸರ್ಕಾರದ ವತಿಯಿಂದ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸಿರುವ ಹಾಗೂ ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರುಗಗಳಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಗಳನ್ನು ಇಲಾಖೆಯಿಂದ ಅಥವಾ www.dwdsc.kar.nic.in ವೆಬ್‍ಸೈಟ್ ಮೂಲಕ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ನಮೂನೆಗಳನ್ನು ಪೂರ್ಣ ಪ್ರಸ್ತಾವನೆಗಳೊಂದಿಗೆ ಅಕ್ಟೋಬರ್ 25 ರೊಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ದ್ವಿ- ಪ್ರತಿಯಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ದೂರವಾಣಿ ಸಂಖ್ಯೆ 08194-235284 ಗೆ ಸಂಪರ್ಕಿಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *