ಚಳ್ಳಕೆರೆ: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಬದುಕಿನಲ್ಲಿ ಶಿಸ್ತು, ಸಮಯ ಪಾಲನೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಎನ್ಎಸ್ಎಸ್ ಶಿಬಿರಗಳು ಸಹಕಾರಿ ಆಗಲಿವೆ ಎಂದು ನಗರ ಪೊಲೀಸ್ ಠಾಣೆಯ ಡಿವೈಎಸ್ಪಿ ಟಿಬಿ ರಾಜಣ್ಣ ಅಭಿಪ್ರಾಯಪಟ್ಟರು.
ತಾಲೂಕಿನ ದೊಡ್ಡೇರಿ ಗ್ರಾಮದ ಡಿ ಉಪಾರಟ್ಟಿಯಲ್ಲಿ ನಗರದ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಎನ್ಎಸ್ಎಸ್ ಘಟಕಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಒಂದು ಉತ್ತಮ ವೇದಿಕೆಯಾಗಿದ್ದು ಗ್ರಾಮೀಣ ಭಾಗದ ಸ್ವಚ್ಛತೆ ಕಾಪಾಡುವಲ್ಲಿ ಎನ್ಎಸ್ಎಸ್ ಘಟಕಗಳ ಪಾತ್ರ ಅವಿಸ್ಮರಣೀಯವಾದದ್ದು ಇಂತಹ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಭವಿಷ್ಯದಲ್ಲಿ ಉತ್ತಮ ನಾಯಕತ್ವ ಗುಣಗಳನ್ನು ಬೆಳಸಿಕೊಳ್ಳುವುದಲ್ಲದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅತ್ಯುತ್ತಮ ಹುದ್ದೆಗಳನ್ನು ಅಲಂಕರಿಸಿದ ನಿದರ್ಶನಗಳಿವೆಎಂದು ತಿಳಿಸಿದರು.

ತಾಲೂಕಿನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ ರವೀಶ್ ಕುಮಾರ್ ಮಾತನಾಡಿ ಕಾಲೇಜಿನ ಎನ್ಎಸ್ಎಸ್ ಘಟಕವು ಹಲವು ವರ್ಷಗಳಿಂದ ಗ್ರಾಮೀಣ ಭಾಗಗಳಿಗೆ ತೆರಳಿ ಉತ್ತಮ ರೀತಿಯ ಸೇವೆ ಸಲ್ಲಿಸಿದ್ದರಿಂದ ಇಂದು ರಾಜ್ಯಮಟ್ಟದ ಪ್ರಶಸ್ತಿ ಪಡೆದು ತಾಲೂಕು ಹಾಗೂ ಕಾಲೇಜಿಗೆ ಉತ್ತಮ ಹೆಸರು ತಂದುಕೊಟ್ಟಿದೆ ಈ ಸಂದರ್ಭದಲ್ಲಿ ಎನ್ಎಸ್ಎಸ್ ಘಟಕದ ಅಧಿಕಾರಿಗಳನ್ನು ಹಾಗೂ ವಿದ್ಯಾರ್ಥಿಗಳನ್ನು ಅಭಿನಂದಿಸುತ್ತಿದ್ದೇನೆ ಎಂದು ತಿಳಿಸಿದರು.
ಎನ್ಎಸ್ಎಸ್ ಘಟಕದ ಯೋಜನಾಧಿಕಾರಿ ಶಾಂತಕುಮಾರಿ ಮಾತನಾಡಿ ಎನ್ಎಸ್ಎಸ್ ಘಟಕದ ಕಾರ್ಯ ಚಟುವಟಿಕೆಗಳಿಗೆ ಗ್ರಾಮೀಣ ಭಾಗಗಳಲ್ಲಿ ಸಾರ್ವಜನಿಕರಿಂದ ಹಾಗೂ ಅಧಿಕಾರಿಗಳಿಂದ ಉತ್ತಮ ಪ್ರತಿಕ್ರಿಯೆ ಹಾಗೂ ಪ್ರೋತ್ಸಾಹದಿಂದ ಇಂದಿಗೂ ಸಹ ಉತ್ತಮ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗಿದೆ ದೊಡ್ಡೇರಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಎನ್ಎಸ್ಎಸ್ ಘಟಕದ ಶಿಬಿರದ ಉತ್ತಮ ಕಾರ್ಯಕ್ಕಾಗಿ ರಾಜ್ಯಮಟ್ಟದಲ್ಲಿ ಪ್ರಶಸ್ತಿ ಲಭಿಸಿದೆ ಇದರಿಂದ ಇನ್ನಷ್ಟು ಜವಾಬ್ದಾರಿ ಹೆಚ್ಚಿದ್ದು ಘಟಕದ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಕಾರ್ಯರೂಪಕ್ಕೆ ತರಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದೊಡ್ಡೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್ ಸದಸ್ಯರಾದ ಸಿರಿಗುಂಡಪ್ಪ ಎ ಶೇಖರಪ್ಪ ಶಿಲ್ಪ ವೆಂಕಟೇಶ್ ಶಿವಣ್ಣ ಹನುಮಂತರಾಯ ಗುಂಡಣ್ಣ ಜಿಕೆ ಈರಣ್ಣ ಶಾಲೆಯ ಮುಖ್ಯೋಪಾಧ್ಯಾಯರಾದ ಚಾರುಮತಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಅಬಿವುಲ್ಲ ನಾಗರಾಜ್ ಬೆಳಗಟ್ಟ ಈರಣ್ಣ ಕುಮಾರಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
0 Comments