ಚಿತ್ರದುರ್ಗ ಮಾ.20:
2022-23ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸ್‍ಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್‍ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಮಾರ್ಚ್ 27 ರವರೆಗೆ ವಿಸ್ತರಿಸಲಾಗಿದೆ.
ಕೆಲವೊಂದು ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಕೋರ್ಸಿನ ತರಗತಿಗಳು ತಡವಾಗಿ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸುವಂತೆ ಗಣ್ಯವ್ಯಕ್ತಿಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳಿಂದ ಮನವಿಗಳು ಸ್ವೀಕೃತವಾಗಿರುತ್ತವೆ. ಅದರಂತೆ ಇಲಾಖೆಯ ಮೆಟ್ರಿಕ್ ನಂತರದ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸ್‍ಗಳ ವಿದ್ಯಾರ್ಥಿಗಳು ಮಾತ್ರ ವಿದ್ಯಾರ್ಥಿನಿಲಯಗಳಲ್ಲಿ ಮಾರ್ಚ್ 20 ರಿಂದ ಮಾರ್ಚ್ 27 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ವಿದ್ಯಾರ್ಥಿನಿಲಯ ಪ್ರವೇಶ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments