ಚಿತ್ರದುರ್ಗ ಅ.18:
2023-24ನೇ ಸಾಲಿಗೆ ರಾಷ್ಟ್ರೀಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (ಎನ್.ಎಸ್.ಪಿ ಪೋರ್ಟಲ್) ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ತಾವುಗಳು ವ್ಯಾಸಂಗ ಮಾಡುತ್ತಿರುವ ಶಾಲಾ ಕಾಲೇಜುಗಳು, ಶಿಕ್ಷಣ ಸಂಸ್ಥೆಗಳ ಮುಖಾಂತರ ಮೆಟ್ರಿಕ್ ಪೂರ್ವ ವಿಧ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ.
ಮೆಟ್ರಿಕ್ ನಂತರದ ವಿಧ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. Website: www.scholarships.gov.inನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ ಅರ್ಜಿಯ ಒಂದು ಪ್ರತಿಯನ್ನು ಆಯಾ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದೇಶ ಪುನರ್ವಸತಿ ಕಾರ್ಯಕರ್ತರು ಅಥವಾ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ.
ಮಾಹಿತಿಗಾಗಿ ತಾಲ್ಲೂಕು ಪಂಚಾಯ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿದ್ದೊದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಚಿತ್ರದುರ್ಗ ದೂರವಾಣಿ ಸಂಖ್ಯೆ 08194-235284 ಕ್ಕೆ ಸಂಪರ್ಕಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನ: ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments