ವಿದ್ಯುತ್ ದುರಸ್ತಿ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮ ಅಗತ್ಯವಾಗಿದೆ:ಕಾರ್ಯನಿರ್ವಾಹಕ ಎಂಜಿನಿಯರ್ ಲಕ್ಷ್ಮಿ

by | 05/07/24 | ಸುದ್ದಿ


ಹಿರಿಯೂರು:
ವಿದ್ಯುತ್ ದುರಸ್ತಿ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಅವಶ್ಯಕವಾಗಿದೆ. ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವುದರಿಂದ ಪ್ರಾಣಹಾನಿ ಹಾಗೂ ಇತರೆ ಅಪಾಯಗಳನ್ನು ತಪ್ಪಿಸಬಹುದು ಎಂಬುದಾಗಿ ಕಾರ್ಯನಿರ್ವಾಹಕ ಎಂಜಿನಿಯರ್ ಲಕ್ಷ್ಮಿ ಹೇಳಿದರು.
ತಾಲ್ಲೂಕಿನ ಚಳ್ಳಕೆರೆ ರಸ್ತೆಯಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮದ 220 ಕೆವಿ ಸ್ವೀಕರಣಾ ಕೇಂದ್ರದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯುತ್ ಸಂಬಂಧಿತ ಕಾರ್ಯನಿರ್ವಹಣೆ ವೇಳೆ ನಿರ್ಲಕ್ಷ್ಯ ವಹಿಸಿದರೆ ಪ್ರಾಣ ಹಾನಿಯಾಗುವ ಸಂಭವ ಇರುತ್ತದೆ. ಜನಸಾಮಾನ್ಯರಲ್ಲಿ ಅರಿವಿನ ಕೊರತೆ ಇರುವುದರಿಂದ ವಿದ್ಯುತ್ ಅವಗಡಗಳ ಸಂಖ್ಯೆ ಹೆಚ್ಚುತ್ತಿವೆ. ಇವುಗಳನ್ನು ತಡೆಯುವ ಉದ್ದೇಶದಿಂದ ವಿದ್ಯುತ್ ಸುರಕ್ಷತೆಯ ಜಾಗೃತಿ ಎಲ್ಲರಿಗೂ ಅವಶ್ಯ ಎಂಬುದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪವರ್ ಮೆನ್, ಸಿಬ್ಬಂದಿ, ಸಾರ್ವಜನಿಕರಿಗೆ ವಿದ್ಯುತ್ ದುರಸ್ತಿ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಬಳಸಬೇಕಾದ ಸುರಕ್ಷತಾ ಸಲಕರಣೆಗಳ ಕುರಿತು ಅರಿವು ಮೂಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ, ನೋಡಲ್ ಅಧಿಕಾರಿ ಕೊಟ್ರೇಶ್ ಮತ್ತು ಷಣ್ಮುಖಪ್ಪನವರು ಭಾಗವಹಿಸಿದ್ದರು ಹಾಗೂ ತಾಲ್ಲೂಕಿನ ಸುತ್ತಮುತ್ತಲಿನ ಎಲ್ಲಾ ವಿದ್ಯುತ್ ಉಪ ಕೇಂದ್ರಗಳ ಸಹಾಯಕ ಇಂಜಿನಿಯರ್ ಗಳಾದ ಬಸವರಾಜು, ಉಮೇಶ್, ದರ್ಶನ್, ಮಂಜು, ಅಭಿಜಿತ್ ಹಾಗೂ ನಿರ್ವಹಣಾ ಸಿಬ್ಬಂದಿ ವರ್ಗದವರು, ಪತ್ರಕರ್ತ ಎಂ.ಬಸೇಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page