ವಿದ್ಯುತ್ ಸುರಕ್ಷತಾ ಜಾಗೃತಿ ಜಾಥಾಕ್ಕೆ ಚಾಲನೆ : ಬೆಸ್ಕಾಂ ಸಿಬ್ಬಂದಿಯಿಂದ ಜಾಗೃತಿ.

by | 19/12/23 | ಸುದ್ದಿ

ಚಿತ್ರದುರ್ಗ ಡಿ.19:
ವಿದ್ಯುತ್ ಅಪಘಾತ ತಡೆ ಸಪ್ತಾಹದ ಅಂಗವಾಗಿ ಬೆಸ್ಕಾಂ ಚಿತ್ರದುರ್ಗ ವಿಭಾಗದಿಂದ ಮಂಗಳವಾರ ವಿದ್ಯುತ್ ಸುರಕ್ಷಣಾ ಜಾಗೃತಿ ಜಾಥಾವನ್ನು ಚಿತ್ರದುರ್ಗ ನಗರದಲ್ಲಿ ನಡೆಸಲಾಯಿತು. ನಗರದ ಹೊಳಲ್ಕೆರೆ ರಸ್ತೆಯ ಕನಕ ಸರ್ಕಲ್ ಬಳಿ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯುರ್ ಡಿ.ಜಯಣ್ಣ ವಿದ್ಯುತ್ ಸುರಕ್ಷಣಾ ಜನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಡಿ.ಜಯಣ್ಣ, ಸಾರ್ವಜನಿಕರು, ರೈತರು, ಶಾಲಾ ಮಕ್ಕಳು ಹಾಗೂ ಬೆಸ್ಕಾಂ ಸಿಬ್ಬಂದಿಗೆ ವಿದ್ಯುತ್ ಅಪಘಾತ ತಡೆಯುವ ಸಲುವಾಗಿ ಅರಿವು ಮೂಡಿಸಲು ಜಾಥಾ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ವಿದ್ಯುತ್ ಅಪಘಾತ ಉಂಟಾಗದಂತೆ ಹೇಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬೆಸ್ಕಾಂ ಮುಂದಾಗಿದೆ. ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಸುರಕ್ಷಣಾ ಜಾಥಾ ನಡೆಸಿ ಜನರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ವಿದ್ಯುತ್ ಅಪಘಾತ ಹಾಗೂ ತುರ್ತು ಸಂದರ್ಭದಲ್ಲಿ ದೂರವಾಣಿ ಸಂಖ್ಯೆ 1912 ಕರೆ ಮಾಡಿ ಮಾಹಿತಿ ನೀಡಬಹುದು. ಚಿತ್ರದುರ್ಗ ವಿಭಾಗದ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಚಿತ್ರಕಲೆ, ಪ್ರಬಂಧ, ಚರ್ಚಾ ಸ್ಪರ್ಧೆಗಳನ್ನು ಆಯೋಜಿಸಿ ವಿದ್ಯುತ್ ಅಪಘಾತಗಳ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ವಿದ್ಯುತ್ ಅಪಘಾತ ತಡೆಯುವ ಸಲುವಾಗಿ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ನಂತರ ಬೆಸ್ಕಾಂ ಸಿಬ್ಬಂದಿಗೆ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ನಗರದ ಹೊಳಲ್ಕೆರೆ ರಸ್ತೆಯ ಕನಕ ಸರ್ಕಲ್‍ನಿಂದ ಆರಂಭವಾದ ಜನ ಜಾಗೃತಿ ಜಾಥಾವು, ಗಾಂಧಿ ಸರ್ಕಲ್, ತಾಲ್ಲೂಕು ಕಚೇರಿ, ಜೆ.ಸಿ.ಆರ್ ಬಡಾವಣೆ ಮುಖಾಂತರ ಆರ್.ಟಿ.ಓ ಕಚೇರಿ ಬಳಿಯ ಕೆಇಬಿ ಸಮುದಾಯ ಭವನ ತಲುಪಿತು.
ವಿದ್ಯುತ್ ಸುರಕ್ಷಣಾ ಜನ ಜಾಗೃತಿ ಜಾಥಾದಲ್ಲಿ ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿಯರ್‍ಗಳಾದ ಮೇಘರಾಜ್, ಶಿವಕುಮಾರ್, ಉಪ ಮುಖ್ಯ ವಿದ್ಯುತ್ ಪರಿವೀಕ್ಷಕರಾದ ಜೆ.ಹೆಚ್.ಶ್ರೀನಿವಾಸ್, ಎಇಇಗಳಾದ ನಾಗರಾಜು, ಜಯಣ್ಣ, ಬೆಸ್ಕಾಂ ನೌಕರರ ಸಂಘದ ಉಪಾಧ್ಯಕ್ಷ ಕೆ.ಪಿ.ಬಸವರಾಜು, ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಮಹಾಂತೇಶ್, ಕಲ್ಯಾಣ ಸಂಸ್ಥೆ ಸಂಘಟನಾ ಕಾರ್ಯದರ್ಶಿ ಜೆ.ರಮೇಶ್ ಹಾಗೂ ಬೆಸ್ಕಾಂ ಸಿಬ್ಬಂದಿ, ಪವರ್ ಮೆನ್‍ಗಳು ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page