ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಮುಖಂಡರು ವಿವಿಧ ಪಕ್ಷಗಳಿಂದ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ಖುಷಿ ತಂದಿದೆ ಶಾಸಕ ಟಿ.ರಘುಮೂರ್ತಿ

by | 05/03/23 | ರಾಜಕೀಯ

ಚಳ್ಳಕೆರೆ ಜನಧ್ವನಿ ವಾರ್ತೆ ಮಾ. 5.
ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಮುಖಂಡರು ವಿವಿಧ ಪಕ್ಷಗಳಿಂದ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ಖುಷಿ ತಂದಿದೆ ಎಂದು ಶಾಸಕ ಟಿ.ರಘುಮೂರ್ತಿ ಹರ್ಷ ವ್ಯಕ್ತಪಡಿಸಿದರು.
ನಗರ ಹಾಗೂ ಗ್ರಾಮೀಣ ಭಾಗ ಸೇರಿದಂತೆ ವಿಧಾನ ಸಭಾಕ್ಷೇತ್ರ ವ್ಯಾಪ್ತಿಯ ಗ್ರಾಪಂ ಹಾಗೂ ವಾರ್ಡ್ ವ್ಯಾಪ್ತಿಯಲ್ಲಿ ಪಕ್ಷ ಸೇರ್ಪಡೆ, ಗ್ಯಾರೆಂಟ್ ಕಾರ್ಡ್ ವಿತರಣೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.


ಕಾಂಗ್ರೆಸ್ ಪಕ್ಷದಿಂದ ಮಾತ್ರ ಸರ್ವತೋಮುಖ ಪ್ರಗತಿ ಸಾಧ್ಯ ಇದನ್ನು ಮನಗಂಡು ವಿವಿಧ ಪಕ್ಷದ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಒಲವು ತೋರಿಸುತ್ತಿದ್ದಾರೆ.
೨೦೨೩ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಯುವಕರು ಕಾರ್ಯಕರ್ತರು ಪಣತೊಡಬೇಕು ಎಂದು ಕಿವಿಮಾತು ಹೇಳಿದರು.
ಚುನಾವಣೆ ಕೆಲವೇ ದಿನಗಳು ಬಾಕಿ ಇದ್ದು ಶಾಸಕ ಟಿ.ರಘುಮೂರ್ತಿ ಕ್ಷೇತ್ರದಲ್ಲಿ ಚುರುಕಿನಿಂದ ಓಡಾಡುತ್ತಿದ್ದಾರೆ. ಮತದಾರರ ಓಲೈಕೆಗೆ ಮುಂದಾಗಿದ್ದಾರೆ. ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಚುರುಕಿನಿಂದ ಮತದಾರರಿಗೆ ಮತ್ತಷ್ಟು ಹತ್ತಿರವಾಗುತ್ತಿದ್ದಾರೆ.


ಕಾಂಗ್ರೆಸ್ ಪಕ್ಷದ ಭರವಸೆಗಳ ಗ್ಯಾರಂಟಿ ಕಾರ್ಡ್ ವಿತರಣೆ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯಕರ್ತರೊಂದಿಗೆ ಶಾಸಕರು ಸಹ ಜತೆಗೂಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮತದಾರರಿಗೆ ಲಭ್ಯವಾಗುವ ಯೋಜನೆಗಳ ಬಗ್ಗೆ ತಿಳಿ ಹೇಳಿದ್ದಾರೆ. ಕಾರ್ಯಕ್ರಮ. ಗೃಹಲಕ್ಷ್ಮಿ.ಗೃಹಜ್ಯೋತಿ ಯೋಜನೆಗಳು ಹಾಗೂ ಚಳ್ಳಕೆರೆ ವಿಧಾನ ಸಭಾಕ್ಷೇತ್ರವ್ಯಾಪ್ತಿಯಲ್ಲಿ 10 ವರ್ಷಗಳ ಅಭಿವೃದ್ಧಿ ಕಾಮಗಾರಿಗಳ ಚಿತ್ರಣ ಹೊಂದಿರುವ ಜನಪರ ಯೋಜನೆಗಳ ಕ್ಯಾಲೆಂಡರ್ ವಿತರಣೆ ಮಾಡುವ ಮೂಲಕ ಬಿಜೆಪಿಯವರ ಜನವಿರೋಧಿ ನೀತಿಗಳನ್ನು ಮನೆ ಮನೆಗಳಿಗೆ ಭೇಟಿ ನೀಡಿ ತಿಳಿಸುತ್ತಿದ್ದಾರೆ.

ವೀಡಿಯೋ ವೈರಲ್.

ವೇದಾವತಿ ನದಿ ಪಾತ್ರದಲ್ಲಿ ತುಂಬಿದ ಬ್ಯಾರೇಜ್ ಬಿಸಿಲಿನ ತಾಪಾಕ್ಕೆ ನೂರಾರು ಜನರು ನೀರಿನಲ್ಲಿ ಈಜಿ ತಂಪು ಮಾಡಿಕೊಳ್ಳುತ್ದಿತಾರೆ.ದಿನನಿತ್ಯ ನದಿ ಪಾತ್ರದ ಬ್ಯಾರೇಜ್ ಗಳತ್ತ ಜನರು ಬರುತ್ತಾರೆ ಇದೇ ಸಂದರ್ಭದಲ್ಲಿ ಶಾಸಕ ಟಿ.ರಘುಮೂರ್ತಿ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕ ಟಿ.ರಘುಮೂರ್ತಿಯವರನ್ನು ಹೆಗಲ ಮೇಲೆ ಒತ್ತು ಹರ್ಷ ವ್ಯಕ್ತಪಡಿಸಿದ ವಿಡೀಯೋ ವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಈ ವೇಳೆ ನಗರಸಭೆ, ಗ್ರಾಪಂ ಸದಸ್ಯರು, ಮಾಜಿ ಜಿಪಂ ,ತಾಪಂ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *