ಚಳ್ಳಕೆರೆ ಆ.31ತಾಲೂಕಿನಲ್ಲಿ ಪಟ್ಟಣ ಪ್ರದೇಶಕ್ಕಿಂತ ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿದೆ. ಗ್ರಾಮೀಣ ಭಾಗದ, ಚಿಲ್ಲರೆ, ಚಹಾದ ಅಂಗಡಿ, ಸೇರಿದಂತೆ ಹಲವು ಮನೆಗಳಲ್ಲೂ ಸಹ ಕದ್ದುಮುಚ್ಚಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ 39 ಸಾವಿರ ಮೌಲ್ಯದ ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿದಿಕೊಂಡಿದ್ದಾರೆ
ಚಳ್ಳಕೆರೆ ತಾಲ್ಲೂಕಿನ ವಿವಿಧೆಡೆ ಬುಧವಾರ ರಾತ್ರಿ ದಾಳಿ ನಡೆಸಿರುವ ಅಬಕಾರಿ ಇಲಾಖೆ ಅಧಿಕಾರಿಗಳು 39,000 ಮೌಲ್ಯದ 49 ಲೀಟರ್ ಅಕ್ರಮ ಮದ್ಯ ವಶಪಡಿಸಿಕೊಂಡಿದ್ದಾರೆ
ಗೋಪನಹಳ್ಳಿ, ಬೆಳಗೆರೆ ನಾರಾಯಣಪುರ, ಕಮ್ಮತ್ ಮರಿಕುಂಟೆ, ಟಿ.ಎನ್.ಕೋಟೆ, ಯಲಗಟ್ಟೆ ಗೊಲ್ಲರಹಟ್ಟಿ, ಚೌಳೂರು ಮತ್ತು ನಗರದ ಸೋಮಗುದ್ದು ರಸ್ತೆ, ಗಾಂಧಿನಗರ, ಅಂಬೇಡ್ಕರ್ ನಗರ, ಎಪಿಎಂಸಿ ಆವರಣದ ಅಂಗಡಿಗಳ ಮೇಲೆ ದಾಳಿ ನಡೆಸಿದರು.
ತಾಲ್ಲೂಕಿನ ಯಲಗಟ್ಟೆ ಗೊಲ್ಲರಹಟ್ಟಿ ಗ್ರಾಮದ ಎಸ್. ಭದ್ರಯ್ಯ ಮತ್ತು ಜೈರಾಂ ವಿರುದ್ದ ಪ್ರಕರಣ ದಾಖಲಾಗಿದೆ.
ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಹುಡುಕಾಟ ನಡೆಸಲಾಗಿದೆ ಎಂದು ಅಬಕಾರಿ ನಿರೀಕ್ಷಕ ನಾಗರಾಜ ತಿಳಿಸಿದ್ದಾರೆ.
ಚಿತ್ರದುರ್ಗ ಅಬಕಾರಿ ಉಪ ಆಯುಕ್ತರು ಹಾಗೂ ಹಿರಿಯೂರು ಉಪ ಅಧೀಕ್ಷಕರ ಮಾರ್ಗದರ್ಶನದಲ್ಲಿ ಅಬಕಾರಿ ನಿರೀಕ್ಷಕಿ ವನಿತಾ, ಉಪ ನಿರೀಕ್ಷಕ ಡಿ.ಟಿ. ತಿಪ್ಪಯ್ಯ, ಅಬಕಾರಿ ಇನ್ಸ್ಪೆಕ್ಟರ್ ಸಿ ನಾಗರಾಜ್ ಕಾನ್ಸ್ಟೆಬಲ್ ಮಂಜುಳಾ, ಆರ್. ಕುಮಾರ್, ನಾಗರಾಜ ತೋಳಮಟ್ಟಿ ಅವರ ತಂಡ ಕಾರ್ಯಾಚರಣೆ ನಡೆಸಿದಾರೆ
0 Comments