ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂಜಿನಿಯರಿಂಗ್ ಕಾಲೇಜಿನ ಅತಿಥಿ ಉಪನ್ಯಾಸಕರ ಪ್ರತಿಭಟನೆ

by | 29/11/23 | ಪ್ರತಿಭಟನೆ


ಚಳ್ಳಿಕೆರೆನ.29 ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರುಗಳು
ತರಗತಿಗಳನ್ನು ಬಹಿಷ್ಕರಿಸಿ ವಿವಿಧ ಬೇಡಿಕೆಗಳನ್ಕುನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.


ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಅರೆಕಾಲಿಕ
ಉಪನ್ಯಾಸಕರಗಳಾದ ನಾವು ಹಲವು ವರ್ಷಗಳಿಂದ ಅತ್ಯಂತ ಕಡಿಮೆ ಗೌರವ ಧನ 15000/- ರೂಗಳಿಗೆ
ಸೇವೆಯನ್ನು ಸಲ್ಲಿಸುತ್ತಾ ಬಂದಿರುತ್ತೇವೆ. ನಮ್ಮ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಲು ಹಿಂದಿನ ಮತ್ತು ಪ್ರಸ್ತುತ ಸರ್ಕಾರಕ್ಕೆ ಈ ಕೆಳಕಾಣಿಸಿದ ಬೇಡಿಕೆಗಳ ಕುರಿತು ಹಲವು ಬಾರಿ ಮನವಿ ಮಾಡಿದ್ದರೂ ಕೂಡ ಸರ್ಕಾರಗಳು ಮಲತಾಯಿ ಧೋರಣೆ ಮಾಡಿ ನಮ್ಮ ಬೇಡಿಕೆಗಳನ್ನು ಈಡೇರಿಸದ ಕಾರಣ ತರಗತಿಗಳಿಗೆ ಬಹಿಷ್ಕಾರಿಸಿ ಬುಧವಾರದಿಂದ ಅನಿರ್ಧಿಷ್ಟಾವಧಿವರೆಗೂ ಯಾವುದೇ ತರಗತಿಗಳನ್ನು ತೆಗೆದುಕೊಳ್ಳದೇ ಮೌನವಾಗಿ
ನಮ್ಮ ಮನಸ್ಸಿನ ನೋವುನ್ನು ಹೊರಹಾಕಬೇಕೆಂದು ನಮ್ಮ ಸಂಘಟನೆ ನಿರ್ಧರಿಸಿದೆ. ಆದ ಕಾರಣ ದಯಾಮಾಡಿ
ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನಮ್ಮ ಮನವಿಯನ್ನು ಕೂಡಲೇ ಸರ್ಕಾರ ಮತ್ತು ತಾಂತ್ರಿಕ ಶಿಕ್ಷಣ
ಇಲಾಖೆಯ ಗಮನಕ್ಕೆ ತರಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇವೆ.
ಬೇಡಿಕೆಗಳು:
1. ಪ್ರಸ್ತುತ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ನೀಡುತ್ತಿರುವ ಕಾರ್ಯಭಾರ, ವೇತನ,
ಕೃಪಾಂಕ, ಸೇವಾ ಪ್ರಮಾಣ ಪತ್ರ ನೀಡುತ್ತಿರುವ ರೀತಿಯಲ್ಲೇ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ
ಅರೆಕಾಲಿಕ ಉಪನ್ಯಾಸಕರುಗಳಿಗೆ ವಿಸ್ತರಿಸುವುದು
2. ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರುಗಳನ್ನು ಖಾಯಂಗೊಳಿಸಬೇಕು
3. ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರುಗಳಿಗೆ ಪ್ರತಿ ತಿಂಗಳೂ
ವೇತನವನ್ನು ನೀಡುವಂತೆ ಅತಿಥಿ ಉಪನ್ಯಾಸಕರು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page