ಚಳ್ಳಕೆರೆ ಜನಧ್ವನಿ ವಾರ್ತೆ ಫೆ27 ವಿವಿಧ ಬೇಡಿಕೆ ಈಡೇರಿಕೆಗೆ
ಆಗ್ರಹಿಸಿ ಜಿಲ್ಲೆಯಲ್ಲಿ ಮಾ.1ರಿಂದಅನಿರ್ದಿಷ್ಟಾವಧಿವರೆಗೆ ರಾಜ್ಯದ ಎಲ್ಲ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ
ಮೂಲಕ ಪ್ರತಿಭಟನೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಲಿಂಗೇಗೌಡ ಹೇಳಿದರು.
ನಗರದ ಸರಕಾರಿ ನೌಕರರ ಭವನ್ನು ರಾಜ್ಯ ನೌಕರರ ಸಂಘ ವತಿಯಿಂದ ಆಯೋಜಿಸಿದ್ದಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು.
ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೌಕರರ ಬೇಡಿಕೆಗಳ ಈಡೇರಿಕೆಗೆ ಉದಾಸೀನತೆ ತೋರಿಸಿದ್ದಾರೆ. ಬೊಮ್ಮಾಯಿ ಅವರ ಧೋರಣೆಯಿಂದ ರಾಜ್ಯದ 9 ಲಕ್ಷ ನೌಕರರಿಗೆ ಬೇಸರ ಆಗಿದೆ. ಶಾಲೆ, ಕಾಲೇಜು, ಆಸ್ಪತ್ರೆ
ಸೇರಿದಂತೆ ಎಲ್ಲ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಬೃಹತ್ ಹೋರಾಟ ಮಾಡಲು ಯೋಜನೆ ರೂಪಿಸಲಾಗಿದೆ
ಎಂದು ಮಾಹಿತಿ ನೀಡಿದರು. 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ತರಲು ಮಧ್ಯಂತರ ಆದೇಶ
ಹೊರಡಿಸಿದರೆ ಮಾತ್ರ ಹೋರಾಟ ವಾಪಸ್ ಪಡೆಯುತ್ತೇವೆ. ಇಲ್ಲದಿದ್ದರೆ ಮುಷ್ಕರ ಮಾಡುವುದು ಖಚಿತ. ಇದಕ್ಕೆ ಅವಕಾಶ ನೀಡದೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನುವ ವಿಶ್ವಾಸವಿದೆ. ರಾಜ್ಯ ಸರ್ಕಾರ ಫೆ.28ರೊಳಗಾಗಿಬೇಡಿಕೆಯನ್ನು ಈಡೇರಿಸದಿದ್ದರೆ ಮಾ. 01 ರಿಂದ ನೌಕರರು ಕೆಲಸಕ್ಕೆ ಗೈರು
ಹಾಜರಾಗುವುದರ ಮೂಲಕ ಪ್ರತಿಭಟನೆ ನಡೆಸಲಾಗುತ್ತದೆ. ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ.

ಅಲ್ಲದೆ ಕಾಲಾವಕಾಶ ನೀಡಲಾಗಿತ್ತು. ಆಯವ್ಯಯದಲ್ಲಿ ನಮ್ಮ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಮಾತನಾಡಿಲ್ಲ. ಇದರಿಂದ ನಮಗೆ ತುಂಬಾ ನೋವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಗಡುವು ನೀಡಲಾಗಿದೆ ಎಂದರು. ಮುಷ್ಕರಲ್ಲಿ ಎಲ್ಲಾ ಸರ್ಕಾರಿ ನೌಕರರು ಭಾಗವಹಿಸಲಿದ್ದಾರೆ. ನಮ್ಮಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ. ಎಲ್ಲರೂ ಒಟ್ಟಾಗಿ ಪ್ರತಿಭಟನೆ ಮಾಡಲಾಗುತ್ತಿದೆ. ಇದರ ಬಗ್ಗೆ ರಾಜ್ಯಾಧ್ಯಕ್ಷರು ಸಭೆ ಕರೆಯುವುದರ ಮೂಲಕ ಎಲ್ಲಾ 200 ಸಂಘಟನೆಯನ್ನು ಒಂದುಗೂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ
ಸರ್ಕಾರಿ ನೌಕರರ ಕೊರತೆ ಇದ್ದರೂ ಉತ್ತಮ ಕೆಲಸ ಮಾಡಲಾಗುತ್ತಿದೆ. ಆರು ಲಕ್ಷ ನೌಕರರಲ್ಲಿ 2.60 ನೌಕರರ ಕೊರತೆ ಇದೆ. ಇದರ ಬಗ್ಗೆಯೂ ಸರ್ಕಾರ ಆಲೋಚನೆ ಮಾಡಬೇಕಿದೆ. ಸರ್ಕಾರ ಎನ್.ಪಿ.ಎಸ್. ತೆಗೆದು ಒ.ಪಿ.ಎಸ್. ಬಗ್ಗೆಯೂ ಜಾರಿಗೊಳಿಸುವುದರ ನಿಗಾವಹಿಸಬೇಕಿದೆ ಎಂದರು. ಈ ಸಂದರ್ಭ ಸರಕಾರಿ ನೌಕರ ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ನೌಕರರು.ಸರಕಾರಿ ನೌಕರರ ವಿವಿಧ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
0 Comments