ವಿವಿಧ ಸೌಲಭ್ಯಕ್ಕಾಗಿ ವಿಕಲಚೇತನರಿಂದ ಅರ್ಜಿ

by | 02/11/23 | ಆರ್ಥಿಕ


ಚಿತ್ರದುರ್ಗ ನ.02:
2023-24ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ.
ಶುಲ್ಕ ಮರುಪಾವತಿ, ವಿವಾಹ ಪ್ರೋತ್ಸಾಹಧನ, ನಿರಾಮಯ, ಸ್ಪರ್ಧಾ ಚೇತನ ಈ ಯೋಜನೆಗಳಡಿ ಪ್ರಯೋಜನವನ್ನು ಪಡೆಯಲು ವಿಕಲಚೇತನರು ಕಡ್ಡಾಯವಾಗಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಆಧಾರ ಕಾರ್ಡ್ ಲಿಂಕ್ ಮಾಡಿಸಿರುವ ಉಳಿತಾಯ ಖಾತೆ ಪುಸ್ತಕದ ಪ್ರತಿ ಹಾಗೂ ವೈದ್ಯಕೀಯ ಪ್ರಮಾಣ ಪತ್ರ, ವಿಕಲಚೇತನರ ವಿಶಿಷ್ಠ ಗುರುತಿನ ಚೀಟಿ (ಯು.ಡಿ.ಐ.ಡಿ), ಇತ್ತೀಚಿನ ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಆಧಾರ ಕಾರ್ಡ್& ಮತದಾರರ ಗುರುತಿನ ಚೀಟಿ, ನಿವಾಸಿ ದೃಢೀಕರಣ ಪತ್ರ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:15-12-2023 ಆಗಿರುತ್ತದೆ. ಈ ಯೋಜನೆಗಳ ಅರ್ಜಿ ನಮೂನೆಗಳನ್ನು www.dwdsc.kar.nic.in ವೆಬ್‍ಸೈಟ್‍ನಿಂದ ನೇರವಾಗಿ ಡೌನ್‍ಲೋಡ್ ಮಾಡಿಕೊಳ್ಳಬಹುದು ಅಥವಾ ತಾಲ್ಲೂಕು ಪಂಚಾಯ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರಿಂದ, ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ನಗರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಗರ ಪುನರ್ವಸತಿ ಕಾರ್ಯಕರ್ತರುಗಳನ್ನು ಸಂಪರ್ಕಿಸಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಛೇರಿ, ಬಾಲಭವನ ಆವರಣ, ಸ್ಟೇಡಿಯಂ ಹತ್ತಿರ, ಚಿತ್ರದುರ್ಗ, ದೂ: 08194-235284ನ್ನು ಸಂಪರ್ಕಿಸಬಹುದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *