ವಿಶೇಷ ಕನ್ನಡ ರಾಜ್ಯೋತ್ಸವ ಆಚರಣೆಗೆ ಸುತ್ತೋಲೆ ಹೊರಡಿಸಿದ ಸರಕಾರ.

by | 30/10/23 | ಸುದ್ದಿ


ಚಳ್ಳಕೆರೆ ಅ.30.ನವಂಬರ್ 1ರಂದು ಕನ್ನಡ ರಾಜ್ಯೊತ್ಸವ ಆಷರಣೆಗೆ ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ.
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ
ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು
ಉದ್ದೇಶಿಸಲಾಗಿದೆ. ಅದರ ಅಂಗವಾಗಿ ಈಗಾಗಲೇ ಸನ್ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ
ನಡೆಸಿ ಕಾರ್ಯಕ್ರಮದ ಸ್ವರೂಪ ಸಿದ್ಧಪಡಿಸಲಾಗಿದೆ. ಅದರಂತೆ, ಪ್ರತಿ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಡಳಿತ
ವತಿಯಿಂದ ಈ ಕೆಳಕಂಡ ಅಂಶಗಳನ್ನು ಅನುಷ್ಠಾನಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವುದು
ಹಾಗೂ ಸಂಬಂಧಪಟ್ಟ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಈ ಮೂಲಕ ಸೂಚಿಸಿದೆ.
. ನವೆಂಬರ್ 1 ರಂದು ರಾಜ್ಯದ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ
ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 “ಹೆಸರಾಯಿತು ಕರ್ನಾಟಕ, ಉಸಿರಾಗಲಿ
ಕನ್ನಡ” ಎಂಬ ಘೋಷ ವಾಕ್ಯವನ್ನು ಬರೆಯುವಂತೆ ನಾಗರಿಕರಲ್ಲಿ ಮನವಿ ಮಾಡುವುದು.
ನವೆಂಬರ್ 1 ರ ಬೆಳಿಗ್ಗೆ 9.00 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ)
ನಾಡ ಗೀತೆಯನ್ನು ಪ್ರಸಾರ ಮಾಡಲಾಗುವುದು. ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ತ
ನಾಗರಿಕರು ಎದ್ದು ನಿಂತು ರಾಷ್ಟ್ರ ಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡ ಗೀತೆಗೂ
ಗೌರವ ಸಲ್ಲಿಸಲು ಮನವಿ ಮಾಡುವುದು.
. ನವೆಂಬರ್ 1 ರ ಸಂಜೆ 5.00 ಗಂಟೆಗೆ ನಿಮ್ಮ-ನಿಮ್ಮ ಜಿಲ್ಲೆಗಳ ಎಲ್ಲಾ ಗ್ರಾಮಗಳ
ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ
ಸುವರ್ಣ ಸಂಭ್ರಮ ಗಾಳಿಪಟ ಉತ್ಸವ ಆಚರಿಸಲು ಮನವಿ ಮಾಡುವುದು.
. ನವೆಂಬರ್ 1 ರ ಸಂಜೆ 7.00 ಗಂಟೆಗೆ ನಿಮ್ಮ-ನಿಮ್ಮ ಜಿಲ್ಲೆಗಳ ಎಲ್ಲಾ ಗ್ರಾಮಗಳ ಮನೆಗಳ
ಮುಂದೆ, ಕಛೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ (ದೀಪ)
ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗುವುದು.
ಮೇಲ್ಕಂಡ ಎಲ್ಲಾ ಅಂಶಗಳ ಬಗ್ಗೆ ಜಿಲ್ಲಾಡಳಿತ ಸೂಕ್ತ ಸುತ್ತೋಲೆಗಳನ್ನು ಹೊರಡಿಸಿ, ಜಿಲ್ಲೆಯ
ಎಲ್ಲಾ ನಾಗರಿಕರ
ಹಾಗೂ ಸಂಘ ಸಂಸ್ಥೆಗಳ ಸಹಯೋಗ ಪಡೆದು ಕಾರ್ಯಕ್ರಮ
ಯಶಸ್ವಿಗೊಳಿಸಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಿವರಾಜ ಎಸ್ ತಂಗಡಗಿ
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ
ಮತ್ತು ಸಂಸ್ಕೃತಿ ಸಚಿವರು ಹಾಗೂ
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಸುತ್ತೋಲೆ ಹೊರಡಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page