ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಪರಿಸರ ಸಂರಕ್ಷಣೆ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು

by | 15/06/24 | ಸುದ್ದಿ

ಚಿತ್ರದುರ್ಗ ಜೂನ್15:
ವಿದ್ಯಾರ್ಥಿಗಳು ಅಧ್ಯಯನದ ಜತೆಗೆ ಪರಿಸರ ಕಾಳಜಿ ವಹಿಸಬೇಕು. ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬ ನಾಗರೀಕರೂ ಕೈಜೋಡಿಸಬೇಕು. ಅಂದಾಗ ಮಾತ್ರ ಭವಿಷ್ಯದಲ್ಲಿ ಪರಿಸರ ಸಮತೋಲನೆ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಮೀಪದ ಕ್ರೀಡಾಭವನದಲ್ಲಿ ಶನಿವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಚಿತ್ರಕಲೆ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪರಿಸರ ಸಂರಕ್ಷಣೆ ಕಾರ್ಯಕ್ಕೆ ವಿದ್ಯಾರ್ಥಿಗಳು ಜಾಗೃತರಾಗುವುದರ ಜತೆಗೆ ತಮ್ಮ ಕುಟುಂಬ ಹಾಗೂ ನೆರೆಹೊರೆಯವನ್ನೂ ಜಾಗೃತ ಮಾಡಬೇಕು. ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗದೇ, ಅಂಕಪಟ್ಟಿ ಹೊರತಾಗಿ ನಮ್ಮ ಜೀವನ ರೂಪಿಸಿಕೊಳ್ಳುವ ಕೌಶಲ್ಯಭರಿತ ಶಿಕ್ಷಣ ಪಡೆಯುವಂತಾಗಬೇಕು. ಮನೆಯಿಂದಲೇ ಪರಿಸರ ಜಾಗೃತಿ ಮೂಡಬೇಕು. ನಮ್ಮ ಮನೆ, ನಮ್ಮ ಮನಸ್ಸು ಸ್ವಚ್ಛವಾಗಿದ್ದರೆ ಪರಿಸರವೂ ಸ್ವಚ್ಛವಾಗಿರಲಿದೆ ಎಂದರು.
ನಾವುಗಳು ಪರಿಸರದ ಮೇಲೆ ದೌರ್ಜನ್ಯ ಮಾಡುತ್ತಾ ಹೋದಂತೆ ಮುಂದಿನ ದಿನಗಳಲ್ಲಿ ಭೂಮಂಡಲದಲ್ಲಿ ಮನುಷ್ಯ ಬದುಕುವ ಪರಿಸ್ಥಿತಿ ಕಷ್ಟಸಾಧ್ಯವಾಗಲಿದೆ. ಆದ್ದರಿಂದ ಮಕ್ಕಳು ಪರಿಸರದ ಕಾಳಜಿ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ವಲಯ ಅರಣ್ಯಾಧಿಕಾರಿ ಉಷಾರಾಣಿ ಮಾತನಾಡಿ, ಪ್ರತಿ ವರ್ಷವೂ ಜೂನ್ 5ರಂದು ವಿಶ್ವ ಪರಿಸರ ದಿನ ಆಚರಣೆ ಮಾಡಲಾಗುತ್ತದೆ. ಅರಣ್ಯ ಇಲಾಖೆ ವತಿಯಿಂದಲೂ ಗಿಡಗಳನ್ನು ಬೆಳೆಸಿ ವಿತರಣೆ ಮಾಡಲಾಗುತ್ತದೆ. ಪರಿಸರ ಉಳಿಸಲು ಹೆಚ್ಚಿನ ಸಂಖ್ಯೆಯಲ್ಲಿ ಗಿಡಮರಗಳನ್ನು ಬೆಳೆಸಬೇಕು. ಪರಿಸರ ಸಂರಕ್ಷಣೆ ನಿರಂತರ ಕೆಲಸವಾಗಬೇಕು ಎಂದು ಅಭಿಪ್ರಾಯಪಟ್ಟರು.

ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಮಾತನಾಡಿ, ಪ್ರತಿಯೊಬ್ಬರು ಪರಿಸರಸ್ನೇಹಿ ಜೀವನ ನಡೆಸಬೇಕು. ಪ್ರಕೃತಿ ಹಾಳು ಮಾಡಿದರೆ ಮನುಷ್ಯ ಜೀವನ ನಡೆಸಲು ಸಾಧ್ಯವಿಲ್ಲ. ಪ್ಲಾಸ್ಟಿಕ್ ಬಳಕೆ ದೂರಮಾಡಿ ಬಟ್ಟೆ ಬ್ಯಾಗ್ ಬಳಸಬೇಕು ಎಂದು ಕಿವಿಮಾತು ಹೇಳಿದರು.
ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಹವಾಮಾನ ವೈಪರಿತ್ಯಾದಿಂಗಾಗಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಪರಿಸರ ಪ್ರಜ್ಞೆ ಹಾಗೂ ಪ್ರಾಯೋಗಿಕ ಮಾರ್ಗದರ್ಶನ ನೀಡಿ, ಪರಿಸರ ಕಾಳಜಿ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು.
ಪರಿಸರ ಅಧಿಕಾರಿ ಈ.ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಜನಸಂಖ್ಯಾ ಸ್ಪೋಟ, ನಗರೀಕರಣ, ಕೈಗಾರೀಕರಣ ಹೆಚ್ಚಳ, ಮನುಷ್ಯನ ಹಸ್ತಕ್ಷೇಪದಿಂದಾಗಿ ಜೀವ ವೈವಿಧ್ಯತೆ ಹಾಳಾಗಿದೆ. ಹಾಗಾಗಿ ನಮ್ಮ ಜೀವನಶೈಲಿಯು ಪರಿಸರ ಸ್ನೇಹಿಯಾಗಿರಬೇಕು ಎಂದು ಹೇಳಿದರು.
ಪರಿಸರ ಸಂರಕ್ಷಣೆ ಜಾಗೃತಿಗಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು, ಪರಿಸರ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ ಹಮ್ಮಿಕೊಂಡು ಪರಿಸರದ ಕುರಿತು ಜಾಗೃತಿ ಮೂಡಿಸಲಾಗಿದ್ದು, ಇಂದಿನ ವಿದ್ಯಾರ್ಥಿಗಳು ಪರಿಸರ ಯೋಧರಾಗಬೇಕಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪ ಪರಿಸರ ಅಧಿಕಾರಿ ರಾಜೇಶ್ ಸೇರಿದಂತೆ ವಿವಿಧ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.
ಚಿತ್ರಕಲೆ, ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಚಿತ್ರಕಲೆ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ವಿಶ್ವ ಪರಿಸರ ದಿನಾಚರಣೆ-2024ರ ಘೋಷವಾಕ್ಯ “ಭೂ ಮರು ಸ್ಥಾಪನೆ, ಮರು ಭೂಮಿಕರಣ ಹಾಗೂ ಬರ ತಡೆಯುವಿಕೆ” ನಮ್ಮ ಭೂಮಿ ನಮ್ಮ ಭವಿಷ್ಯ ಸಂಬಂಧಿಸಿದಂತೆ ಚಿತ್ರದುರ್ಗ ನಗರ ವ್ಯಾಪ್ತಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಥಳದಲ್ಲಿಯೇ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಯನ್ನು ಜೂನ್ 7ರಂದು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಚಿತ್ರಕಲೆ ಸ್ಪರ್ಧೆ: 8ನೇ ತರಗತಿಯಲ್ಲಿ ಡಾನ್ ಬಾಸ್ಕೋ ಶಾಲೆಯ ರಿದಾ ಷರೀಪ್ (ಪ್ರಥಮ), ವಿದ್ಯಾವಿಕಾಸ ಶಾಲೆಯ ಹರ್ಷಿತ್ ಎನ್ ಬೇದ್ರೆ (ದ್ವಿತೀಯ), ಎಸ್‍ಜೆಎಂ ಸಿಬಿಎಸ್‍ಇ ಶಾಲೆಯ ಸಿ.ಅನ್ವಿತ (ತೃತೀಯ) ವಾಸವಿ ವಿದ್ಯಾ ಸಂಸ್ಥೆಯ ಎಸ್.ವಿನೀತ್ ಚಂದ್ರ (ನಾಲ್ಕನೇ) ಬಹುಮಾನ ಪಡೆದರು.
9ನೇ ತರಗತಿಯಲ್ಲಿ ವಿದ್ಯಾವಿಕಾಸ ವಿದ್ಯಾಸಂಸ್ಥೆಯ ಎಸ್.ಕೆ.ಸಂಪ್ರತಾ (ಪ್ರಥಮ), ಕೆ.ಕೆ.ನ್ಯಾಷನಲ್ ಶಾಲೆಯ ಎ.ಪವನ್ (ದ್ವಿತೀಯ) ಅನುಪಮ ಇಂಟರ್ ನ್ಯಾಷನಲ್ ಶಾಲೆಯ ಎಂ.ದೇವರಾಜ್ (ತೃತೀಯ) ಎಸ್‍ಜೆಎಂ ಆಂಗ್ಲ ಮಾಧ್ಯಮ ಶಾಲೆಯ ಟಿ.ತೃಪ್ತಿ (ನಾಲ್ಕನೇ) ಬಹುಮಾನ ಪಡೆದರು.
10ನೇ ತರಗತಿಯಲ್ಲಿ ಎಸ್‍ಜೆಎಂ ಸಿಬಿಎಎಸ್‍ಇ ಶಾಲೆಯ ಸಿ.ಜೀವಿತಾ (ಪ್ರಥಮ), ಸಿ.ಭಾರತಿ (ದ್ವಿತೀಯ), ವಿದ್ಯಾವಿಕಾಸ ವಿದ್ಯಾಸಂಸ್ಥೆಯ ರಾಮ್ ಚರಣ್ (ತೃತೀಯ) ಜ್ಞಾನ ಭಾರತಿ ಶಾಲೆಯ ಎಂ ಶೋಭಾ (ನಾಲ್ಕನೇ) ಬಹುಮಾನ ಪಡೆದರು.
ಪ್ರಬಂಧ ಸ್ಪರ್ಧೆ: 8ನೇ ತರಗತಿಯಲ್ಲಿ ಎಸ್‍ಜೆಎಂ ಆಂಗ್ಲ ಮಾಧ್ಯಮ ಶಾಲೆಯ ಟಿ.ಮೌಲ್ಯಶ್ರಿ (ಪ್ರಥಮ), ಶ್ರೀ ವಾಸವಿ ಕನ್ನಡ ಮಾಧ್ಯಮ ಶಾಲೆಯ ಆರ್.ಬೃಂದಾ (ದ್ವೀತಿಯ), ಕೆ.ಕೆ.ನ್ಯಾಷನಲ್ ಶಾಲೆಯ ಎಂ.ಶುಭಶ್ರೀ (ತೃತೀಯ) ವಿದ್ಯಾವಿಕಾಸ ವಿದ್ಯಾಸಂಸ್ಥೆಯ ಬಿ.ವಿ.ಬಿಂದು (ನಾಲ್ಕನೇ) ಬಹುಮಾನ ಪಡೆದರು.
9ನೇ ತರಗತಿಯಲ್ಲಿ ಸಂಪಿಗೆ ಸಿದ್ದೇಶ್ವರ ಶಾಲೆಯ ಯಶಸ್ವಿನಿ (ಪ್ರಥಮ) ಕೆ.ಕೆ.ನ್ಯಾಷನಲ್ ಶಾಲೆಯ ಮದಿಹ ಫಾತಿಮಾ (ದ್ವೀತಿಯ) ಎಸ್‍ಜೆಎಂ ಸಿಬಿಎಸ್‍ಇ ಶಾಲೆಯ ಸಿ.ಎಸ್.ಹಿತಾಶ್ರೀ (ತೃತೀಯ) ಅನುಮಪ ಇಂಟರ್ ನ್ಯಾಷನಲ್ ಶಾಲೆಯ ಸಿ.ರುಕ್ಮೀಣಿ (ನಾಲ್ಕನೇ) ಬಹುಮಾನ ಪಡೆದರು.
10ನೇ ತರಗತಿಯಲ್ಲಿ ವಿದ್ಯಾವಿಕಾಸ ವಿದ್ಯಾಸಂಸ್ಥೆಯ ವಿ.ಜಾನವಿ (ಪ್ರಥಮ) ಎಸ್‍ಜೆಎಂ ಸಿಬಿಎಸ್‍ಇ ಶಾಲೆಯ ಎ.ಎಂ.ಸುಖಿತಾ (ದ್ವಿತೀಯ) ಕೆ.ಕೆ.ನ್ಯಾಷನಲ್ ಶಾಲೆಯ ಎ.ಉಮೇಸ್ನಾ (ತೃತೀಯ) ಬೃಹನ್ಮಠ ಶಾಲೆಯ ಪಿ.ಸಿ.ಬಿಂದು (ನಾಲ್ಕನೇ) ಬಹುಮಾನ ಪಡೆದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page