ವಿ.ವಿ ಸಾಗರ ನೀರಾವರಿ ಯೋಜನೆ ಆಧುನೀಕರಣಕ್ಕೆ 740 ಕೋಟಿ ಮಂಜೂರು…

by | 17/08/23 | ಜನಧ್ವನಿ

ಹಿರಿಯೂರು :-

ವಿ.ವಿ ಸಾಗರ ನೀರಾವರಿ ಯೋಜನೆ ಆಧುನೀಕರಣಕ್ಕೆ 740 ಕೋಟಿ ಮಂಜೂರು…

ಏಷಿಯನ್ ಅಭಿವೃದ್ಧಿ ಬ್ಯಾಂಕ್ ಮೂಲಕ 740 ಕೋಟಿ ರೂ. ವೆಚ್ಚದಲ್ಲಿ ವಾಣಿ ವಿಲಾಸ ಸಾಗರ ಜಲಾಶಯ, ನಾಲೆಗಳ ಆಧುನೀಕರಣ, ಹನಿ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಇದರಿಂದ ಪ್ರಸ್ತುತ 29 ಸಾವಿರ ಎಕರೆ ಪ್ರದೇಶಕ್ಕೆ ದೊರಕು ತ್ತಿರುವ ನೀರಾವರಿ ಸೌಲಭ್ಯ 45 ಸಾವಿರ ಎಕರೆ ಪ್ರದೇಶಕ್ಕೆ ಏರಿಕೆಯಾಗಲಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ನಗರದ ಭದ್ರಾ ಮೇಲ್ದಂಡೆ ಯೋಜನೆ ಕಚೇರಿ ಸಭಾಂಗಣದಲ್ಲಿ ಬುಧವಾರ ಎಷಿಯನ್ ಅಭಿವೃದ್ಧಿ ಬ್ಯಾಂಕ್ ನೆರವಿನಿಂದ ವಾಣಿ ವಿಲಾಸ ಸಾಗರ ನಿರಾವರಿ ಯೋಜನೆ ಆಧುನಿಕರಣ ಹಾಗೂ ನಿರ್ವಹಣೆ ಕುರಿತು ಜರುಗಿದ ಸಭೆಯ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದ ಅತ್ಯಂತ ಹಳೆಯದಾದ, ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಜಿಲ್ಲೆಯ ವಾಣಿವಿಲಾಸ ಸಾಗರ ಜಲಾಶಯವನ್ನು ಕೇಂದ್ರ ಪುರಸ್ಕೃತ ಸಪೋರ್ಟ್ ಫಾರ್ ಇರಿಗೇಷನ್ ಮಾಡ್ರನೈಜೇಷನ್ ಪ್ರೋಗ್ರಾಮ್ (ಎಸ್‍ಐಎಮ್‍ಪಿ) ಅಡಿ ಕೈಗೊಳ್ಳಲು ರಾಜ್ಯ ಸರ್ಕಾರ ಗುರುತಿಸಿದ್ದು, ಕೇಂದ್ರ ಜಲ ಆಯೋಗವು ಈ ಯೋಜನೆಯನ್ನು ಏಷಿಯನ್ ಡೆವಲಪ್‍ಮೆಂಟ್ ಬ್ಯಾಂಕ್ ಅನುದಾನದಡಿ ನಿರ್ವಹಿಸಲಿದೆ.

ಇದರಡಿ 115 ವರ್ಷಗಳಷ್ಟು ಹಳೆಯದಾದ ವಾಣಿವಿಲಾಸ ಸಾಗರ ಅಣೆಕಟ್ಟಿನ ದುರಸ್ಥಿ ಹಾಗೂ ನಾಲಾಗಳ ಆಧುನೀಕರಣ ಕೈಗೊಳ್ಳಲಾಗುವುದು. ಕಾಲುವೆ ನೀರಾವರಿ ಬದಲಿಗೆ ಹನಿ ನೀರಾವರಿ ಪದ್ದತಿ ಅಳವಡಿಸಿಕೊಳ್ಳಲಾಗುವುದು.

ಯೋಜನೆಗೆ ಏಷಿಯನ್ ಅಭಿವೃದ್ಧಿ ಬ್ಯಾಂಕ್ ಸಕಾರಾತ್ಮವಾಗಿ ಸ್ಪಂದಿಸಿದೆ. 129 ಕಿ.ಮೀ. ಉದ್ದದ ಕಾಲುವೆಗಳ ಆಧುನೀಕರಣಗೊಳಿಸುವುದರ ಜೊತೆಗೆ, ಜಲಾನಯನ ಅಚ್ಚುಕಟ್ಟು ಪ್ರದೇಶದಲ್ಲಿ 600ಕ್ಕೂ ಹೆಚ್ಚು ಅಂರ್ತಜಲ ಮರುಪೂರಣ ಬಾವಿಗಳು ಹಾಗೂ 7 ಬ್ಯಾರೇಜ್‍ಗಳನ್ನು ಅಭಿವೃದ್ಧಿಗೊಳಿಸಲಾಗುವುದು.

ಹಿರಿಯೂರು ಪಟ್ಟಣದಲ್ಲಿ ಹಾದು ಹೋಗಿರುವ 3.ಕಿ.ಮೀ ತೆರದ ನಾಲಾವ್ಯವಸ್ಥೆಯನ್ನು, ಮುಚ್ಚಿದ ನಾಲಾ ವ್ಯವಸ್ಥೆಯಾಗಿ ಬದಲಾಯಿಸಲಾಗುವುದು.

ಇದರೊಂದಿಗೆ ಹೆಚ್ಚಿನ ಜನವಸತಿ ಇರುವ ಗ್ರಾಮಾಂತರ ಪ್ರದೇಶಗಳಲ್ಲಿ ಮುಚ್ಚಿದ ನಾಲಾ ವ್ಯವಸ್ಥೆ ನಿರ್ಮಿಸಲಾಗುವುದು.

ಜಲಾಶಯದಿಂದ ಹೊರಹೋಗುವ ನದಿ ಪಾತ್ರದಲ್ಲಿ ಅತಿವೃಷ್ಟಿಯಿಂದ ನೀರು ನಗರಕ್ಕೆ ನುಗ್ಗಿ ಅವಾಂತರ ಉಂಟಾಗಿತ್ತು.

ಇದರೊಂದಿಗೆ ನದಿಯಲ್ಲಿ ನೀರು ಪೋಲಾಗದಂತೆ ತಡೆಯಲು ತಡೆಗೋಡೆ ನಿರ್ಮಿಸಲಾಗುವುದು.

ವಾಣಿ ವಿಲಾಸ ಸಾಗರ ಅಣೆಕಟ್ಟಿನ ಮುಂಭಾಗದಲ್ಲಿನ 9 ಎಕರೆ ಜಾಗದಲ್ಲಿ ಕೆ.ಆರ್.ಎಸ್ ಮಾದರಿಯಲ್ಲಿ ಉದ್ಯಾನವನ ನಿರ್ಮಿಸಿ, ಸೌಂದರ್ಯಕರಣ ಮಾಡಲಾಗುವುದು. ಮಹಾರಾಣಿ ಕೆಂಪನಂಜಮ್ಮಣ್ಣಿ ವಾಣಿವಿಲಾಸ ಸನ್ನಿಧಾನ ಹಾಗೂ ಜಯಚಾಮರಾಜೇಂದ್ರ ಒಡೆಯರ್ ಅವರ ಪ್ರತಿಮೆಗಳನ್ನು ನಿರ್ಮಿಸಲಾಗುವುದು.

ಜಲಾಶಯದ ಹಿನ್ನೀರಿನಲ್ಲಿ ಜಲಕ್ರೀಡೆ ಅಭಿವೃದ್ಧಿಗೊಳಿಸಲು ಕೂಡ ಚಿಂತಿಸಲಾಗಿದೆ ಎಂದು ಅವರು ತಿಳಿಸಿದರು.

ಸ್ವಯಂಚಾಲನಾ ನಿರ್ವಹಣೆ:
ಕೇಂದ್ರ ಸಾಮಾಜಿಕ ನಾಯ್ಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಅವರು ಮಾತನಾಡಿ, ವಾಣಿವಿಲಾಸ ಸಾಗರ ಜಲಾಶಯದಲ್ಲಿ ಈಗಿರುವ ಸೋರುವಿಕೆಯನ್ನು ತಡೆಯುವುದರ ಜೊತೆಗೆ, ಕಾಲುವೆ ನೀರಾವರಿಯಲ್ಲಿ ನೀರು ಪೋಲಾಗುವುದನ್ನು ತಡೆಯಲು, ಮಾನವ ಚಾಲಿತ ಗೇಟ್‍ಗಳ ಬದಲಿಗೆ ಕೇಂದ್ರಿಕೃತ ಸ್ವಯಂಚಾಲನ ನಿರ್ವಹಣೆ ವ್ಯವಸ್ಥೆಯನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.

ವಾಣಿವಿಲಾಸ ಸಾಗರ ನೀರಾವರಿ ಯೋಜನೆ ಆಧುನೀಕರಣಕ್ಕೆ ರೂ.740 ಕೋಟಿಯನ್ನು ಏಷಿಯನ್ ಅಭಿವೃದ್ಧಿ ಬ್ಯಾಂಕ್ ಮಂಜೂರಾತಿ ನೀಡಿದೆ.

ಕೇಂದ್ರ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಜಲಾಶಯ ಹಾಗೂ ಅಚ್ಚುಕಟ್ಟು ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.

ಯೋಜನೆಯನ್ನು ಯಶಸ್ವಿಯಾಗಿ ಜಾರಿಮಾಡಲು ತಜ್ಞರ ಸಲಹೆ ಪಡೆಯಲಾಗುತ್ತಿದೆ.

ಏಷಿಯನ್ ಡೆವಲಪ್‍ಮೆಂಟ್ ಬ್ಯಾಂಕ್‍ನ ಟೀಮ್ ಲೀಡರ್, ನೀರಾವರಿ ಆಧುನೀಕರಣ ವಿಶೇಷಜ್ಞ ಲಂಡನ್‍ನ ಡೇನಿಯಲ್ ರೆನಾಲ್ಟ್ ಯೋಜನೆಯ ಕಾರ್ಯಸೂಚಿ ಸಿದ್ದಪಡಿಸಲಿದ್ದಾರೆ.

ಕೃಷಿ ಹಾಗೂ ಕೇಂದ್ರ ಜಲ ಆಯೋಗ ತಜ್ಞರು ಭೇಟಿ ನೀಡಿ ವಿವರವಾಗಿ ಅಧ್ಯಯನ ಮಾಡುತ್ತಿದ್ದಾರೆ.

ಯೋಜನೆಯಲ್ಲಿ ಹೆಚ್ಚಿನದಾಗಿ ಸೇರಿಸಬೇಕಾದ ಅಂಶಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹಾಗೂ ನಾನು ಸಲಹೆ ನೀಡಿದ್ದೇವೆ.

ವಿಸ್ತೃತ ಯೋಜನೆ ವರದಿಯನ್ನು ಸಿದ್ದಪಡಿಸುವಾಗ ಈ ಅಂಶಗಳನ್ನು ಅಳವಡಿಸಿಕೊಳ್ಳಲಾಗುವುದು.

ನೀರು ಪೋಲಾಗುವುದನ್ನು ತಡೆಯುವುದು. ಹನಿ ನೀರಾವರಿ ಪದ್ದತಿ ಅಳವಡಿಕೆ ಹಾಗೂ ಅಂತರ್ಜಲ ವೃದ್ಧಿಯ ಪ್ರಮುಖ ಮೂರು ಅಂಶಗಳನ್ನು ಗಮನದಲ್ಲಿ ಇರಿಸಿಕೊಂಡು ಯೋಜನೆ ರೂಪಿಸಲಾಗುತ್ತಿದೆ, ಅಲ್ಲದೆ ಬೆಳೆ ಪದ್ಧತಿ ನಿಗದಿಯ ಬಗ್ಗೆಯೂ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ, ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣ ಚಿತ್ತಯ್ಯ, ಎಡಿಬಿ ಟೀಮ್ ಲೀಡರ್, ನೀರಾವರಿ ಆಧುನೀಕರಣ ತಜ್ಞ ಡೇನಿಯಲ್ ರೆನಾಲ್ಟ್, ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಕೆ.ಎಂ.ಶಿವಪ್ರಕಾಶ್, ರಾಜ್ಯ ಸರ್ಕಾರ ಜಲ ನಿರ್ವಹಣಾ ಕೇಂದ್ರ ಬಿ.ಎಸ್.ರಾವ್ ಇಂಜಿಯರ್ ಎಂ.ಜಿ.ಶಿವಕುಮಾರ್, ನಿವೃತ್ತ ಮುಖ್ಯ ಇಂಜಿನಿಯರ್‍ಗಳಾದ ಚೆಲುವರಾಜ್, ಶಿವಕುಮಾರ್ ಸೇರಿಂದತೆ ಮತ್ತಿರರು ಇದ್ದರು. ಕೇಂದ್ರ ಜಲ ಆಯೋಗದ ಮುಖ್ಯ ಇಂಜಿನಿಯರ್ ಡೋರ್ಗೆ ಪಿ ಗ್ಯಾಂಬಾ, ಏಷಿಯನ್ ಅಭಿವೃದ್ಧಿ ಬ್ಯಾಂಕ್ ರಾಜೇಶ್ ಯಾದವ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page