ಚಿತ್ರದುರ್ಗ (ಕರ್ನಾಟಕ ವಾರ್ತೆ)ಫೆ.13:
ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ 2022-23ನೇ ಸಾಲಿಗೆ ಭಾರತೀಯ ಸೇನೆ, ಭದ್ರತಾ ಪಡೆ, ಪೊಲೀಸ್ ಸೇವೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ಉಚಿತ ವಸತಿಯುತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಫೆ.15 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್ಸೈಟ್ www.sw.kar.nic.in ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
========
ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...
0 Comments