ವ್ಯಸನ ಮುಕ್ತ ಸಮಾಜ ನಿರ್ಮಿಸಲು ವರ್ತಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ:ಆರ್ ಎಫ್ ದೇಸಾಯಿ

by | 03/12/23 | ಕಾನೂನು


ಚಳ್ಳಕೆರೆ: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಯುವ ಸಮೂಹ ಮಾದಕ ವ್ಯಸನಕ್ಕೆ ತುತ್ತಾಗುತ್ತಿದ್ದು ಇದರ ನಿರ್ಮೂಲನೆಗಾಗಿ ನಗರದ ಪೋಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಉದ್ದೇಶಿಸಿದ್ದು ಔಷಧಿ ಹಾಗೂ ಪುಸ್ತಕ ಮಳಿಗೆ ವ್ಯಾಪಾರಸ್ಥರು ಸಹಕರಿಸಬೇಕು ಎಂದು ವೃತ ನಿರೀಕ್ಷಕ ಆರ್ ಎಫ್ ದೇಸಾಯಿ ಮನವಿ ಮಾಡಿದರು.

ನಗರದ ಪೊಲೀಸ್ ಠಾಣೆಯಲ್ಲಿ ಔಷಧಿ ಅಂಗಡಿ ಪಂಚರ್ ಶಾಪ್ ಹಾಗೂ ಪುಸ್ತಕ ವ್ಯಾಪಾರಿಗಳ ಸಭೆ ನಡೆಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಕೆಲ ಸಾಮಾಜಿಕ ಜಾಲತಾಣಗಳ ಮತ್ತು ದುಷ್ಟ ಸ್ನೇಹಿತರ ಸಹವಾಸದಿಂದ ತಮ್ಮ ವಿದ್ಯಾಭ್ಯಾಸದ ಒತ್ತಡಗಳ ನಿವಾರಣೆಗಾಗಿ ಅತಿ ವೇಗವಾಗಿ ಮಾದಕ ವ್ಯಸನಗಳತ್ತ ಗಮನಹರಿಸುತ್ತಿದ್ದಾರೆ ಇದರಿಂದಾಗಿ ಸಾವು ನೋವುಗಳ ಪ್ರಕರಣ ಸೇರಿದಂತೆ ದುಷ್ಚಟಕ್ಕೆ ಬಲಿಯಾದವರ ಸಂಖ್ಯೆ ಹೆಚ್ಚಾಗುತ್ತಿದೆ ಇದನ್ನು ತಪ್ಪಿಸುವ ದೃಷ್ಟಿಯಿಂದ ಪೊಲೀಸ್ ಇಲಾಖೆ ನಿಯಮಗಳನ್ನು ಜಾರಿಗೊಳಿಸಲಿದ್ದು ವಿದ್ಯಾರ್ಥಿಗಳು ಪುಸ್ತಕ ಮಳಿಗೆಗಳಿಗೆ ಹಾಗೂ ಔಷಧಿ ಅಂಗಡಿಗಳಿಗೆ ಬಂದು ತಪ್ಪು ಶಾಹಿ ಕೇಳುವುದು  ವೈದ್ಯರ ಸಲಹೆ ಪಡೆಯದೆ ಮಾತ್ರೆಗಳನ್ನು ತೆಗೆದುಕೊಳ್ಳುವುದು ಇಂತಹ ಪ್ರಕರಣಗಳು ಹೆಚ್ಚಾಗಿದ್ದು ಪೋಷಕರೊಂದಿಗೆ ಬಂದರೆ ಮಾತ್ರ ವಿತರಿಸಬೇಕು ಅಂತಹ ಯುವಕರು ಅಥವಾ ವಿದ್ಯಾರ್ಥಿಗಳು ಕಂಡು ಬಂದಲ್ಲಿ ಕೂಡಲೇ ಪೊಲೀಸ್ ಠಾಣೆಗೆ ವಿಷಯ ತಿಳಿಸಬೇಕು ಅವರ ವಿರುದ್ಧ ಕ್ರಮ ಕೈಗೊಳ್ಳಲು ಸಹಕಾರಿಯಾಗುತ್ತದೆ ಎಂದರು.

ವಿದ್ಯಾರ್ಥಿ ಬುಕ್ ಸ್ಟೋರ್ ಮಾಲಿಕ ಕೀರ್ತಿ ಮಾತನಾಡಿ ವಿದ್ಯಾರ್ಥಿಗಳಿಗೆ ತಪ್ಪು ಶಾಹಿ ತರಲು ಶಾಲೆಗಳ ಶಿಕ್ಷಕರು ಹೇಳಿ ಕಳುಹಿಸುತ್ತಿದ್ದಾರೆ ಹೀಗಾಗಿ ಶಾಲೆಗಳ ಆಡಳಿತ ಮಂಡಳಿಗಳಿಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದಾಗ ಇಂತಹ ಪ್ರಕರಣಗಳನ್ನು ಮಟ್ಟ ಹಾಕಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಠಾಣೆಯ ಉಪನಿರೀಕ್ಷಕರಾದ ಧರ್ರೆಪ್ಪ ಶಿವರಾಜ್ ಬುಕ್ ಸ್ಟಾಲ್ ಮಾಲೀಕರಾದ ರವಿಚಂದ್ರ ಕೀರ್ತಿ ಫಣಿ ಸೇರಿದಂತೆ ಔಷಧಿ ಅಂಗಡಿಗಳ ಮಾಲೀಕರು ಪಂಚರ್ ಶಾಪ್ ಮಾಲೀಕರು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page