ಶಾಲಾ ಕಾಲೇಜು ಬಳಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

by | 31/01/24 | ಆರೋಗ್ಯ


ಚಿತ್ರದುರ್ಗ.ಜ.31: ಶಾಲಾ ಕಾಲೇಜು ಬಳಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಕಾನೂನಿನ ಸ್ಪಷ್ಟ ಉಲಂಘನೆಯಾಗಿದೆ. ತಂಬಾಕು ನಿಯಂತ್ರಣ ಕೋಶ ಅಧಿಕಾರಿಗಳು, ಸ್ಥಳೀಯ ಪೊಲೀಸರು ಹಾಗೂ ಶಾಲಾ ಕಾಲೇಜುಗಳ ಮುಖ್ಯಸ್ಥರು ಈ ಬಗ್ಗೆ ಗಮನಹರಿಸಿ, ಶಾಲಾ ಕಾಲೇಜುಗಳ ಬಳಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೆöÊಮಾಸಿಕ ಸಮನ್ವಯ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

18 ವರ್ಷದ ಒಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಶಾಲಾ ಮಕ್ಕಳು ಈ ಉತ್ಪನ್ನಗಳನ್ನು ಬಳಸದಂತೆ ಹೆಚ್ಚು ಜಾಗೃತಿ ವಹಿಸಬೇಕು. ನಿಯಮಗಳನ್ನು ಮೀರಿ ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಬೇಕು. ಮಕ್ಕಳು ಯುವ ಜನರಿಗೆ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮದ ಕುರಿತು ಜಾಗೃತಿ ಮೂಡಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಪ್ರಸಕ್ತ ತ್ರೆöÊಮಾಸಿಕ ಅವಧಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಶಾಲಾ ಕಾಲೇಜುಗಳಲ್ಲಿ 100 ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಒಟ್ಟು 60 ಶಾಲಾ ಕಾಲೇಜುಗಳನ್ನು ತಂಬಾಕು ಮುಕ್ತ ಎಂದು ಘೋಷಿಸಲಾಗಿದೆ. 111 ದಾಳಿಗಳನ್ನು ನಡೆಸಲಾಗಿದೆ. ಎಲ್ಲಾ ತಾಲ್ಲೂಕುಗಳಲ್ಲಿಯು ಸಮನ್ವಯ ಸಮತಿ ಸಭೆಗಳನ್ನು ನಡೆಸಲಾಗಿದೆ. ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ ಇದುವರೆಗೂ 4515 ಜನರು ಸಮಾಲೋಚನೆ ಹಾಗೂ ವಿವಿಧ ಸೇವೆಗಳನ್ನು ಪಡೆದಿದ್ದಾರೆ. ತಂಬಾಕು ಉತ್ಪನ್ನಗಳ ಬಳಕೆಯ ದಾಸರಾಗಿದ್ದ 334 ಜನರಿಗೆ ಚಿಕಿತ್ಸೆ ನೀಡಲಾಗಿದೆ. ಒಟ್ಟು 13 ಜನರು ತಂಬಾಕು ತ್ಯಜಿಸಿ ಆರೋಗ್ಯವಂತ ಜೀವನ ನಡೆಸುತ್ತಿದ್ದಾರೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿ ಡಾ.ಚಂದ್ರಶೇಖರ್ ವಿ ಕಂಬಾಳಿ ಮಠ ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವಿ.ಟಿ.ರೇಣುಪ್ರಸಾದ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೆಶಕ ರವಿಶಂಕರ್ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೆಶಕಿ ಭಾರತಿ ಬಣಕಾರ್, ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ.ನಾಗರಾಜ, ಪೌರಾಯುಕ್ತೆ ರೇಣುಕಾ, ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಪ್ರಭುದೇವ್.ವಿ.ಎಂ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page