ದಾವಣಗೆರೆ: ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಸೇರಿಸುವ ಜೊತೆ ಕಡ್ಡಾಯವಾಗಿ ಭೋದಿಸಬೇಕು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಅಭಿಪ್ರಾಯಪಟ್ಟಿದ್ದಾರೆ.
ನಗರದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಏರ್ಪಡಿಸಿದ್ದ ಶ್ರೀ ಭಗವದ್ಗೀತಾ ಅಭಿಯಾನ ರಾಜ್ಯಮಟ್ಟದ ಮಹಾ ಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು ಎನ್ನುವ ಚರ್ಚೆ ಹಿನ್ನೆಲೆಯಲ್ಲಿ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು.
ಪಠ್ಯದಲ್ಲಿ ಭಗವದ್ಗೀತೆ ಸೇರಿಸುವುದರ ಜೊತೆಗೆ ಮಕ್ಕಳಿಗೆ ಇದರ ಮಹತ್ವದ ಬಗ್ಗೆಯೂ ತಿಳಿಸಿಕೊಡುವ ಕೆಲಸ ಆಗಬೇಕು ಎಂದು ಹೇಳಿದರು.
ಪಠ್ಯದಲ್ಲಿ ಭಗವದ್ಗೀತೆ ಸೇರಿಸಲು ಸದ್ಯ ಚರ್ಚೆ ಶುರುವಾಗಿದೆ.ಚರ್ಚೆ ಬೆನ್ನಲ್ಲೇ ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು ಎಂದಿರುವ ಸ್ಪೀಕರ್ ಕಾಗೇರಿ ಬಿಜೆಪಿ ಪಕ್ಷ ಪಠ್ಯವನ್ನು ಕೇಸರೀಕರಣ ಮಾಡುತ್ತಿದೆ ಅನ್ನೋ ವಿವಾದದ ಮಧ್ಯೆಯೂ ಪ್ರಸ್ತಾಪಿಸಿದ್ದು, ಮುಂದೆ ಯಾವ ಸ್ವರೂಪ ಪಡೆಯುತ್ತದೆ ಎಂಬುದನ್ನು ಕಾದುನೋಡಬೇಕಿದೆ.
0 Comments