ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತರಲು ಆಂದೋಲನ -ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ

by | 27/09/23 | ಜನಧ್ವನಿ


ಚಿತ್ರದುರ್ಗ ಸೆ.27:
ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತು ವಿಶೇಷವಾಗಿ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಸಮೀಕ್ಷೆ ಕೈಗೊಳ್ಳಬೇಕು. ಮಕ್ಕಳು ಶಾಲೆಯಿಂದ ಹೊರಗುಳಿಯಲು ನಿಖರ ಕಾರಣಪತ್ತೆ ಹಚ್ಚಿ, ಪರಿಹಾರ ಕ್ರಮಗಳನ್ನು ಕೈಗೊಂಡು ಮಕ್ಕಳನ್ನು ಶಾಲೆಗೆ ಕರೆ ತರಲು ಆಂದೋಲನ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 2023ನೇ ಸಾಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ಪ್ರತಿಬಂಧ ಕಾಯ್ದೆ-1995 ಅಡಿ ಜರುಗಿದ 3ನೇ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 271 ಮಕ್ಕಳು ಶಾಲೆಯಿಂದ ಹೊರಗುಳಿದಿರುವುದು ಕಳವಳಕಾರಿ ಅಂಶವಾಗಿದೆ. ಇದರಲ್ಲಿ 40 ಮಕ್ಕಳು ಶಾಲೆಗೆ ದಾಖಲು ಆಗದೇ ಬಿಟ್ಟು ಹೋಗಿದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಮೀಕ್ಷೆಯಲ್ಲೂ 204 ಮಕ್ಕಳು ಶಾಲೆಯಿಂದ ಹೊರಗುಳಿದಿರುವುದು ಪತ್ತೆಯಾಗಿದೆ. ಹೀಗೆ ಶಾಲೆಯಿಂದ ಹೊರಗುಳಿದ ಮಕ್ಕಳು ಬಾಲ್ಯ ವಿವಾಹ, ಬಾಲ ಕಾರ್ಮಿಕ ಹಾಗೂ ಇತರೆ ದೌರ್ಜನ್ಯ ಪ್ರಕರಣ ಸಿಲುಕುವ ಸಂಭವಿರುತ್ತದೆ. ಇದು ಮಕ್ಕಳ ಭವಿಷ್ಯಕ್ಕೆ ಮಾರಕವಾಗಲಿದೆ. ಶಿಕ್ಷಣ ಇಲಾಖೆ ಸದ್ಯ ನಡೆಸಿರುವ ಶಾಲೆಯಿಂದ ಹೊರಗುಳಿದ ಮಕ್ಕಳ ವಿಶೇಷ ಸಮೀಕ್ಷೆ ವರದಿಯ ಜೊತೆಗೆ ಮತ್ತೊಮ್ಮೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಒಳಗೊಂಡು ಸಮೀಕ್ಷೆಯನ್ನು ಕೈಗೊಳ್ಳಬೇಕು. ಸಮೀಕ್ಷೆಯಲ್ಲಿ ಮಕ್ಕಳು ಯಾವ ಕಾರಣದಿಂದ ಶಾಲೆಯಿಂದ ಹೊರಗುಳಿದಿದ್ದಾರೆ. ಪೋಷಕರ ಸ್ಥಿತಿಗತಿ ಕುರಿತು ಸಮಗ್ರ ವರದಿಯನ್ನು ತಯಾರು ಮಾಡಬೇಕು. ಮುಖ್ಯವಾಗಿ ಇಂತಹ ಮಕ್ಕಳ ಪೈಕಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಮಕ್ಕಳ ಸಂಖ್ಯೆ ಎಷ್ಟಿದೆ ಎಂಬುದನ್ನು ನಿಖರವಾಗಿ ಪತ್ತೆ ಹಚ್ಚಬೇಕು. ಬಡತನ, ಆರೋಗ್ಯ ಹಾಗೂ ಇತರೆ ಕಾರಣಗಳಿಂದ ಮಕ್ಕಳು ಶಾಲೆ ಬರದಿದ್ದರೆ ಈ ಸಮಸ್ಯೆಗಳನ್ನು ಪರಿಹರಿಸಲು ಎಲ್ಲಾ ಇಲಾಖೆಗಳ ಸಹಕಾರವನ್ನು ಪಡೆದುಕೊಳ್ಳಬೇಕು. ಆರೋಗ್ಯ ಸಮಸ್ಯೆ ಕಾರಣದಿಂದ ಮಕ್ಕಳು ಶಾಲೆಯಿಂದ ಹೊರಗುಳಿದರೆ ಅವರಿಗೆ ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮದ ಅಡಿ ಸೂಕ್ತ ಚಿಕಿತ್ಸೆ ನೀಡಲು ಕ್ರಮಕೈಗೊಳ್ಳಬೇಕು ಎಂದರು.
ಮಕ್ಕಳಿಗೆ ಮನೆಯಲ್ಲಿ ತೊಂದರೆ ಇದ್ದರೆ ಅಂತಹವರನ್ನು ವಿದ್ಯಾರ್ಥಿ ನಿಲಯ ಅಥವಾ ವಸತಿ ಶಾಲೆಗಳಿಗೆ ದಾಖಲಿಸಬೇಕು. ಪೋಷಕರಿಗೆ ನರೇಗಾ ದಡಿ ಉದ್ಯೋಗ, ಇತರೆ ನಿಗಮ ಹಾಗೂ ಇಲಾಖೆಗಳ ಅಡಿ ವ್ಯಾಪರ ಮಾಡಲು ಸೂಕ್ತ ಸಹಾಯಧವನ್ನು ನೀಡಬೇಕು. ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಗೆ ಪೊಷಕರೊಂದಿಗೆ ದುಡಿಯಲು ತೆರಳುವ ಮಕ್ಕಳನ್ನು ಕಾರ್ಮಿಕ ಇಲಾಖೆಯಿಂದ ಪತ್ತೆ ಹಚ್ಚಬೇಕು. ಇಟ್ಟಿಗೆ ಬಟ್ಟಿ ಸೇರಿದಂತೆ ಇತರೆ ಸ್ಥಳಗಳಲ್ಲಿ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಮೆ ಮಾಡುತ್ತಿರುವುದನ್ನು ಪತ್ತೆ ಹಚ್ಚಲು ಧಿಡೀರ್ ದಾಳಿ ನಡೆಸಬೇಕು. ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ವಿದ್ಯಾರ್ಥಿ ನಿಲಯಗಳಲ್ಲಿ ಇಂತಹ ಮಕ್ಕಳಿಗೆ ಪ್ರವೇಶ ನೀಡಿ ವ್ಯಾಸಂಗಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಹೇಳಿದರು.

ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಕೆಗೆ ವಿಶೇಷ ಅಭಿಯಾನ
:

ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಇಲಾಖೆ ಜೊತೆಗೂಡಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿ ವೇತನಕ್ಕೆ ಹೆಚ್ಚು ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ವಿಶೇಷ ಅಭಿಯಾನವನ್ನು ಕೈಗೊಳ್ಳಬೇಕು. ಮುಖ್ಯವಾಗಿ ಖಾಸಗಿ ಶಾಲಾ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳ ಸಂಖ್ಯೆಯನ್ನು ಸಂಗ್ರಹಿಸಿ ಪ್ರತಿಯೊಬ್ಬ ವಿದ್ಯಾರ್ಥಿಯು ಅರ್ಜಿ ಸಲ್ಲಿಸುವಂತೆ ನೋಡಿಕೊಳ್ಳಬೇಕು. ಖಾಸಗಿ ಶಾಲೆಗಳಲ್ಲಿ ಡಾಟಾ ಎಂಟ್ರಿ ಆಪರೇಟರ್‍ಗಳನ್ನು ನೇಮಿಸಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಜಿ.ಪಂ. ಸಿಇಓ ಅವರು ಈ ಕುರಿತು ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆ ನಡೆಸುವಂತೆ ಸೂಚಿಸಿದರು.

ದೌರ್ಜನ್ಯ ತಡೆ ಅರಿವು
ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನಾಂಗದ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಅರಿವು ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಅರಿವು ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ದಿನಾಂಕದ ಕುರಿತು ವ್ಯಾಪಕ ಪ್ರಚಾರ ನೀಡಬೇಕು. ಜಿಲ್ಲಾಧಿಕಾರಿ, ಜಿ.ಪಂ. ಸಿಇಓ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳೂ, ತಾಲೂಕು ಮಟ್ಟದ ಅಧಿಕಾರಿಗಳೂ ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಂದಾಯ ಇಲಾಖೆ ಅಧಿಕಾರಿಗಳು, ಸೇರಿದಂತೆ ಆ ಭಾಗದ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್‍ಗಳು ಅರಿವು ಕಾರ್ಯಕ್ರಮದಲ್ಲಿ ತಪ್ಪದೇ ಭಾಗವಹಿಸಬೇಕು. ಅರಿವು ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ತಿಳಿಸಿದರು.

14 ದೌರ್ಜನ್ಯ ಪ್ರಕರಣ ದಾಖಲು:

ಪ್ರಸಕ್ತ ತ್ರೈಮಾಸಿಕ ಅವಧಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ದೌರ್ಜನ್ಯ ಪ್ರತಿಬಂಧಕ ಕಾಯ್ದೆಯಡಿ ಜಿಲ್ಲೆಯಲ್ಲಿ ಒಟ್ಟು 14 ಪ್ರಕರಣಗಳು ದಾಖಲಾಗಿವೆ. ಇವುಗಳ ಪೈಕಿ 6 ಪ್ರಕರಣಗಳ ತನಿಖೆ ಕಾರ್ಯ ಮುಗಿದು ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಲಾಗಿದೆ. 8 ಪ್ರಕರಣಗಳು ತನಿಖೆ ಹಂತದಲ್ಲಿವೆ. ನೊಂದವರಿಗೆ ಸೂಕ್ತ ಪರಿಹಾರ ನೀಡಲು ಎಲ್ಲಾ ಪ್ರಕರಣಗಳ ಪ್ರಾಥಮಿಕ ವರದಿಯನ್ನು ಸಮಾಜ ಕಲ್ಯಾಣ ಇಲಾಖೆಗೆ ಕಳುಹಿಸಿಕೊಡಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಸಭೆಯಲ್ಲಿ ಮಾಹಿತಿ ನೀಡಿದರು.

ಪರಿಹಾರ ಧನ ವಿತರಣೆ :

ಪ್ರಸಕ್ತ ತ್ರೈಮಾಸಿಕ ಅವಧಿಯಲ್ಲಿ ಒಟ್ಟು 35 ಪರಿಶಿಷ್ಟ ಜಾತಿ ಹಾಗೂ ಪಂಗಡದ ದೌರ್ಜನ್ಯ ಪ್ರಕರಣಗಳಲ್ಲಿ ಒಟ್ಟು 69 ಸಂತ್ರಸ್ತರಿಗೆ ಪರಿಹಾರಧನ ವಿತರಿಸಲಾಗಿದೆ. 35 ಪ್ರಕರಣಗಳಲ್ಲಿ 26 ಪರಿಶಿಷ್ಟ ಜಾತಿ ಹಾಗೂ 9 ಪರಿಶಿಷ್ಟ ವರ್ಗ ಸಂಬಂದಿಸಿದವುಗಳಾಗಿವೆ. ಆಗಸ್ಟ್ ಅಂತ್ಯದ ವೇಳೆಗೆ ಜಿಲ್ಲೆಯಲ್ಲಿ 84 ಪ್ರಕರಣಗಳು ಬಾಕಿ ಇದ್ದು, 9 ಪ್ರಕರಣಗಳು ಹೊಸದಾಗಿ ನ್ಯಾಯಲಾಯದಲ್ಲಿ ವಿಚಾರಣೆ ಬಂದಿವೆ. ಇದರಲ್ಲಿ 5 ಪ್ರಕರಣಗಳು ವಿಲೇವಾರಿ ಯಾಗಿದ್ದು 88 ಪ್ರಕರಣಗಳು ಬಾಕಿ ಇವೆ. ಪರಿಹಾರ ಧನ ವಿತರಿಸುವಲ್ಲಿ ಯಾವುದೇ ರೀತಿ ಅನುದಾನದ ಕೊರತೆ ಇಲ್ಲ ಎಂದು ಸಮಾಜ ಕಲ್ಯಾಣ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸಭೆಯಲ್ಲಿ ಮಾಹಿತಿ ನೀಡಿದರು.

ಕವಾಡಿಗರ ಹಟ್ಟಿಯಲ್ಲಿ ನಗರ ಆರೋಗ್ಯ ಕೇಂದ್ರ ಸ್ಥಾಪನೆ ಪ್ರಸ್ತಾವನೆ :

ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿ ಹಾಗೂ ನಗರಸಭೆ ನಿಧಿಯಡಿ ತಲಾ ರೂ.10 ಲಕ್ಷ ಪರಿಹಾರ ಧನವನ್ನು ವಿತರಿಸಲಾಗಿದೆ. ಕವಾಡಿಗರ ಹಟ್ಟಿಯಲ್ಲಿ ಹೊಸದಾಗಿ ಕುಡಿಯುವ ನೀರಿನ ಘಟಕ, ಪೈಪಲೈನ್ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ರೂ.4 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಮಗಾರಿಯೂ ಚಾಲನೆಯಲ್ಲಿದೆ. ಮೃತಪಟ್ಟ ಕುಟುಂಬದ ಅವಲಂಬಿತರಿಗೆ ಆದಿ ಜಾಂಬವ ನಿಗಮದಿಂದ ಕೃಷಿ ಭೂಮಿ ನೀಡಲು ಈಗಲಾಲೇ ಕ್ರಮ ಕೈಗೊಳ್ಳಲಾಗಿದೆ. ಕವಾಡಿಗರ ಹಟ್ಟಿಯಲ್ಲಿ ನಗರ ಆರೋಗ್ಯ ಕೇಂದ್ರ ಸ್ಥಾಪನೆಗೆ ಸರ್ಕಾರಕ್ಕೆ ಪ್ರಸ್ತವಾನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಿಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿ.ಪಂ.ಸಿಇಓ ಎಸ್.ಜೆ. ಸೋಮಶೇಖರ್, ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿದೇಶಕ ಬಿ.ಆನಂದ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೆಶಕಿ ಭಾರತಿ ಅರ್.ಬಣಕಾರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಓ.ಪರಮೇಶ್ವರಪ್ಪ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಡಿ.ಓ.ಮೊರಾರ್ಜಿ, ಗುಜ್ಜಾರಪ್ಪ, ಹೇಮಗೌಡ, ಓ.ಚಿನ್ನಪ್ಪ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

Latest News >>

ನಗರದ ನಗರಸಭೆಗೆ ಜಿಲ್ಲಾಧಿಕಾರಿ ವೆಂಕಟೇಶ್ ಭೇಟಿ ನಗರಸಭೆಯ ಆಯುಕ್ತರು,ಅಧಿಕಾರಿಗಳೊಂದಿಗೆ ಸಭೆ

ಹಿರಿಯೂರು: ಇದೀಗ ಪ್ರಸ್ತುತ ತಿಂಗಳು ಮಳೆಗಾಲ ಆಗಿರುವುದರಿಂದ ಹಲವಾರು ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದ್ದು, ನಗರದ ಜನರ ಉತ್ತಮ...

ಲಕ್ಕೇನಹಳ್ಳಿ: ಸ್ವಾಮಿತ್ವ ಯೋಜನೆಯ ಕುರಿತು ಗ್ರಾಮ ಸಭೆ ಗ್ರಾಮ ಪಂಚಾಯಿತಿಗೆ ಒಳಪಡುವ ಆಸ್ತಿಗಳಿಗೆ ಪಿ.ಆರ್.ಕಾರ್ಡ್ (ಹಕ್ಕುಪತ್ರ) ನೀಡುವ ಯೋಜನೆ

ಹಿರಿಯೂರು ಜೂ.21: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆ.ಜಿ.ಹಳ್ಳಿ ಹೋಬಳಿಯ ದಿಂಡಾವರ ಗ್ರಾಮ ಪಂಚಾಯ್ತಿ ವ್ಯಾಪ್ತಿಗೊಳಪಡುವ...

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಶೇ.75ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಿ

ಚಿತ್ರದುರ್ಗ ಜೂನ್.21: ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ಹಿರಿಯೂರು ತಾಲ್ಲೂಕಿನಲ್ಲಿ...

10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅಭಿಮತ ಮಾನಸಿಕ ಸದೃಢತೆ ಹಾಗೂ ಒತ್ತಡ ಮುಕ್ತ ಜೀವನಕ್ಕೆ ಯೋಗ ಸಹಕಾರಿ

ಚಿತ್ರದುರ್ಗ ಜೂನ್21: ಯೋಗ ದೈಹಿಕವಾಗಿ ಶಕ್ತಿ ಹಾಗೂ ಚೈತನ್ಯ ತುಂಬುವದರ ಜೊತೆಗೆ ಮಾನಸಿಕವಾಗಿ ಸಹ ಸದೃಢರನ್ನಾಗಿಸುತ್ತದೆ. ಇಂದಿನ ನಿತ್ಯದ...

ವಿದ್ಯಾರ್ಥಿಗಳು ಪ್ರತಿ ದಿನ ಯೋಗಾಸನ ಮಾಡುವುದು ಅಭ್ಯಾಸ ಮಾಡಿಕೊಳ್ಳಿ ಶ್ರೀ ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಂವೈಟಿ ಸ್ವಾಮಿ.

ನಾಯಕನಹಟ್ಟಿ:: ವಿದ್ಯಾರ್ಥಿಗಳು ಪ್ರತಿಯೊಬ್ಬರು ಯೋಗಾಸನ ಮಾಡುವುದು ರೂಡಿಸಿಕೊಂಡಾಗ ಮಾತ್ರ ಆರೋಗ್ಯವಂತರಾಗಿರಲು ಸಾಧ್ಯ. ಎಂದು ಶ್ರೀ...

ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: -ಮುಖ್ಯಮಂತ್ರಿ ಸಿದ್ದರಾಮಯ್ಯ

ಬಳ್ಳಾರಿ,ಜೂ.20 ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸೋಲಿನ ಹೊಣೆಯನ್ನು ನಾನೇ ಹೊರುವೆ: ಪರಾಜಿತ ಅಭ್ಯರ್ಥಿ ಬಿ ಎನ್ ಚಂದ್ರಪ್ಪ 

ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯು ಕಳೆದ ಹತ್ತು ವರ್ಷಗಳಿಂದ ನನ್ನ ಕರ್ಮಭೂಮಿಯಾಗಿದ್ದು ಇಲ್ಲಿನ ಜನತೆ ಮನೆ ಮಗನಂತೆ ನೋಡಿದ್ದು ಒಂದು ಬಾರಿ...

ಜಾತಿನಿಂದನೆ, ದೌರ್ಜನ್ಯಗಳಂತಹ ಆರೋಪಗಳನ್ನು ಪರಿಶಿಷ್ಟರು ಕೈಬಿಟ್ಟಾಗ ಮಾತ್ರ ಸಮಾಜದಲ್ಲಿಬೆಳೆಯಲು ಸಾಧ್ಯ: ನೂತನ ಸಂಸದರಾದ ಗೋವಿಂದ ಕಾರಜೋಳ

ಹಿರಿಯೂರು: ಜಾತಿ ನಿಂದನೆ ಮತ್ತು ದಲಿತ ದೌರ್ಜನ್ಯಗಳಂತಹ ವೃತಾ ಆರೋಪಗಳನ್ನು ಪರಿಶಿಷ್ಟರು ಕೈ ಬಿಟ್ಟಾಗ ಮಾತ್ರ ಸಮಾಜದಲ್ಲಿ ಬೆಳೆಯಲು ಸಾಧ್ಯ...

ಚಿಕ್ಕಾಲಘಟ್ಟ ಗ್ರಾಮದಲ್ಲಿ ಜನಸ್ಪಂದನ ಕಾರ್ಯಕ್ರಮ ಶೀಘ್ರ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯ ಭರವಸ -ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ

ಚಿತ್ರದುರ್ಗ. ಜೂನ್.19: ಚಿಕ್ಕಾಲಘಟ್ಟ ಗ್ರಾಮದ ಬಹುದಿನಗಳ ಬೇಡಿಕೆಯಾದ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಈಗಾಗಲೇ ಜಾಗ...

ಜನಪ್ರತಿನಿಧಿಗಳು ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸೋಣ – ಸಂಸದ ಗೋವಿಂದ ಕಾರಜೋಳ

ಚಿತ್ರದುರ್ಗ. ಜೂನ್19: ಚುನಾಯಿತ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಉತ್ತಮವಾಗಿ ಕಾರ್ಯನಿರ್ವಹಿಸಿ ಕೇಂದ್ರ ಹಾಗೂ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page