ಮೈಸೂರು ; ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್ಗೆ ಎದೆನೋವು ಕಾಣಿಸಿಕೊಂಡಿದ್ದು ನಿನ್ನೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎನ್.ಮಹೇಶ್ಗೆ ಆ್ಯಂಜಿಯೋಗ್ರಾಮ್ ಮಾಡಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಸದ್ಯ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಈ ಸಂಬಂಧ ಶಾಸಕ ಎನ್.ಮಹೇಶ್ ಪುತ್ರ ಅರ್ಜುನ್ ಮಾತನಾಡಿದ್ದು, ನಮ್ಮ ತಂದೆ ಆರೋಗ್ಯವಾಗಿದ್ದಾರೆ. ನಿನ್ನೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಬಂದೆವು. ವೈದ್ಯರು ಆ್ಯಂಜಿಯೋಗ್ರಾಮ್ ಮಾಡಿದ್ದು, ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿದ್ದಾರೆ. ಎರಡು ದಿನ ವಿಶ್ರಾಂತಿಗೆ ಸೂಚಿಸಿದ್ದಾರೆ, ಯಾವುದೇ ಆತಂಕವಿಲ್ಲ ಎಂದು ಹೇಳಿದ್ದಾರೆ.
0 Comments