ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭರವಸೆ ಜೂನ್ ವೇಳೆಗೆ ರೈಲ್ವೇ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ: ವರ್ಷಾಂತ್ಯಕ್ಕೆ ನೇರ ರೈಲು ಕಾಮಗಾರಿ ಆರಂಭ

by | 26/02/24 | ಸುದ್ದಿ


ಚಿತ್ರದುರ್ಗ. ಫೆ.26:
ದಾವಣಗೆರೆ ರಸ್ತೆ ಹಾಗೂ ಕವಾಡಿಗರಹಟ್ಟಿ ಹತ್ತಿರದ ಹೊಳಲ್ಕೆರೆ ರಸ್ತೆಯಲ್ಲಿ ರೈಲ್ವೇ ಸೇತುವೆ ನಿರ್ಮಾಣಕ್ಕೆ ಯೋಜನೆ ರೂಪಿಸಿ, ರೈಲ್ವೇ ಮಂಡಳಿ ಅನುಮೋದನೆಗಾಗಿ ಕಳುಹಿಸಿ ಕೊಡಲಾಗಿದೆ. ಮಂಡಳಿ ಶೀಘ್ರವೇ ಯೋಜನೆಗೆ ಅನುಮೋದನೆ ನೀಡಲಿದ್ದು, ಜೂನ್ ವೇಳೆಗೆ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಕೆ.ಸಿ.ವಿರೇಂದ್ರಪಪ್ಪಿ ಭರವಸೆ ವ್ಯಕ್ತಪಡಿಸಿದರು.
ಅಮೃತ ಭಾರತ ರೈಲ್ವೇ ನಿಲ್ದಾಣ ಪುನರಾಭಿವೃದ್ಧಿ ಯೋಜನೆಯಡಿ ರೂ.41 ಸಾವಿರ ಕೋಟಿ ವೆಚ್ಚದಲ್ಲಿ ದೇಶದ ವಿವಿಧ 554 ಪ್ರಮುಖ ರೈಲ್ವೇ ನಿಲ್ದಾಣಗಳ ಪುನರಾಭಿವೃದ್ಧಿ, 1500 ಮೇಲು ಹಾಗೂ ಕೆಳಸೇತುವೆಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಈ ಯೋಜನೆಗೆ ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಅಮೃತ ಯೋಜನೆ ಅಡಿ ರೂ.11.78 ಕೋಟಿ ವೆಚ್ಚದಲ್ಲಿ ಚಿತ್ರದುರ್ಗ ನಗರದ ರೈಲ್ವೇ ನಿಲ್ದಾಣವನ್ನೂ ಸಹ ನವೀಕರಣಸಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಇದರ ಅಂಗವಾಗಿ ನಗರದ ರೈಲ್ವೇ ನಿಲ್ದಾಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಾಸಕ ವೀರೇಂದ್ರ ಪಪ್ಪಿ ಪಾಲ್ಗೊಂಡು ಮಾತನಾಡಿದರು.
ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೇ ಯೋಜನೆ ಭೂ ಸ್ವಾಧೀನ ಪ್ರಕ್ರಿಯೆ ಸಂಪೂರ್ಣಗೊಳ್ಳುವ ಹಂತದಲ್ಲಿದೆ. ವರ್ಷಾಂತ್ಯದ ವೇಳೆ ನೇರ ರೈಲ್ವೇ ಯೋಜನೆಯ ಕಾಮಗಾರಿ ಆರಂಭವಾಗಲಿದೆ. ಚಿತ್ರದುರ್ಗ ರೈಲ್ವೇ ನಿಲ್ದಾಣ ಪುನರಾಭಿವೃದ್ಧಿ ಯೋಜನೆ ಜಿಲ್ಲೆಗೆ ಪ್ರಧಾನಿಗಳ ಅತಿದೊಡ್ಡ ಕೊಡುಗೆಯಾಗಿದೆ. ಸುಮಾರು ರೂ.12 ಕೋಟಿ ವೆಚ್ಚದಲ್ಲಿ ನವೀಕರಣ ಕಾಮಗಾರಿ ಮಾಡಲಾಗುವುದು. ನೈರುತ್ಯ ರೈಲ್ವೇ ವಿಭಾಗದಲ್ಲಿ ಒಟ್ಟು 31 ರೈಲ್ವೇ ನಿಲ್ದಾಣಗಳನ್ನು ಅಭಿವೃದ್ಧಿ ಮಾಡಲಾಗುತ್ತಿದ್ದು, ಚಿತ್ರದುರ್ಗ ಇದರಲ್ಲಿ ಸೇರಿರುವುದಕ್ಕೆ ಸಂತಸವಾಗಿದೆ. ಚಿತ್ರದುರ್ಗದಲ್ಲಿ ರೈಲ್ವೇ ಹಾಸ್ಪಿಟಲ್ ಸಹ ನಿರ್ಮಿಸಲು ಬೇಡಿಕೆಯ ಕೂಗು ಕೇಳಿ ಬಂದಿದೆ. ಮುಂದಿನ ದಿನಗಳಲ್ಲಿ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ರೈಲ್ವೇ ಆಸ್ಪತ್ರೆ ನಿರ್ಮಾಣಕ್ಕೆ ಪ್ರಯತ್ನ ಪಡುವುದಾಗಿ ಶಾಸಕ ವೀರೇಂದ್ರ ಪಪ್ಪಿ ತಿಳಿಸಿದರು.
ನವೀನ ಆಧುನಿಕ ರೈಲ್ವೇ ನಿಲ್ದಾಣ : ಚಿತ್ರದುರ್ಗ ರೈಲ್ವೇ ನಿಲ್ದಾಣವನ್ನು, ಅಮೃತ ಭಾರತ ರೈಲ್ವೇ ನಿಲ್ದಾಣ ಪುನರಾಭಿವೃದ್ಧಿ ಯೋಜನೆಯಡಿ ನವೀನ ಹಾಗೂ ಆಧುನಿಕರಣಗೊಳಿಸಲಾಗುತ್ತಿದೆ. ರೂ. 11.78 ಕೋಟಿ ವೆಚ್ಚದಲ್ಲಿ ವಿಶಾಲವಾದ ರೈಲ್ವೇ ಬುಕಿಂಗ್ ಕಚೇರಿ, ಪ್ಲಾಟ್ ಫಾರಂ, ಸುಸಜ್ಜಿತವಾದ ಶೌಚಾಲಯಗಳು, ಶಿಶು ಆರೈಕೆ ಕೇಂದ್ರ, ವಿಐಪಿ ಲಾಂಜ್, ಮಹಿಳೆಯರಿಗೆ ವಿಶ್ರಾಂತಿ ಕೊಠಡಿಗಳು, ಕೋರಿಯರ್ ಹಾಗೂ ಪಾರ್ಸೆಲ್ ಸೇವಾ ಕೇಂದ್ರಗಳು, ಕ್ಲೋಕ್ ರೂಮ್, ಕಫೆಟೇರಿಯಾ, ಪ್ರತ್ಯೇಕ ಪಾಕಿರ್ಂಗ್ ವ್ಯವಸ್ಥೆ, ಸಿಸಿಟಿವಿ, ಉಚಿತ ವೈಫೈ, ಎಟಿಎಂ ಕೇಂದ್ರಗಳ ನಿರ್ಮಾಣದ ಜೊತೆಗೆ ವಿಕಲಚೇತನರು ಹಾಗೂ ಹಿರಿಯ ನಾಗರೀಕರ ಸ್ನೇಹಿಯಾಗಿ ರೈಲ್ವೇ ನಿಲ್ದಾಣ ಅಭಿವೃದ್ಧಿಯಾಗಲಿವೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೀಡಿದ ಸಂದೇಶ ಭಾಷಣವನ್ನು ಈ ಸಂದರ್ಭದಲ್ಲಿ ಪ್ರಸಾರ ಮಾಡಲಾಯಿತು. ಈ ವೇಳೆ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಕೇಂದ್ರದ ರೈಲ್ವೇ, ಸಂವಹನ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷವ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ರಾಜ್ಯಗಳ ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಂತ್ರಿಗಳು, ಸಂಸದರು, ಶಾಸಕರು, ಜನಪ್ರತಿನಿಧಿಗಳು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ನವ ಭಾರತೀಯ ರೈಲ್ವೇ ಕಲ್ಪನೆ ಕುರಿತು ಮಕ್ಕಳಿಗಾಗಿ ಏರ್ಪಡಿಸಲಾದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.
ವೇದಿಕೆ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ನೈರುತ್ಯ ರೈಲ್ವೇ ಮುಖ್ಯ ಇಂಜಿನಿಯರ್ ಟಿ.ವಿ.ಭೂಷಣ್, ಹಿರಿಯ ವಿಭಾಗೀಯ ಇಂಜಿನಿಯರ್ ಬಿ.ರೋಹನ್ ಡೊಂಗ್ರೇ, ಡಿಎಸ್‍ಓ ಚಂದ್ರಶೇಖರ್ ಕಂಬಾಳಿ ಮಠ್, ಮುಖಂಡರಾದ ಮುರುಳಿ, ನಗರಸಭಾ ಸದಸ್ಯರಾದ ವೆಂಕಟೇಶ, ತಾರಕೇಶ್ವರಿ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.

Latest News >>

ಮಹಾವೀರರ ತತ್ವ ಆದರ್ಶಗಳು ಸರ್ವಕಾಲಕ್ಕೂ ಪ್ರಸ್ತುತ: ತಹಸಿಲ್ದಾರ್ ರೆಹಾನ್ ಪಾಷ

ಚಳ್ಳಕೆರೆ: ನಗರದ ತಾಲೂಕು ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ಜೈನ ಸಮುದಾಯ ವತಿಯಿಂದ ಇಂದು ಮಹಾವೀರ  ಜಯಂತಿಯನ್ನು ಲೋಕಸಭಾ ಚುನಾವಣೆ...

ಕುಡಿಯುವ ನೀರಿನ ಯೋಜನೆಯ ಜಾಕ್ ವೆಲ್ ನ ಸ್ಥಳಕ್ಕೆಮುಖ್ಯಕಾರ್ಯದರ್ಶಿಯಾದ ಅಂಜುಮ್ ಫರ್ವೇಜ್ ಭೇಟಿ

ಹಿರಿಯೂರು: ವಾಣಿವಿಲಾಸ ಸಾಗರದ ಐಮಂಗಲ ಹಾಗೂ ಹೊಳಲ್ಕೆರೆ ತಾಲ್ಲೂಕಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜಾಕ್ ವೆಲ್ ಸ್ಥಳಕ್ಕೆ...

ಸಡಗರ ಸಂಭ್ರಮದಿಂದ ಜರುಗಿದ ಶ್ರೀರಾಮನವಮಿ- ಶ್ರೀರಾಮ ಭಕ್ತರಿಂದ ಪಾನಕ. ಕೋಸಂಬರಿ ವಿತರಣೆ- ವಿಶೇಷ ಪೂಜೆ.

ಚಳ್ಳಕೆರೆ ಜನಧ್ವನಿ ವಾರ್ತೆ ಏ17. ಶ್ರೀರಾಮನವಮಿ ಅಂಗವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಶ್ರೀರಾಮ ಜಪದೊಂದಿಗೆ ಸಡಗರ ಸಂಭ್ರಮದಿಂದ...

ವಾಣಿ ವಿಲಾಸ ಸಾಗರ ಜಲಾಶಯದ ನೀರನ್ನ ಖಾಲಿ ಮಾಡವಂತ ಹುನ್ನಾರ ನಡೆಸಲಾಗಿದೆ ಎಂಬುದಾಗಿ ರೈತ ಮುಖಂಡ :ಕಸವನಹಳ್ಳಿ ರಮೇಶ್ ಆರೋಪ

ಹಿರಿಯೂರು: ವಾಣಿವಿಲಾಸ ಸಾಗರ ಜಲಾಶಯದ ನೀರು ಖಾಲಿ ಮಾಡಲು ಹುನ್ನಾರ ನಡೆಸಲಾಗಿದೆ ಎಂಬುದಾಗಿ ರೈತ ಮುಖಂಡ ಹಾಗೂವಾಣಿವಿಲಾಸ ಸಾಗರ ಹಾಗೂ ಭದ್ರಾ...

ಬೆಳೆವಿಮೆ ಪರಿಹಾರದಲ್ಲಿ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ.ಮರುಪರಿಶೀಲಿಸಿ ಹೆಚ್ಚುವರಿ ಪರಿಹಾರ ಕೊಡಿಸಲು ಪ್ರಯತ್ನ: ಎಚ್.ಎನ್.ಶಿವೇಗೌಡ

ಹಿರಿಯೂರು: ಬೆಳೆವಿಮೆ ಪರಿಹಾರದಲ್ಲಿ ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ. ಮರುಪರಿಶೀಲಿಸಿ ಹೆಚ್ಚುವರಿ ಪರಿಹಾರ ಕೊಡಿಸಲು...

ಯುಗಾದಿ ಹಬ್ಬಕ್ಕೆ ಬಂದವರಿಗೆ ಬೆಂಗಳೂರಿಗೆ ತೆರಳಲು ಬಸ್ಸಿಗಾಗಿ ಸಾರಿಗೆ ಬಸ್ಸು ನಿಲ್ದಾಣದಲ್ಲಿ ಕಾಯುತ್ತಿರುವ ಪ್ರಯಾಣಿಕರು.

ಚಳ್ಳಕೆರೆ ಏ11 ಯುಗಾದಿ ಹಬ್ಬ ಮುಗಿಸಿಕೊಂಡು ಮತ್ತೆ ಬೆಂಗಳೂರಿಗೆ ತೆರಳಲು ಸಾರಿಗೆ ಬಸ್ಸುಗಳ ವ್ಯವಸ್ಥೆಯಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ....

ರಂಜಾನ್ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಅಗತ್ಯವಸ್ತುಗಳ ಖರೀದಿ ಬಲು ಜೋರು..

ಚಳ್ಳಕೆರೆ ಚಳ್ಳಕೆರೆ ಏ.8 ಅಗತ್ಯ ವಸ್ತುಗಳ ಬೆಳೆ ಏರಿಕೆ , ಬಿಸಿಲಿನ ತಾಪ ಹಾಗೂ ಬರಗಾಲದ ನಡುವೆಯೂ ರಂಜಾನ್ ಹಾಗೂ ಯುಗಾದಿ ಹಬ್ಬದ ಖರೀದಿ ಭರಾಟೆ...

ಯುಗಾದಿ ಹಾಗೂ ರಂಜಾನ್ ಹಬ್ಬಗಳನ್ನು‌ ಶಾಂತಿ‌ಸೌಹಾರ್ಧತೆಯಿಂದ ಆಚರಿಸಿ ಠಾಣಾಧಿಕಾರಿ ಕೆ.ಕುಮಾರ್.

ಚಳ್ಳಕೆರೆ ಏ.8 ಈ ಬಾರಿ ರಂಜಾನ್ ಹಾಗೂ ಯುಗಾದಿ ಹಬ್ಬಗಳು ಒಟ್ಟಾಗಿ ಬಂದಿದ್ದು, ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸಬೇಕು ಎಂದು ಠಾಣಾಧಿಕಾರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page