ಶಿಕ್ಷಕರು ಪಾಠ ಬೋಧನೆಯ ಜತೆಗೆ ಸಹ ಪಠ್ಯ ಚಟುವಟಿಕೆಗಳ ಮೂಲಕ ಆಸಕ್ತಿಯಿಂದ ಮಕ್ಕಳಿಗೆ ಪಾಠ ಮಾಡಬೇಕಿದೆ. ಇದರಿಂದ ವಿದ್ಯಾರ್ಥಿಗಳ ಗಮನ ಕೇಂದ್ರೀಕರಿಸಲು ಸಾಧ್ಯ ಎಂದು ಶಾಸಕ ಟಿ.ರಘುಮೂರ್ತಿ

by | 23/11/22 | ಸಾಮಾಜಿಕ

ಚಳ್ಳಕೆರೆ.
ಶಿಕ್ಷಕರು ಪಾಠ ಬೋಧನೆಯ ಜತೆಗೆ ಸಹ ಪಠ್ಯ ಚಟುವಟಿಕೆಗಳ ಮೂಲಕ ಆಸಕ್ತಿಯಿಂದ ಮಕ್ಕಳಿಗೆ ಪಾಠ ಮಾಡಬೇಕಿದೆ. ಇದರಿಂದ ವಿದ್ಯಾರ್ಥಿಗಳ ಗಮನ ಕೇಂದ್ರೀಕರಿಸಲು ಸಾಧ್ಯ ಎಂದು ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು.
ನಗರದ ಕುವೆಂಪು ಪ್ರೌಢಶಾಲಾ ಸಭಾಂಗಣದಲ್ಲಿ ಶಿಕ್ಷಕರ ಕಲ್ಯಾಣ ನಿಧಿ,ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಸಾಕ್ಷರತವಯಿಂದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಸಹಶಿಕ್ಷಕರಿಗೆ ಆಯೋಜಿಸಿದ್ದ ಸಹ ಪಠ್ಯ ಚುಟುವಟಿಕೆ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ, ಪ್ರಭಂದ ಸ್ಪರ್ಧೆ,ರಸ ಪ್ರಶ್ನೆ ಸ್ಪರ್ಧಾ ಕಾರ್ಯಕ್ರಮಗನ್ನು ಆಯೋಜನೆಮಾಡಿ ಗೆದ್ದವರಿಗೆ ಬಹುಮಾನ ವಿತರಣೆ ಮಾಡುತ್ತಿದ್ದು .ಈಗ ಶಾಲೆಯ ಶಿಕ್ಷಕರಿಗೂ ಸಹ ಸ್ಪರ್ಧೆ ಆಯೋಜನೆ ಮಾಡಲಾಗಿದ್ದು. ಶಿಕ್ಷಕರು ಹೆಚ್ಚು ಓದುವ, ಅಭ್ಯಾಸ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಪಠ್ಯದ ಜತೆಗೆ ಸಹ ಪಠ್ಯ ಚಟುವಟಿಕೆಗಳನ್ನು ಕಲಿಸುವ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಲು ಇಂತಹ ಸ್ಪರ್ಧೆಗಳು ಸಹಕಾರಿಯಾಗುತ್ತದೆ.
ಸದಾ ಅಧ್ಯಯನಶೀಲರಾಗುವುದರಿಂದ ಮಾನಸಿಕ ವಿಕಾಸನವಾಗುತ್ತದೆ. ಸಮಾಜ ಆಗು-ಹೋಗುಗಳ ಅರಿವು ಮೂಡುತ್ತದೆ ಎಂದು ಹೇಳಿದರು.
ಬಿಇಒ ಕೆ.ಎಸ್.ಸುರೇಶ್ ಮಾತನಾಡಿ ಶಿಕ್ಷಕರು ನಿರಂತರ ವಿದ್ಯಾರ್ಥಿ. ಕಲಿಕೆಯೇ ಬಂಡವಾಳ. ಇದರಲ್ಲಿ ನಿರಂತರತೆಯನ್ನು ಕಾಯ್ದುಕೊಳ್ಳುವುದರಿಂದ ಹೆಚ್ಚು ಕ್ರಿಯಾಶೀಲತೆ ಬೆಳೆಯುತ್ತದೆ. ಇದಕ್ಕೆ ಸಹ-ಪಠ್ಯ ಚಟುವಟಿಕೆ ಸ್ಪರ್ಧೆಗಳೂ ಸಹಾಯಕವಾಗಿದ್ದು, ಇವುಗಳಲ್ಲಿ ಶಿಕ್ಷಕರು ಭಾಗವಹಿಸುವುದರಿಂದ ದೆಹಿಕ, ಮಾನಸಿಕ ಜ್ಞಾನವೂ ವದ್ಧಿಸಲಿದ್ದು, ಪಾಠ ಭೋದನೆಗೂ ಸಹಕಾರಿಯಾಗುತ್ತದೆ ಭಾಗವಹಿಸಿ ಶಿಕ್ಷಕರಲ್ಲಿ 42 ಶಿಕ್ಷಕರು ಸ್ಪರ್ಧೆಯಲ್ಲಿ ಆಯ್ಕೆಯಾದವರಿಗೆ ಶಿಕ್ಷಣ ಕಲ್ಯಾಣ ವತಿಯಿಂದ ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾತನಾಡಿದರು.
ನಗರಸಭೆ ಅಧ್ಯಕ್ಷೆ ಸುಮಕ್ಕ, ಉಪಾಧ್ಯಕ್ಷೆ ಮಂಜುಳ, ಕುವೆಂಪು ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶ್ರೀರಾಮರೆಡ್ಡಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ರಾಜುಕುಮಾರ್, ಪ್ರಾಥಮಿಕಶಾಲಶಿಕ್ಷಕರ ಸಂಘದ ಅಧ್ಯಕ್ಷ ಮಹಾಲಿಂಗಪ್ಪ, ಕಾರ್ಯದರ್ಶಿ ಎಸ್.ಟಿ.ತಿಪ್ಪೇಸ್ವಾಮಿ ಇತರರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *